ನಕಲಿ ಸಹಿ ಮಾಡಿದವರ ವಿರುದ್ಧ 'ಲೋಕಾ'ಗೆ ಗ್ರಾಪಂ ಅಧ್ಯಕ್ಷೆ ದೂರು
ಚಿಂತಾಮಣಿ: ಭೂಮಿಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ನಕಲಿ ಸಹಿ ಮಾಡಿ ಬಸವ ವಸತಿ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿರುವ ಆರೋಪಿಗಳ ವಿರುದ್ಧ ಹಾಗೂ ಪತ್ತೆಗಾಗಿ ಒತ್ತಾಯಿಸಿ ಲೋಕಾಯುಕ್ತರಿಗೆ ದೂರು ನೀಡಲಾಗಿದೆ.
ಚಿಂತಾಮಣಿ ತಾಲೂಕಿನ ಭೂಮಿಶೆಟ್ಟಹಳ್ಳಿ ಗ್ರಾಪಂ ಅಧ್ಯಕ್ಷೆ ನಾರೆಮ್ಮ ಅವರ ನಕಲಿ ಸಹಿಯನ್ನು ಮಾಡಿ ಬಸವ ವಸತಿ ಫಲಾನುಭವಿಗಳ ಪಟ್ಟಿಯನ್ನು ಯಾರೋ ಕಾಣದ ಕೈಗಳು ತಯಾರಿಸಿದ್ದಾರೆ.
ಈ ಪಟ್ಟಿಯಲ್ಲಿ ಹಲವಾರು ಲೋಪದೋಷಗಳಿವೆ. 5 ಗ್ರಾಮಗಳನ್ನು ನಿರ್ಲಕ್ಷ್ಯ ಮಾಡಿ ನನ್ನ ಸಹಿಯನ್ನು ನಕಲಿ ಮಾಡಿಕೊಂಡು ಅಪರಾದವೆಸಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳಿಗೆ ಅಧ್ಯಕ್ಷರಾದ ನಾರೆಮ್ಮ ದೂರು ನೀಡಿದ್ದಾರೆ.
ಇಷ್ಟೆಲ್ಲ ಅವ್ಯವಹಾರಗಳನ್ನು ಮಾಡಿದ ಹಲವು ರಾಜಕೀಯ ಮುಖಂಡರು ಹಾಗೂ ಅಧಿಕಾರಿಗಳು ಹಣಕಾಸು ವ್ಯವಹಾರದಲ್ಲಿಯೂ ನನ್ನ ಸಹಿ ದುರ್ಬಳಿಕೆ ಮಾಡಿಕೊಂಡಿರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಅದ್ದರಿಂದ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿರುವ ನಾರೆಮ್ಮ, ಈ ಬಗ್ಗೆ ಜಿಲ್ಲಾಧಿಕಾರಿಗಳಿಗೂ ದೂರು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

