ಸಣ್ಣಪುಟ್ಟ ಕೆಲಸಕ್ಕೆ ಮರಳುಸಾಗಿಸುವವರ ತಡೆಯದಿರಿ
ಬಂಗಾರಪೇಟೆ: ಮರಳು ದಂದೆಯಾಗಿಸಿ ಕೊಂಡಿರುವವರಿಗೆ ತಾಲೂಕು ಆಡಳಿತ ಸಿಂಹಸ್ವಪ್ನವಾಗಿ ಕೆಲಸ ಮಾಡಲಿ, ಅದು ಬಿಟ್ಟು ಸಣ್ಣಪುಟ್ಟ ಕೆಲಸ ಹಾಗೂ ಮನೆಗಳ ನಿರ್ಮಾಣಕ್ಕೆ ಟ್ರ್ಯಾಕ್ಟರ್ಗಳಲ್ಲಿ ಮರಳು ಸಾಗಿಸುವವರನ್ನು ಯಾವುದೇ ಕಾರಣಕ್ಕೂ ಪೊಲೀಸರು ಮತ್ತು ತಹಸೀಲ್ದಾರ್ ತಡೆಯಬಾರದು ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದ್ದಾರೆ.
ತೊಪ್ಪನಹಳ್ಳಿ ಅರಣ್ಯ ಇಲಾಖೆ ಅತಿಥಿ ಗೃಹದಲ್ಲಿ ಆನೆಗಳ ದಾಳಿಯಿಂದ ಹಾನಿಗೊಳಗಾಗಿರುವ ರೈತರಿಗೆ ಸರ್ಕಾರಿಂದ ಮಂಜೂರಾಗಿದ್ದ ಹತ್ತು ಲಕ್ಷ ರು.ಗಳ ಪರಿಹಾರ ಚೆಕ್ಗಳ ವಿತರಣಾ ಸಮಾರಂಭದಲ್ಲಿ ಶಾಸಕರು ಮಾತನಾಡಿದರು. ಈ ಪ್ರದೇಶದ ಹತ್ತಾರು ರೈತರು ವಿನಾಕಾರಣ ಮನೆಗಳ ನಿರ್ಮಾಣಕ್ಕೆ ಕಾಮಗಾರಿಗಳಿಗೆ ಟ್ರ್ಯಾಕ್ಟರ್ಗಳಲ್ಲಿ ಮರಳು ಸಾಗಿಸಿದರೆ ಪೊಲೀಸರು ತಡೆಯುತ್ತಾರೆ. ಇದಕ್ಕೆ ತಹಸೀಲ್ದಾರ್ ಉಷಾ ದುಪ್ಪಟ್ಟು ದಂಡ ವಿಧಿಸುತ್ತಿದ್ದಾರೆ. ಇದರಿಂದ ನಮಗೆ ತುಂಬಾ ತೊಂದರೆ ಉಂಟಾಗುತ್ತಿದೆ ಎಂದು ಶಾಸಕರಿಗೆ ದೂರು ನೀಡಿದರು.
ಈ ಹಿನ್ನೆಲೆಯಲ್ಲಿ ತಾಲೂಕು ಆಡಳಿತದ ಕಾರ್ಯವೈಖರಿ ಬಗ್ಗೆ ಅಸಮಾಧಾನಗೊಂಡ ಶಾಸಕ ನಾರಾಯಣಸ್ವಾಮಿ ಮರಳು ತೆಗೆಯುವುದರಿಂದ ಅಂತರ್ಜಲ ಮಟ್ಟ ಕುಸಿಯುತ್ತದೆ ನಿಜ, ಮರಳು ಮಾರಾಟ ಮಾಡಲು ಬೆಂಗಳೂರಿಗೆ ಸಾಗಿಸುವ ವ್ಯಕ್ತಿಗಳನ್ನು ತಡೆದು ಪ್ರಕರಣ ದಾಖಲಿಸಿ, ಆ ಬಗ್ಗೆ ನಾನೇನೂ ಮಾತನಾಡುವುದಿಲ್ಲ. ಆದರೆ ಸರ್ಕಾರವೇ ಆಶ್ರಯ ಮನೆಗಳನ್ನು ಮಂಜೂರು ಮಾಡಿದೆ. ಅವರು ಮನೆಗಳನ್ನು ಮರಳಿಲ್ಲದೆ ಹೇಗೆ ಕಟ್ಟಲು ಸಾಧ್ಯ. ಮರಳು ಸಂಗ್ರಹಿಸಿ ಅಕ್ರಮ ಸಾಗಾಟ ಮಾಡಿದಲ್ಲಿ ಕ್ರಮ ಕೈಗೊಳ್ಳಿ. ಮನೆಗಳನ್ನು ಕಟ್ಟಲು ಸಾಗಿಸುವವರನ್ನು ಯಾವುದೇ ಕಾರಣಕ್ಕೂ ತಡೆಯಬೇಡಿ ಎಂದು ಸೂಚನೆ ನೀಡಿದರು. ಸಭೆಯಲ್ಲಿದ್ದ ತಹಸೀಲ್ದಾರ್ ಉಷಾ ಶಾಸಕರ ಆದೇಶಕ್ಕೆ ಮೌನ ಸಮ್ಮತಿ ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

