ಕೋಲಾರ

ಸಾಂಸ್ಕೃತಿಕ ಚಟುವಟಿಕೆ ಬಗ್ಗೆ ಆಸಕ್ತಿ ಮೂಡಿಸಿ

Published On :

ಕ.ಪ್ರ.ವಾರ್ತೆ ,  ಕೋಲಾರ ,  ಡಿ.13
ಪ್ರತಿಭಾ ಕಾರಂಜಿ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ನಡೆಸುವುದರಿಂದ ಮಕ್ಕಳಲ್ಲಿನ ಪ್ರತಿಭೆಯನ್ನು ಹೊರಗೆಳೆಯಲು ತುಂಬಾ ಅನುಕೂಲವಾಗುತ್ತದೆ ಎಂದು ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ  ಸಿಮೋಲ್ ಮೋಹನ್‌ಮೂರ್ತಿ ಅಭಿಪ್ರಾಯಪಟ್ಟರು.
ಕಾಮಸಮುದ್ರದಲ್ಲಿ ನಡೆದ ಪ್ರಸಕ್ತ ಸಾಲಿನ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ವಿವೇಕಾನಂದ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಿಗೆ ಪಾಠದ ಜೊತೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿ ಆಸಕ್ತಿ ಮೂಡಿಸುವ ಮೂಲಕ ಮಕ್ಕಳು ತಮ್ಮಲ್ಲಿನ ಪ್ರತಿಭೆ ಅನಾವರಣಕ್ಕೆ ಅವಕಾಶ ಮಾಡಿಕೊಡಬೇಕು.
 ವಿವಿಧ ಸ್ಪರ್ಧೆಗಳಲ್ಲಿ ಮಕ್ಕಳು ಭಾಗವಹಿಸಿ ಬಹುಮಾನ ಪಡೆದಿರುವುದು ತಮಗೆ ಹರ್ಷ ಉಂಟು ಮಾಡಿದೆ ಎಂದು ಮುಕ್ತ ಕಂಠದಿಂದ ಪ್ರಶಂಸಿಸಿದರು.  ಅಲ್ಲದೆ, ಮಕ್ಕಳ ಪ್ರಗತಿಗೆ ಶ್ರಣಿಸುತ್ತಿರುವ ಎಲ್ಲಾ ಶಿಕ್ಷಕರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಅಪ್ಪೇನಹಳ್ಳಿಯ ವಿ.ಎ.ಜಿ.ಎಸ್.ಎಸ್ ಅಧ್ಯಕ್ಷ ಮೋಹನ್ ಮೂರ್ತಿ ಕೆ.ಜಿ.ಎಫ್ ಇ.ಸಿ.ಒ ಶ್ರೀನಿವಾಸ ರೆಡ್ಡಿ, ಜೆ.ಸಿ.ಬಿ. ನಾರಾಯಣಪ್ಪ, ಗೌರಮ್ಮ, ಪ್ರಾಂಶುಪಾಲ ಬೈರೇಗೌಡ, ಉಪಪ್ರಾಂಶುಪಾಲ ಶಂಕರ ಕಾವಲಿ,  ಸಬ್ ಇನ್ಸ್‌ಪೆಕ್ಟರ್ ವಸಂತ, ಎಸ್‌ಡಿಎಂಸಿ ಅಧ್ಯಕ್ಷ ಅಕ್ಮಲ್ ಪಾಷ, ಆಂತೋನಿ ರಜಿನಾ, ಕೆ.ಎನ್.ಉಮಾಶಂಕರ್, ಸಿ.ಆರ್.ಪಿ.ಗಳಾದ ಚಂದ್ರಯ್ಯ. ಸೋಮಶೇಖರ್, ಸಂಘದ ಪದಾಧಿಕಾರಿಗಳಾದ ರವಿಪ್ರಕಾಶ್ ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.