ಕಾಲುಬಾಯಿ ಜ್ವರ; ಪರಿಹಾರ ವಿತರಣೆ
ಚಿಕ್ಕಬಳ್ಳಾಪುರ: ಬರಪೀಡಿತವಾಗಿದ್ದರೂ ಕೃಷಿ ಜತೆ ಪಶುಪಾಲನೆ ವೃತ್ತಿಯನ್ನು ವ್ಯವಸ್ಥಿತವಾಗಿ ಅಳವಡಿಸಿಕೊಳ್ಳುವ ಮೂಲಕ ಸ್ವಾಭಿಮಾನಿ ಬದುಕು ಕಟ್ಟಿಕೊಂಡ ರೈತ ಸಮುದಾಯವನ್ನು ಹೊಂದಿದ ಹೆಮ್ಮೆಯ ಜಿಲ್ಲೆ ನಮ್ಮದು ಎಂದು ಶಾಸಕ ಡಾ.ಕೆ. ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಪಶುವೈದ್ಯ ಇಲಾಖೆ ಹಾಗೂ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಸಹಯೋಗದೊಂದಿಗೆ ನಗರದ ಪಶುವೈದ್ಯ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಜಾನುವಾರುಗಳ ಕಾಲುಬಾಯಿ ಜ್ವರ ರೋಗದ ಅರಿವು ಹಾಗೂ ರೋಗದಿಂದ ಮರಣ ಹೊಂದಿದ ಜಾನುವಾರುಗಳ ಮಾಲೀಕರಿಗೆ ಪರಿಹಾರ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ದಶಕಗಳಿಂದ ಈ ಕಾಲುಬಾಯಿ ರೋಗ ಜಾನುವಾರುಗಳನ್ನು ಕಾಡುತ್ತಿದೆ. ಮಳೆಗಾಲ ಹಾಗೂ ಚಳಿಗಾಲದಲ್ಲಿ ಕಂಡು ಬರುವ ಈ ರೋಗಕ್ಕೆ ಪ್ರತಿ ಆರು ತಿಂಗಳಿಗೊಮ್ಮೆ ರೋಗ ನಿರೋಧಕ ಚುಚ್ಚು ಮದ್ದು ಕೊಡಿಸುವುದು ಪರಿಹಾರ. ಈ ಸಂದರ್ಭದಲ್ಲಿ ಹಾಲು ಉತ್ಪಾದನೆ ಕಡಿಮೆಯಾಗಬಹುದು. ಆದರೆ ಇದು ತಾತ್ಕಾಲಿಕ, ಧೀರ್ಘ ಕಾಲದ ಅನುಕೂಲ ಗಮನದಲ್ಲಿಟ್ಟುಕೊಂಡು ರೈತರು ಇದನ್ನು ಸಹಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಜಿಪಂ ಅಧ್ಯಕ್ಷ ಚಿನ್ನಪ್ಪ, ಪಶು ವೈದ್ಯ ಇಲಾಖೆ ಉಪ ನಿರ್ದೇಶಕ ಪ್ರಕಾಶ್, ಡಾ.ವಿ. ಗೋವಿಂದಪ್ಪ, ಕೋಮುಲ್ ಹೆಚ್ಚುವರಿ ವ್ಯವಸ್ಥಾಪಕ ಪಾಪೇಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

