15 ರಂದು ಬಿಜೆಪಿ ಏಕತಾ ಓಟ
ಚಿಕ್ಕಬಳ್ಳಾಪುರ: ಬಿಜೆಪಿ ವತಿಯಿಂದ ಡಿ.15 ರಂದು ಬೆಳಿಗ್ಗೆ 10 ಗಂಟೆಗೆ ಸರ್ದಾರ್ ವಲ್ಲಬಾಯ್ ಪಟೇಲ್ ಏಕತಾ ಪ್ರತಿಮೆ ನಿರ್ಮಾಣಕ್ಕಾಗಿ ಏಕತಾ ಓಟ ಆಯೋಜಿಸಲಾಗಿದೆ. ನಗರದ ಪ್ರವಾಸಿ ಮಂದಿರದಿಂದ ಪ್ರಾರಂಭವಾಗುವ ಓಟಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಎನ್. ರವಿನಾರಾಯಣರೆಡ್ಡಿ ಚಾಲನೆ ನೀಡಲಿದ್ದಾರೆ.
ಮುಖ್ಯಮಂತ್ರಿಗೆ ಅಭಿನಂದನೆ
ಚಿಂತಾಮಣಿ: ಗೊಲ್ಲರ ಹಟ್ಟಿಗೆ ಇಂದಿರ ಭವನ ಎಂದು ನಾಮಕರಣ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಮುದ್ದುಕೃಷ್ಣ ಯಾದವ್ ಅಭಿನಂದನೆ ಸಲ್ಲಿಸಿದ್ದಾರೆ. ಇಂದಿರಾಗಾಂಧಿ ಹೆಸರಿನಲ್ಲಿ ಶೋಷಿತ ಜನಾಂಗದ ಗೊಲ್ಲರ ಹಟ್ಟಿಗಳನ್ನು ಇಂದಿರ ಭವನ ಎಂದು ನಾಮಕರಣ ಮಾಡಿ ಸೌಲಭ್ಯ ನೀಡಲು ಮುಂದಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ವಿವಿಧ ಕಾಮಗಾರಿಗೆ ಚಾಲನೆ
ಮುಳಬಾಗಲು; ಸರ್ಕಾರಿ ಸೌಲಭ್ಯ ಗ್ರಾಮೀಣ ಭಾಗದ ಎಲ್ಲರಿಗೂ ದೊರೆಯುವಂತಾಗಬೇಕು ಎಂದು ತಾಪಂ ಉಪಾಧ್ಯಕ್ಷ ಕೆ.ಎಂ. ರಾಜಪ್ಪ ಹೇಳಿದರು. ತಾಲೂಕಿನ ಕದರೀಪುರದಲ್ಲಿ ತಾಪಂನಿಂದ ಅನಿರ್ಬಂತ ಯೋಜನೆಯಡಿ ಸಿಸಿ ರಸ್ತೆ, ಮೂರು ಲಕ್ಷರುಪಾಯಿ ವೆಚ್ಚದ ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಚಂದ್ರಮ್ಮ, ಶಂಕರಪ್ಪ, ಶಿದ್ದಘಟ್ಟ ಮುನಿಶಾಮಿಗೌಡ, ಗ್ರಾಪಂ ಸದಸ್ಯ ಮುನಿಯಪ್ಪ, ಚೋಟಿಸಾಬ್, ಜಿ.ಕೆ. ವೆಂಕಟರಾಮಯ್ಯ, ಮುನೀರ್, ವಿಜಯ್ ಕುಮಾರ್, ತಿಪ್ಪಣ್ಣ, ಎಲ್.ಎನ್. ನಾಗರಾಜ್ ಇದ್ದರು.
ರಾಜ್ಯ ಮಟ್ಟಕ್ಕೆ ಆಯ್ಕೆ
ಚಿಂತಾಮಣಿ: ಸರ್ವಶಿಕ್ಷಣ ಅಭಿಯಾನ, ಯುನಿಸೆಫ್ ಮತ್ತು ಕರ್ನಾಟಕ ಶಾಲಾ ಗುಣಮಟ್ಟ ಮತ್ತು ಮೌಲ್ಯಾಂಕನ ಪರಿಷತ್ತು ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ನಡೆಸಿದ ಜಿಲ್ಲಾ ಮಟ್ಟದ ಒಲಂಪಿಯಾಡ್ ಪರೀಕ್ಷೆಯಲ್ಲಿ ವಿಜ್ಞಾನ ವಿಷಯದಲ್ಲಿ ತಾಲೂಕಿನ ಮುನಗನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿ ಓದುತ್ತಿರುವ ಚೇತನ್ಕುಮಾರ್.ಎಂ.ವಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈತ ಡಿ.13ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪರೀಕ್ಷೆಯಲ್ಲಿ ಪಾಲ್ಗೊಳ್ಳಲಿದ್ದು, ಯಶಸ್ಸು ಪಡೆಯಲೆಂದು ಮುನಗನಹಳ್ಳಿ ಶಾಲೆಯ ಮುಖ್ಯೋಪಾಧ್ಯಾಯ ಒ.ಕೃಷ್ಣಮೂರ್ತಿ ಹಾಗೂ ಶಾಲಾ ಸಹಶಿಕ್ಷಕ ಎಂ.ವಿ.ಜಯದೇವ, ಶಿಕ್ಷಕಿ ಜೆ.ಲಾವಣ್ಯ ವಿದ್ಯಾರ್ಥಿಯ ತಂದೆ-ತಾಯಿಯ ಸಮ್ಮುಖದಲ್ಲಿ ಅಭಿನಂದಿಸಿ ಶುಭ ಹಾರೈಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

