ಸಾರ್ವಜನಿಕ ಸ್ಥಳದಲ್ಲಿ ಆಸ್ಪತ್ರೆ ತ್ಯಾಜ್ಯ: ನಾಗರಿಕರಿಗೆ ತೊಂದರೆ
ಚಿಂತಾಮಣಿ: ನಗರದ ಖಾಸಗಿ ನರ್ಸಿಂಗ್ ಹೋಮ್ ಮತ್ತು ಹಲವು ಕ್ಲಿನಿಕ್ಗಳು ನಗರಸಭೆಯ ನೀತಿ-ನಿಯಮಗಳನ್ನು ಗಾಳಿಗೆ ತೂರಿ ಸಾರ್ವಜನಿಕರು ಓಡಾಡುವ ಸ್ಥಳಗಳಲ್ಲಿ ಬಳಕೆಯಾದ ಸಿರಿಂಜ್, ಬ್ಯಾಂಡೇಜ್ಗಳನ್ನು ಬಿಸಾಡುತ್ತಿರುವುದರಿಂದ ನಾಗರಿಕರಿಗೆ ತೊಂದರೆಯಾಗುತ್ತಿದ್ದರೂ ನಗರಸಭಾ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿರುವುದಾಗಿ ನಾಗರಿಕರು ಆರೇಪಿಸಿದ್ದಾರೆ.
ನಗರದ ಎಂ.ಜಿ ರಸ್ತೆಯ ಪಿಸಿಆರ್ ಕಾಂಪ್ಲೆಕ್ಸ್ ವೃತ್ತದ ಬಳಿ ಇರುವ ಹಲವು ಖಾಸಗಿ ನರ್ಸಿಂಗ್ ಹೋಮ್ಗಳು ಬಳಕೆಯಾದ ಆಸ್ಪತ್ರೆ ತ್ಯಾಜ್ಯವನ್ನು ರಸ್ತೆಯಲ್ಲಿ ಬಿಸಾಡುತ್ತಿವೆ.
ನಗರಸಭೆ ಹಿಂದೆ ಖಾಸಗಿ ನರ್ಸಿಂಗ್ ಹೋಮ್ಗಳಿಗೆ ಕಡ್ಡಾಯವಾಗಿ ತ್ಯಾಜ್ಯವನ್ನು ನಗರಸಭೆ ಇಟ್ಟಿರುವ ಕಂಟೈನರ್ಗಳಲ್ಲಿ ಹಾಕಬೇಕೆಂದು ಸೂಚನೆ ನೀಡಿದ್ದರೂ ನಿಯಮ ಉಲ್ಲಂಘಿಸಿದ್ದಾರೆ. ಅಧಿಕಾರಿಗಳು ಸಂಬಂಧಪಟ್ಟ ನರ್ಸಿಂಗ್ ಹೋಮ್ಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡದಿರುವುದಕ್ಕೆ ನಾಗರಿಕರು ಅಸಮದಾನ ವ್ಯಕ್ತಪಡಿಸಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಸಾರ್ವಜನಿಕರು ಓಡಾಡುವ ಸ್ಥಳಗಳಲ್ಲಿ ತ್ಯಾಜ್ಯ ವಸ್ತುಗಳನ್ನು ಬಿಸಾಡುವ ನರ್ಸಿಂಗ್ ಹೋಮ್ ಅಥವಾ ಕ್ಲಿನಿಕ್ಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

