ವೈಜ್ಞಾನಿಕ ಕೃಷಿ ಪದ್ಧತಿಯಿಂದ ಅಧಿಕ ಇಳುವರಿ: ಅನುರೂಪ
ಗೌರಿಬಿದನೂರು: ರೈತರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಮತ್ತು ವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಉತ್ಪಾದನೆ ಮತ್ತು ಆದಾಯ ಹೆಚ್ಚಿಸಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕಿ ಅನುರೂಪ ಕಿವಿಮಾತು ಹೇಳಿದರು.
ತಾಲೂಕಿನ ಮಂಚೇನಹಳ್ಳಿ ಹೋಬಳಿಯ ಹಳೇಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಕೃಷಿ ಕ್ಷೇತ್ರ ಪಾಠಶಾಲೆ ಮತ್ತು ಪ್ರಗತಿಪರ ರೈತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರೈತರ ಅನುವುಗಾರ ಎಚ್.ಎನ್.ಕಿರಣ್ಕುಮಾರ್ ಮಾತನಾಡಿ, ದೇಶದಲ್ಲಿ ಜನಸಂಖ್ಯೆ ಹೆಚ್ಚಳವಾಗುತ್ತಿದ್ದರೆ ಉತ್ಪಾದನಾ ಕ್ಷೇತ್ರವಾದ ಕೃಷಿ ಕ್ಷೇತ್ರದಲ್ಲಿ ಕಡಿಮೆಯಾಗುತ್ತಿದೆ. ಗ್ರಾಮೀಣ ಭಾಗದ ಯುವ ರೈತರು ಕುಟುಂಬದ ಮಕ್ಕಳು ಉದ್ಯೋಗಅರಸಿ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ, ಅದನ್ನು ತಡೆಯಲು ಕೃಷಿಯಲ್ಲಿ ಆಧುನಿಕ ಪದ್ಧತಿ ಅಳವಡಿಸಿಕೊಂಡು, ಹನಿ ನೀರಾವರಿ ಸಾವಯವ ಗೊಬ್ಬರ ಬಳಸಿ ಉತ್ಪಾದನೆ, ವ್ಯವಸಾಯದಲ್ಲಿ ತೊಡಗಿಸಿಕೊಳ್ಳಿ, ಮಾದರಿ ರೈತರಾಗಲು ಬೇಕಾದ ಮಾರ್ಗದರ್ಶನ ಕೃಷಿ ಇಲಾಖೆಯಿಂದ ಮಾರ್ಗದರ್ಶನ ಪಡೆಯಲು ತಿಳಿಸಿದರು. ಇದೇ ವೇಳೆ ಗ್ರಾಮದ ಪ್ರಗತಿಪರ ರೈತರಾದ ಚಂದ್ರಶೇಖರ್ ಮತ್ತು ರಮೇಶ್ ಅವರನ್ನು ಸನ್ಮಾನಿಸಲಾಯಿತು. ಎಂ.ನಾರಾಯಣಸ್ವಾಮಿ, ಉಮಾಶಂಕರ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

