ಕೋಲಾರ

ಪ್ರತಿ ಪ್ರಜೆಗೂ ಗೌರವದಿಂದ ಬದುಕುವ ಹಕ್ಕಿದೆ

Published On :

ಕ.ಪ್ರ.ವಾರ್ತೆ ,  ಕೋಲಾರ ,  ಡಿ.10
ಪ್ರತಿಯೊಬ್ಬ ಪ್ರಜೆಯೂ ಘನತೆ ಗೌರವದಿಂದ ಬದುಕುವ ಹಕ್ಕು ಇದೆ. ಕೆಲವೊಂದು ಸಮಯದಲ್ಲಿ ನಮ್ಮ ಹಕ್ಕುಗಳಿಗೆ ಕುಂದು ಉಂಟಾದಾಗ ತೊಂದರೆಗಳನ್ನು ನಿವಾರಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವನ್ನು ರಚಿಸಲಾಗಿದ್ದು ಪ್ರಜೆಗಳು ಸುಪ್ರೀಂ ಕೋರ್ಟ್ ಸೂಚನೆಯಿಂತೆ ಸರ್ಕಾರ ರಚನೆ ಮಾಡಿರುವ ಮಾನವ ಹಕ್ಕುಗಳ ಆಯೋಗದ ಪ್ರಯೋಜನ ಪಡೆಯಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್. ರೇಣುಕಾಪ್ರಸಾದ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಮನುಷ್ಯ ಹುಟ್ಟಿನಿಂದ ಸಾಯುವವರೆಗೂ ಹಕ್ಕು ಮತ್ತು ಕಾನೂನುಗಳಿದ್ದು, ಇದನ್ನು ತಿಳಿದುಕೊಳ್ಳುವುದು ಅತ್ಯಗತ್ಯ ಎಂದ ಅವರು, ಕಾನೂನುಗಳನ್ನು ತಿಳಿದುಕೊಂಡಾಗ ಮಾತ್ರ ನಮ್ಮ ಹಕ್ಕುಗಳನ್ನು ಪ್ರತಿಪಾದಿಸಲು ಅನುಕೂಲವಾಗುತ್ತದೆ ಎಂದರು.
ಜಿಲ್ಲಾಧಿಕಾರಿ ಡಿ.ಕೆ. ರವಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾನೂನು ಮತ್ತು ಹಕ್ಕುಗಳು ಒಂದೇ ನ್ಯಾಣದ ಎರಡು ಮುಖಗಳಾಗಿರುವುದರಿಂದ ಇವೆರಡನ್ನು ಪೋಷಿಸಿ ಬೆಳಸಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ತಿಳಿಸಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಟಿ.ಎಂ. ಶಿವಣ್ಣ, ಜಿಲ್ಲಾ ಅಪರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಕಿಣಿಕೇರಿ, ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಬಿ.ವಿ. ರೇಣುಕಾ ಮಾತನಾಡಿದರು.
ಹಿರಿಯ ವಕೀಲ ಸಿ.ಕೋದಂಡಪ್ಪ ಉಪನ್ಯಾಸ ನೀಡಿ ಮಾತನಾಡಿ, 19ನೇ ಶತಮಾನದಲ್ಲಿ ಮಾನಷ್ಯನನ್ನು ಮಾನಷ್ಯನಾಗಿ ಕಾಣುತ್ತಿರಲಿಲ್ಲ, ಜಾತಿ, ವರ್ಣ, ಆರ್ಥಿಕ ಮುಗ್ಗಟ್ಟು, ಶಕ್ತಿಶಾಲಿ ರಾಷ್ಟ್ರಗಳ ದೌರ್ಜನ್ಯದಿಂದ ಇಡೀ ಪ್ರಚಂಚದಲ್ಲಿದ್ದ ಜನಸಾಮಾನ್ಯರು ತಲ್ಲಣಗೊಂಡಿದ್ದರು ಎಂದು ತಿಳಿಸಿದರು.
ಪ್ರಪಂಚದಲ್ಲಿ ನಡೆದ 2ನೇ ಮಹಾಯುದ್ದದಿಂದ ಮನುಕುಲ ಸರ್ವನಾಶವನ್ನು ಕಂಡು ಎಚ್ಚೇತ್ತುಕೊಂಡ ಮುಂದುವರೆದ ರಾಷ್ಟ್ರ, ಮುಂದುವರೆಯುತ್ತಿದ್ದ ರಾಷ್ಟ್ರಗಳು ಮತ್ತು ಹಿಂದುಳಿದ ರಾಷ್ಟ್ರಗಳು ಸಭೆ ಸೇರಿ ಮನುಕುಲದ ರಕ್ಷಣೆಗೆ ಕೆಲವು ಕರಡುಗಳನ್ನು ತಯಾರು ಮಾಡಲಾಯಿತು ಎಂದು ತಿಳಿಸಿದರು.
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಪಿ. ನಾರಾಯಣಸ್ವಾಮಿ ಸ್ವಾಗತಿಸಿ, ವಕೀಲ ಎಂ. ಮುನೇಗೌಡ ವಂದಿಸಿ,  ಕೆ.ಎಸ್. ನಾಗವೇಣಿ ನಿರೂಪಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.