ಕೋಲಾರ

ತನಿಖೆ ಭರವಸೆ: ಧರಣಿ ವಾಪಸ್

Published On :

ಗುಡಿಬಂಡೆ: ತಾಲೂಕಿನ ಸೋಮೇನಹಳ್ಳಿ ಗ್ರಾಪಂ ಕಚೇರಿಯಲ್ಲಿನ ದಾಖಲೆ ಸಂಗ್ರಹ ಕೊಠಡಿಗೆ ಬೆಂಕಿ ಬಿದ್ದ ಪರಿಣಾಮ, ಅಮೂಲ್ಯವಾದ ದಾಖಲೆಗಳು ಸುಟ್ಟು ಕರಕಲಾದ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಿಪಿಎಂ ಹಾಗೂ ರೈತ ಮುಖಂಡರು ಕಳೆದ ಎರಡು ದಿನಗಳಿಂದ ತಾಪಂ ಕಚೇರಿ ಎದುರು ಧರಣಿ ನಡೆಸುತ್ತಿದ್ದ ಧರಣಿ ಜಿಪಂ ಅಧ್ಯಕ್ಷ ಚಿನ್ನಪ್ಪ ನೀಡಿದ ಭರವಸೆ ಮೇರೆಗೆ ಶುಕ್ರವಾರ ತಾತ್ಕಾಲಿಕವಾಗಿ ಮುಕ್ತಾಯಗೊಂಡಿತ್ತು.
ಈ ವೇಳೆ ಸಿಪಿಎಂ ಮುಖಂಡರು ಮಾತನಾಡುತ್ತಾ ಸೋಮೇನಹಳ್ಳಿ ಗ್ರಾ.ಪಂ 13ನೇ ಹಣಕಾಸು ಯೋಜನೆಯಲ್ಲಿ ಅಪಾರ ಮೊತ್ತದ ಅನುದಾನ ದುರುಪಯೋಗವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯಿಸಿ ಈಗಾಗಲೇ ಸೋಮೇನಹಳ್ಳಿ ಗ್ರಾಪಂ ಮುಂದೆ ಪ್ರತಿಭಟನೆ ಸಹ ನಡೆಸಲಾಗಿತ್ತು. ತನಿಖೆಗೂ ಮುನ್ನವೇ ಎಲ್ಲಿ ಅಕ್ರಮ ಬಯಲಾಗುವುದೋ ಎಂಬ ಭಯದಿಂದ  ಹಣ ಗುಳುಂ ಮಾಡಿರುವ ಅಧಿಕಾರಿಗಳೇ ದಾಖಲೆಗಳನ್ನು ಬೆಂಕಿಗೆ ಆಹುತಿ ಮಾಡಿದ್ದಾರೆ ಎಂದು ಆರೋಪಿಸಿದರು.ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಪಂ ಅಧ್ಯಕ್ಷ ಚಿನ್ನಪ್ಪ ಧರಣಿ ನಿರತ ಮುಖಂಡರಿಂದ ಸಮಸ್ಯೆಗಳನ್ನು ಆಲಿಸಿದರು. ಮುಖಂಡರಿಂದ ಇ.ಒ ವಿರುದ್ದ ಆರೋಪಗಳ ಸುರಿಮಳೆ ಸುರಿಯಿತು. ಈ ಬಗ್ಗೆ ಇಒ ಅವರನ್ನು ವಿಚಾರಿಸಿದಾಗ ಅವರ ಬಳಿ ಘಟನೆಗೆ ಸಂಬಂಧಿಸಿದಂತ ಯಾವುದೇ ದಾಖಲೆಗಳು ಇಲ್ಲದ ಕಾರಣ ಇ.ಒ ಇಂದ್ರೇಶ್‌ನನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ನಂತರ 3 ದಿನದೊಳಗೆ ಘಟನೆಗೆ ಸಂಬಂಧಪಟ್ಟಂತಹ ಸಮಗ್ರ ವರದಿ ನೀಡಬೇಕು, ನಿರ್ಲಕ್ಷ್ಯ ತೋರಿದ್ದಲ್ಲಿ ಕಾನೂನು ಕ್ರಮಕ್ಕೆ ಒಪ್ಪಿಸುವುದಾಗಿ ಎಚ್ಚರಿಕೆ ನೀಡಿದರು.
ಜಿಪಂ ಅಧ್ಯಕ್ಷ ಚಿನ್ನಪ್ಪ ಸೋಮವಾರ ಸಾಮಾನ್ಯ ಸಭೆಯಲ್ಲಿ ಈ ವಿಚಾರವನ್ನು ಮುಂದಿಟ್ಟು ದಾಖಲೆಗಳನ್ನು ಪರಿಶೀಲಿಸಿ ನಂತರ ಕಾನೂನು ಕ್ರಮ ಕೈಗೊಂಡು ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.