ಕೋಲಾರ

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Published On :

ದೊಡ್ಡಬಳ್ಳಾಪುರ: ಇಲ್ಲಿನ ಕನ್ನಡ ಜಾಗೃತ ಪರಿಷತ್ತಿನ ವತಿಯಿಂದ ಡಿ.29ರಂದು ನಡೆಯಲಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ತಾಲೂಕಿನಲ್ಲಿ 2010 ರಿಂದ 2013ನೇ ಸಾಲಿನಲ್ಲಿ ಐಎಎಸ್, ಕೆಎಎಸ್, ಐಪಿಎಸ್, ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿರುವವರು ಮತ್ತು ಪ್ರಸಕ್ತ ಸಾಲಿನಲ್ಲಿ ಪಿಎಚ್‌ಡಿ ಪದವಿಯನ್ನು ಪಡೆದಿರುವವರಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ವಿದ್ಯಾರ್ಥಿಗಳು ತಮ್ಮ ಹೆಸರು-ವಿವರಗಳ ಮಾಹಿತಿ ಒಳಗೊಂಡ ಪರಿಚಯ, ಸ್ವವಿವರವನ್ನು ಡಿ.18ರ ಒಳಗೆ ಕನ್ನಡ ಜಾಗೃತ ಪರಿಷತ್ತಿನ ಕಚೇರಿಗೆ ತಲುಪಿಸಲು ಕೋರಲಾಗಿದೆ. ಮಾಹಿತಿಗೆ ಕನ್ನಡ ಜಾಗೃತ ಪರಿಷತ್ತು, ಡಾ.ಅಂಬೇಡ್ಕರ್ ರಸ್ತೆ, ಹೊಸ ಬಸ್ ನಿಲ್ದಾಣ ಪಕ್ಕ, ದೊಡ್ಡಬಳ್ಳಾಪುರ-561203 ಇಲ್ಲಿಗೆ ಸಂಪರ್ಕಿಸಬಹುದು.

'ಯುವಜನತೆ ಸಂಘಟಿತರಾಗಿ'
ಶಿಡ್ಲಘಟ್ಟ:
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಗಳಿಸಿಕೊಡಲು ಯುವಜನತೆ ಸಂಘಟಿತರಾಗಬೇಕು ಎಂದು ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ತಾಯಪ್ಪ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಗರ ಶಕ್ತಿ ಕೇಂದ್ರ ಬಿಜೆಪಿ ಯುವ ಮೋರ್ಚಾ ಪಧಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರದ ಭ್ರಷ್ಟಾಚಾರದ ಫಲವಾಗಿ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ನೆಲಕ್ಕಚ್ಚಿದೆ, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರಮೋದಿಯವರ ನಾಯಕತ್ವವನ್ನು ಬೆಂಬಲಿಸಿ ಮುಂಬರುವ ಲೊಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ ಎಂದರು. ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನಗರ ಘಟಕದ ಅಧ್ಯಕ್ಷರಾಗಿ ಕೆ.ಸಿ. ಯೋಗಾನಂದ್, ಪ್ರಧಾನ ಕಾರ್ಯದರ್ಶಿ ಕೆ. ನಾರಾಯಣಸ್ವಾಮಿ, ಎಸ್.ವಿ. ರಾಜಶೇಖರ್, ಉಪಾಧ್ಯಕ್ಷ ಶ್ರೀನಿವಾಸ್, ಮಂಜುನಾಥ್ ಆಯ್ಕೆಯಾಗಿದ್ದಾರೆ. ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಮಧುಸೂಧನ್, ನಗರ ಘಟಕದ ಅಧ್ಯಕ್ಷ ರಾಘವೇಂದ್ರ, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ಅಶ್ವಥ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.