ಕೋಲಾರ

ಕುಸಿದ ಬೆಲೆ; ಸೌತೆ ರೈತ ಕಂಗಾಲು

Published On :

ಮುಳಬಾಗಲು: ತಾಲೂಕಿನ ರೈತರು ಸೌತೆಕಾಯಿಗೆ ಬೆಲೆ ಬಾರದ ಕಾರಣ ಹೊಲದಲ್ಲಿಯೇ ಬಿಟ್ಟಿದ್ದಾರೆ. ಒಂದು ಎಕರೆ ಸೌತೆಕಾಯಿ ಬೆಳೆಯಲು ಹತ್ತರಿಂದ ಹದಿನೈದು ಸಾವಿರ ರುಪಾಯಿ ವೆಚ್ಚವಾಗುತ್ತದೆ. ಇಷ್ಟು ಖರ್ಚು ಮಾಡಿ ಬೆಳೆದ ಬೆಳೆಯನ್ನು ತೋಟದಲ್ಲಿಯೇ ಬಿಡಬೇಕಾಗಿ ಬಂದಿದೆ ಎನ್ನುತ್ತಾರೆ ರೈತ ಶಂಕರ್. ಎರಡು ತಿಂಗಳ ಹಿಂದೆ ಸೌತೆಕಾಯಿಗೆ ಬಾರಿ ಬೇಡಿಕೆ ಇದ್ದ ಕಾರಣ ಹೆಚ್ಚಿನ ರೈತರು ಸೌತೆಕಾಯಿ ಬೆಳೆಯಲು ಮುಂದಾಗಿದ್ದು ಇದಕ್ಕೆ ಕಾರಣ ಎನ್ನುತ್ತಾರೆ ಪಿ. ಗಂಗಾಪುರದ ಪ್ರಗತಿಪರ ರೈತ ಜಿ. ನಾರಾಯಣಸ್ವಾಮಿ. ಇದರ ಜೊತೆಗೆ ಮತ್ತೊಂದು ವಾಣೆಜ್ಯ ಬೆಳೆಯಾದ ಆಲೂಗಡ್ಡೆ ಬೆಲೆ ಕುಸಿದ ಪರಿಣಾಮ ಕೊಯ್ಲಿಗೆ ಸಿದ್ಧವಾಗಿರುವ ಅಲೂಗಡ್ಡೆ ಬೆಳೆಗೆ ವಿಚಿತ್ರ ರೋಗ ಹರಡಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಅಲೂಗಡ್ಡೆ ಬಿತ್ತನೆ ಬೀಜವನ್ನು ಆರ್‌ಎಂಸಿ ಯಾರ್ಡ್‌ನಲ್ಲಿ ಖಾಸಗಿಯವರು ಮಾರಾಟ ಮಾಡುತ್ತಾರೆ. ಅಲೂಗಡ್ಡೆ ಬಿತ್ತನೆ ಬೀಜವನ್ನು ಸರ್ಕಾರವೇ ರೈತರಿಗೆ ಸರಬರಾಜು ಮಾಡಿದರೆ ಒಳ್ಳೆಯದು ಎಂದು ಆಲೂಗಡ್ಡೆ ಬೆಳೆಗಾರ ಮುನಿರಾಮಯ್ಯ ಅಭಿಪ್ರಯಾಪಡುತ್ತಾರೆ.

ಯುಪಿಎ ಸರ್ಕಾರದ ಸಾಧನೆ ಅರಿವು ಮೂಡಿಸಿ
ಶಿಡ್ಲಘಟ್ಟ:
ಕೇಂದ್ರದ ಯುಪಿಎ ಸರ್ಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ಕಾಂಗ್ರೆಸ್ ಕಾರ್ಯಕರ್ತರು ಜಾಗೃತಿ ಮೂಡಿಸಬೇಕೆಂದು ಕೆಪಿಸಿಸಿ ಉಪಾಧ್ಯಕ್ಷ ವಿ. ಮುನಿಯಪ್ಪ ತಿಳಿಸಿದರು.
ತಾಲೂಕಿನ ವಿವಿಧ ಗ್ರಾಪಂಗಳಿಗೆ ಚುನಾಯಿತರಾದ ಪ್ರತಿನಿಧಿಗಳನ್ನು ಅಭಿನಂದಿಸಿ ಮಾತನಾಡಿ, ನಾಗಮಂಗಲ, ಮಳಮಾಚನಹಳ್ಳಿ, ಹೊಸಪೇಟೆ ಗ್ರಾಪಂಗಳ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸಿರುವ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ಬಯಲುಸೀಮೆಯ ತಾಲೂಕುಗಳಿಗೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಗೊಳಿಸಲು ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.