ಕೋಲಾರ

ಪದವಿದರ ಮತದಾರರ ನೋಂದಣಿಗೆ ಮನವಿ

Published On :

ಕೆಜಿಎಫ್: ಆಜ್ಞೇಯ ಪದವಿಧರ ಕ್ಷೇತ್ರ 5 ಜಿಲ್ಲೆಗಳ ವ್ಯಾಪ್ತಿಯಲ್ಲಿ ಮುಂಬರುವ ಜೂನ್ನಲ್ಲಿ ಪದವಿಧರ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಈಗಾಗಲೇ ಮತದಾರರ ನೋಂದಣಿ ಪ್ರಕ್ರಿಯೆ ಆಗಸ್ಟ್ ತಿಂಗಳಿಂದ ಪ್ರಾರಂಭವಾಗಿದೆ. ಮೊದಲ ಹಂತದ ಮತದಾರರ ನೋಂದಣಿಯಲ್ಲಿ 5 ಜಿಲ್ಲೆಗಳನ್ನು ಒಳಗೊಂಡು ಸುಮಾರು 25,918 ಮತದಾರರು ನೋಂದಣಿಯಾಗಿದ್ದಾರೆ.
ಅದರಲ್ಲಿ ಕೊಲಾರ ಜಿಲ್ಲೆಯ ಸುಮಾರು 3,486 ಮತದಾರರು ಸೇರ್ಪಡೆಯಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಶಿಯೋಗಸ್ವಾವು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜನವರಿ ಮೊದಲ ವಾರದಲ್ಲಿ ಮತದಾರರ ಪಟ್ಟಿ ಘೋಷಣೆಯಾಗಲಿದೆ. ಕೆಜಿಎಫ್ಗೆ ಸಂಬಂಧಪಟ್ಟಂತೆ 218 ಮತದಾರರು  ಸೇರ್ಪಡೆಯಾಗಿದ್ದಾರೆ ಎಂದರು.
4 ರಾಜ್ಯಗಳಲ್ಲಿ ಬಿಜೆಪಿ ಜಯ ಸಾಧಿಸಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಕೇಂದ್ರದ ಯುಪಿಎ ಸರ್ಕಾರದ ದುರಾಡಳಿತ ನೋಡಿ ಈ ತೀರ್ಮಾಣಕ್ಕೆ ಬಂದಿದ್ದಾರೆ. ರಾಜ್ಯದಲ್ಲೂ ಬಿಜೆಪಿ ಪ್ರಭಾವ ತೋರಲಿದೆ ಎಂದರು. ಮತ್ತೊಬ್ಬ ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಮಾತನಾಡಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಶಾಶ್ವತ ನೀರಾವರಿಗೆ ಆಗ್ರಹಿಸಿ ಹೋರಾಟಗಳು ನಡೆಯುತ್ತಿದ್ದು ಎತ್ತಿನಹೊಳೆ ಯೋಜನೆಯ ಹಿನ್ನಲೆಯಲ್ಲಿ ಇಲ್ಲಿನ 100 ಕಿ.ಮೀ. ದೂರದ ಮೇಕೆದಾಟಿನಲ್ಲಿ ಅಣೆಕಟ್ಟನ್ನು ಕಟ್ಟಿ ನೀರನ್ನು ಸಂಗ್ರಹಿಸಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಹರಿಸುವ ಕೆಲಸವನ್ನು ಸರ್ಕಾರ ಮಾಡಬೇಕಿದೆ ಎಂದು ಒತ್ತಾಯಿಸುತ್ತಿರುವುದಾಗಿ ತಿಳಿಸಿದರು. ಗೋಷ್ಠಿಯಲ್ಲಿ ನಗರ ಬಿಜೆಪಿ ಅಧ್ಯಕ್ಷ ಸುರೇಶ್ನಾರಾಯಣಕುಟ್ಟಿ, ಪ್ರಧಾನ ಕಾರ್ಯದರ್ಶಿ ಬಾಟಾ ಗೋಪಾಲ್, ಮೇಘನಾಥ್, ಮಹೇಶ್, ನಾಗಿ, ವೆಂಕಟೇಶ್, ಎಲ್. ರಮೇಶ್, ರವಿರೆಡ್ಡಿ ಇದ್ದರು.

ಅವ್ಯವಸ್ಥೆಯ ಆಗರ ರಾಣಿ ಚೆನ್ನಮ್ಮ ವಸತಿ ಶಾಲೆ
ಗೌರಿಬಿದನೂರು: ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಮುಖ್ಯವಾಹಿನಿಗೆ ಬರಲು ಕೋಟ್ಯಂತರ ರುಪಾಯಿ ಖರ್ಚು ಮಾಡುತ್ತಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳು ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದಾರೆ ಎನ್ನುವುದಕ್ಕೆ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಉದಾಹರಣೆ.
ಈ ವಸತಿ ಶಾಲೆ ಅವ್ಯವಸ್ಥೆಯ ಆಗರವಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅನ್ನದಲ್ಲಿ ಹುಳು, ಕೊಳೆತ ತರಕಾರಿ, ಕಳಪೆ ಮಟ್ಟದ ಬೇಳೆ, ಶೌಚಾಲಯ ವ್ಯವಸ್ಥೆ ಸರಿಯಿಲ್ಲ ಹೀಗೆ ಹತ್ತಾರು ಸಮಸ್ಯೆಗಳ ಬಗ್ಗೆ ತಮ್ಮ ಅಳನ್ನು ತೋಡಿಕೊಂಡಿದ್ದಾರೆ.
ಇಲ್ಲಿ ಶಾಲೆಯ ಮಕ್ಕಳೇ ಸ್ವಚ್ಛಗೊಳಿಸಬೇಕು, ಇಲ್ಲವಾದರೆ ಮಕ್ಕಳನ್ನು ಹಿಂಸಿಸುತ್ತಾರೆಂದು ವಿದ್ಯಾರ್ಥಿಗಳು ದೂರಿದ್ದು, ಈ ಬಗ್ಗೆ ಮೇಲ್ವಿಚಾರಕರನ್ನು ಪ್ರಶ್ನಿಸಿದರೆ ಇಲ್ಲಿನ ಸಿಬ್ಬಂದಿ ಸರಿಯಾಗಿ ಸ್ಪಂಧಿಸುವುದಿಲ್ಲ ಎಂದು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು.
ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು ಸೌಜನ್ಯಕ್ಕಾದರೂ ಭೇಟಿ ನೀಡುವುದಿಲ್ಲ ಹಾಗೂ ಮೇಲ್ವಿಚಾರಕರು ಅಪರೂಪದ ಅಥಿತಿಗಳಾಗಿದ್ದಾರೆಂದು ವಿದ್ಯಾರ್ಥಿಗಳು ದೂರಿದರು. ಮಕ್ಕಳು ತಿನ್ನುವ ಆಹಾರದಲ್ಲಿ ಪ್ರತಿ ನಿತ್ಯ ಹುಳು ಮತ್ತು ಕೂದಲು ಕಾಣಿಸುತ್ತಿದ್ದು, ಸಂಬಂಧಪಟ್ಟ ಮೇಲ್ವಿಚಾರಕರಾಗಲೀ, ಮೇಲಧಿಕಾರಿಗಳಾಗಲಿ ವಸತಿ ಶಾಲೆಯ ಬಗ್ಗೆ ಗಮನ ಹರಿಸದೇ ಇರುವುದು ಶೋಚನೀಯ ಸಂಗತಿ ಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.