ತೂಕ ವಂಚನೆ ತಡೆಗೆ ಕಠಿಣ ಕ್ರಮ
ಚಿಕ್ಕಬಳ್ಳಾಪುರ: ತೂಕ ಮತ್ತು ಅಳತೆಯಲ್ಲಿ ಗ್ರಾಹಕರು ವಂಚನೆಗೆ ಗುರಿಯಾಗುವುದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ದಿಟ್ಟ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ನಗರದ ಎಪಿಎಂಸಿ ಯಾರ್ಡ್ ಸಮೀಪ ಜಿಲ್ಲಾ ಮಾಪನ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹಲವೆಡೆ ವಸ್ತುಗಳನ್ನು ಖರೀದಿಸುವ ವೇಳೆ ತೂಕ ಮತ್ತು ಅಳತೆಯಲ್ಲಿ ಗ್ರಾಹಕರು ವಂಚನೆಗೆ ಗುರಿಯಾಗುತ್ತಲೇ ಇದ್ದಾರೆ. ಕೆಲ ವ್ಯಾಪಾರಿಗಳು ನಿಖರವಾಗಿ ತೂಕ ಮತ್ತು ಅಳತೆ ಮಾಡುವ ಮಾಪನಗಳನ್ನು ಹೊಂದಿರುವುದಿಲ್ಲ. ಬದಲಿಗೆ ಅವೈಜ್ಞಾನಿಕ ಉಪಕರಣಗಳನ್ನು ಬಳಸಿಕೊಂಡು ಮೋಸ ಮಾಡುತ್ತಿದ್ದು ಈ ಬಗ್ಗೆ ಗ್ರಾಹಕರು ಎಚ್ಚೆತ್ತುಕೊಳ್ಳಬೇಕು. ವ್ಯಾಪಾರಸ್ಥರು ತೂಕ ಮತ್ತು ಅಳತೆಯಲ್ಲಿ ವ್ಯತ್ಯಾಸ ಮಾಡುವುದು ಕಂಡು ಬಂದ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಬೇಕೆಂದು ಸಲಹೆ ನೀಡಿದರು.
ವ್ಯಾಪಾರಸ್ಥರು ಕಡ್ಡಾಯವಾಗಿ ಎಲೆಕ್ಟ್ರಾನಿಕ್ ಸೂಕ್ತ ಮತ್ತು ಅಳತೆಯ ಯಂತ್ರಗಳನ್ನು ಬಳಕೆ ಮಾಡುವಂತಾಗಲು ಕ್ರಮ ಕೈಗೊಳ್ಳುವುದರ ಜೊತೆಗೆ ಕಾಲ ಕಾಲಕ್ಕೆ ಕಾರ್ಯಾಚರಣೆ ಕೈಗೊಂಡು ತಪಾಸಣೆ ನಡೆಸಬೇಕು.ಒಂದು ವೇಳೆ ಗ್ರಾಹಕರನ್ನು ವಂಚಿಸುತ್ತಿರುವುದು ತಿಳಿದು ಬಂದಾಗ ಕಾನೂನು ಕ್ರಮ ಕೈಗೊಳ್ಳಬೇಕು. ಈ ಮೂಲಕ ಗ್ರಾಹಕರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಸಕ ಡಾ. ಕೆ.ಸುಧಾಕರ್ ಮಾತನಾಡಿ, ತೂಕ ಮತ್ತು ಅಳತೆ ಮೋಸ ಬಹಳಷ್ಟು ಮಂದಿಗೆ ತಿಳಿಯುವುದೇ ಇಲ್ಲ. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುವುದರ ಜತೆಗೆ, ವಂಚಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ತಕ್ಕ ಶಿಕ್ಷೆ ಕೊಡಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕಾಗಿದೆ ಎಂದರು.
ವಿಧಾನಸಭೆ ಉಪಾಧ್ಯಕ್ಷ ಎನ್.ಹೆಚ್.ಶಿವಶಂಕರರೆಡ್ಡಿ ಮಾತನಾಡಿದರು. ಇದೇ ವೇಳೆ ನೂತನ ಮಾಪನ ಭವನದಲ್ಲಿ ಗ್ರಾಹಕರ ಮಾಪಕ ವಸ್ತುಗಳ ಬಗ್ಗೆ ಅರಿವಿನ ವಸ್ತು ಪ್ರದರ್ಶನ ನಡೆಯಿತು. ಜಿಲ್ಲಾಧಿಕಾರಿ ಡಾ.ಆರ್.ವಿಶಾಲ್, ಜಿಪಂ ಕಾರ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ್, ಮಾಪನಶಾಸ್ತ್ರ ಇಲಾಖೆ ನಿಯಂತ್ರಕ ಎನ್.ಆರ್. ವೆಂಕಟೇಶ್, ಜಿಲ್ಲಾ ಸಹಾಯಕ ನಿಯಂತ್ರಕ ರಾಮಕೃಷ್ಣಯ್ಯ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

