ಕೋಲಾರ

ಇಂದು ಅದ್ಧೂರಿ ವಾಲ್ಮೀಕಿ ಜಯಂತಿ

Published On :

ಚಿಕ್ಕಬಳ್ಳಾಪುರ: ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ವತಿಯಿಂದ ಡಿ.11ರಂದು ವಾಲ್ಮೀಕಿ ಮಹರ್ಷಿಯ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.
ಜಿಲ್ಲಾಡಳಿತದ ವತಿಯಿಂದ ಕಳೆದ ತಿಂಗಳು ವಾಲ್ಮೀಕಿ ಜಯಂತಿಯನ್ನು ಆಚರಿಸುವ ಸಂದರ್ಭದಲ್ಲಿ ಮುನಿಸಿಕೊಂಡಿದ್ದ ವಾಲ್ಮೀಕಿ ಜನಾಂಗದ ಮುಖಂಡರು ಕಾರ್ಯಕ್ರಮದಿಂದ ದೂರ ಉಳಿದಿದ್ದರು. ಅಲ್ಲದೇ ಜಿಲ್ಲಾಡಳಿತ ನಿರ್ಲಕ್ಷ್ಯದಿಂದ ಕೇವಲ ಕಾಟಾಚಾರಕ್ಕೆ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದರು. ಇದರ ನಡುವೆ ಜಿಲ್ಲಾಡಳಿತ ಮುಖಂಡರ ವಿರೋಧವನ್ನು ಗಣನೆಗೆ ತೆಗೆದುಕೊಳ್ಳದೇ ಸರ್ಕಾರಿ ಆದೇಶದಂತೆ ಅರ್ಥಪೂರ್ಣವಾಗಿ ಆಚರಿಸಿತ್ತು. ಈಗ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ವಾಲ್ಮೀಕಿ ಜನಾಂಗದ ಮುಖಂಡರು ಸಂಘಟಿತರಾಗಿ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲು ಶ್ರಮಿಸಿದ್ದಾರೆ. ನಗರದ ಶ್ರೀ ಶನಿಮಹಾತ್ಮ ಸ್ವಾಮಿ ದೇವಾಲಯದ ಬಳಿ ಇರುವ ಮಾರುತಿ ಶೋರೂಮ್ ಪಕ್ಕದಲ್ಲಿ ಕಾರ್ಯಕ್ರಮ ನಡೆಸಲು ಸುಸಜ್ಜಿತ ವೇದಿಕೆ ನಿರ್ಮಿಸಿದ್ದಾರೆ.
11 ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ನಗರದ ಪ್ರವಾಸಿ ಮಂದಿರದಿಂದ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಸುಮಾರು 40 ಕ್ಕೂ ಹೆಚ್ಚು ಹೂವಿನ ಪಲ್ಲಕ್ಕಿಗಳ ಮೆರವಣಿಗೆ ಮತ್ತು ಕಲಾ ತಂಡಗಳ ಮೆರವಣಿಗೆ ನಡೆಯಲಿದೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾಂದ ಸ್ವಾಮೀಜಿ ವಹಿಸಲಿದ್ದು, ಉದ್ಘಾಟನೆಯನ್ನು ರಾಜ್ಯ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಡಾ.ಕೆ. ಸುಧಾಕರ್ ವಹಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರ ಅನಾವರಣವನ್ನು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮಾಜಿ ನಾಯಕ ವಿ.ಎಸ್. ಉಗ್ರಪ್ಪ ಹಾಗೂ ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಬಿ. ಶ್ರೀರಾಮುಲು ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್, ಜಿಲ್ಲೆಯ ಶಾಸಕರು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಜನಾಂಗದ ಅಭಿವೃದ್ಧಿಗಾಗಿ ಶ್ರಮಿಸಿದ ವ್ಯಕ್ತಿಗಳನ್ನು ಸನ್ಮಾನಿಸಲಾಗುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.