ಕೋಲಾರ

ಪಠ್ಯೇತರ ಚಟುವಟಿಕೆಗೂ ಆದ್ಯತೆ ಇರಲಿ

Published On :

ಕ.ಪ್ರ.ವಾರ್ತೆ ,  ಕೋಲಾರ ,  ಡಿ.14
ಮಕ್ಕಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳು ಕಲಿಯಲು ಪ್ರೋತ್ಸಾಹ ನೀಡಿದಲ್ಲಿ ಮನೋವಿಕಾಸ ಹೆಚ್ಚಾಗುವುದಲ್ಲದೆ, ವ್ಯಕ್ತಿ ವಿಕಸನಕ್ಕೆ ಪೂರಕ ವಾತಾವಣ ಕಲ್ಪಿಸಿದಂತಾಗುತ್ತದೆ ಎಂದು ಶಿಕ್ಷಣ ಸಂಯೋಜಕ ರಾಮಚಂದ್ರಾರೆಡ್ಡಿ ಅಭಿಪ್ರಾಯಪಟ್ಟರು.
ನಗರದಲ್ಲಿ ಆಯೋಜಿಸಿದ್ದ ಪಿಸಿಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
ಸ್ಪರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳಿಗೆ ನಾಲ್ಕು ಗೋಡೆಗಳ ನಡುವೆ ನೀಡುವ ಶಿಕ್ಷಣ ಬದುಕು ರೂಪಿಸುತ್ತದೆ ನಿಜ. ಆದರೆ, ಅವರಲ್ಲಿನ ಕ್ರೀಡೆ, ಸಾಂಸ್ಕೃತಿಕ ಪ್ರತಿಭೆ ಪ್ರದರ್ಶಿಸಲು ಅವಕಾಶ ಕಲ್ಪಿಸುವ ಮೂಲಕ ಅವರನ್ನು ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಪೋಷಕರು ಮತ್ತು ಶಿಕ್ಷಕರಿಗೆ ಸಲಹೆ ನೀಡಿದರು.
ಬಿಆರ್‌ಪಿ ಗೋಪಿನಾಥ್ ಮಾತನಾಡಿ, ಸರ್ಕಾರ ಶೈಕ್ಷಣಿಕ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಹಾಕಿಕೊಂಡಿದೆ, ಇದರ ಸದ್ಬಳಕೆ ಮೂಲಕ  ಮಕ್ಕಳು ಸಾಧನೆ ಮಾಡಬೇಕು. ಜಿಲ್ಲೆಗೂ ಕೀರ್ತಿ ತರಬೇಕೆಂದರು. ಸೋಲು ಗೆಲುವಿನ ಮೆಟ್ಟಿಲು ಎಂಬುದನ್ನು ಅರಿತು ಸೋತವರು ಆತ್ಮಸ್ಥೈರ್ಯ ಕಳೆದುಕೊಳ್ಳದೇ ಮುಂದಿನ ದಿನಗಳಲ್ಲಿ ಸಾಧನೆಗೆ ಮುಂದಾಗಬೇಕೆಂದರು. ಸುಗುಣ ಶಾಲೆಯ ಆಡಳಿತಾಧಿಕಾರಿ ಪುಷ್ಪಾನಾಗರಾಜ್ ಅಧ್ಯಕ್ಷತೆ ವಹಿಸಿದ್ದರು.
ಸಿಆರ್‌ಪಿ ಸುರೇಶ್‌ಬಾಬು ಪ್ರಾಸ್ತಾವಿಕವಾಗಿ ಮಾತನಾಡಿದರು.  ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ರಾಮಚಂದ್ರಪ್ಪ, ನರೇನ್ ಕಂಪೆನಿಯ ಸಂಸ್ಥಾಪಕ ನಾಗರಾಜ್, ಸುಗುಣ ಶಾಲೆಯ ಸಂಸ್ಥಾಪಕ ಡಾ.ಕೆ.ರಾಮಯ್ಯ ಮತ್ತಿತರರು ಇದ್ದರು. ಲಕ್ಷ್ಮೀ ನಿರೂಪಿಸಿ, ಪ್ರಾಂಶುಪಾಲ ಚಿನ್ನಪ್ಪ ಸ್ವಾಗತಿಸಿ, ಅಜಯ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.