ಕೋಲಾರ

ಬಾರದ ಭೂಮಿ ಪರಿಹಾರ; ರೈತನ ಆತ್ಮಹತ್ಯೆ ಯತ್ನ

Published On :

ಚಿಕ್ಕಬಳ್ಳಾಪುರ: ತಮ್ಮ ಭೂ ವಿವಾದಕ್ಕೆ ಸಂಬಂಧಪಟ್ಟಂತೆ ತಾಲೂಕು ಆಡಳಿತ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಬೇಸತ್ತ ರೈತನೊಬ್ಬ ಮರದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿ ಎಲ್ಲರು ಕೆಲ ಸಮಯ ಕಂಗಲಾಗುವಂತೆ ಮಾಡಿದ ಘಟನೆ ನಡೆದಿದೆ.
ನಗರದ ತಹಸೀಲ್ದಾರ್ ಕಚೇರಿಗೆ ಶುಕ್ರವಾರ ಬಂದ ತಾಲೂಕಿನ ಮಂಡಿಕಲ್ ಹೋಬಳಿಯ ಅದೇಗಾರಹಳ್ಳಿ ನಿವಾಸಿ ಗ್ರಾಮದ ರೈತ ನಾಗರಾಜ್, ತಮ್ಮ ಭೂ ವಿವಾದ ಸಮಸ್ಯೆಯನ್ನು ಅಧಿಕಾರಿಗಳ ಮುಂದಿಟ್ಟಿದ್ದಕ್ಕೆ ಸರಿಯಾಗಿ ಪ್ರತಿಕ್ರಿಯೆ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸುತ್ತ ಸಮೀಪದಲ್ಲಿಯೇ ಇದ್ದ ಮರವನ್ನು ಕ್ಷಣಾರ್ಧದಲ್ಲಿ ಏರಿ ಬಿಟ್ಟ. ಇದರಿಂದ ನಾನು ಬದುಕುವುದಿಲ್ಲ. ಈ ಮರದ ಮೇಲಿನಿಂದ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಸಿದ. ತಕ್ಷಣ ಸ್ಥಳದಲ್ಲಿದ್ದ ಜನರು ನಾಗರಾಜ್ ಮನವೊಲಿಸುವ ಪ್ರಯತ್ನ ಮಾಡಿದರೂ ಜಗ್ಗಲಿಲ್ಲ.
ತಾಲೂಕಿನ ಮರವೇನಹಳ್ಳಿ ಗ್ರಾಮದ ಸರ್ವೆ 100,1 ಮತ್ತು 108 ರ ಜಮೀನಿನಲ್ಲಿ ಕಳೆದ ಅನೇಕ ವರ್ಷಗಳಿಂದಲೂ ವ್ಯವಸಾಯವನ್ನು ಮಾಡಿಕೊಂಡು ಬಂದಿದ್ದು ಇದಕ್ಕೆ ಹೊಂದಿಕೊಂಡಂತಿರುವ ಖರಾಬು ಜಮೀನನ್ನು ಕೆಲವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವುದರಿಂದ ತಮಗೂ ಸೇರಿದಂತೆ ಸುತ್ತಮುತ್ತಲ ರೈತರಿಗೆ ಓಡಾಡಲು ರಸ್ತೆ ಇಲ್ಲದಂತಾಗಿದೆ ಎಂದು ಆರೋಪಿಸಿದ.
ಈಗಾಗಲೇ ಅರ್ಜಿದಾರ ನೀಡಿರುವ ಮನವಿಯಂತೆ ಗ್ರಾಮಕ್ಕೆ ತೆರಳಿ ಸರ್ವೆ ಕಾರ್ಯವನ್ನು ಕೈಗೊಂಡಿದ್ದು ಆ ಸಂದರ್ಭದಲ್ಲಿ ಹಿರಿಯರು ಸೇರಿ ಹಲವರು ನ್ಯಾಯ ಪಂಚಾಯಿತಿ ಮಾಡಿಕೊಂಡು ಪರಸ್ಪರ ಒಮ್ಮತ ನಿರ್ಣಯ ಕೈಗೊಳ್ಳುತ್ತೇವೆ ಎಂದು ತಿಳಿಸಿದ ಹಿನ್ನೆಲೆಯಲ್ಲಿ ವಾಪಸ್ ಬಂದಿದ್ದು ಈ ನಡುವೆ ನಾಗರಾಜ್ ಮರವನ್ನು ಏರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ ಎದಿರುರುವ ತಹಸೀಲ್ದಾರ್ ನಟೇಶ್, ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.