ಬುಡ್ಗ ಜಂಗಮಕ್ಕೆ ಜಾತಿ ಪ್ರಮಾಣ ಪತ್ರ ನೀಡಿ
ಕ.ಪ್ರ.ವಾರ್ತೆ , ಕೋಲಾರ , ಡಿ. 16
ಅಲೆಮಾರಿ ಬುಡ್ಗ ಜಂಗಮರಿಗೆ ಜಾತಿ ಪತ್ರ ನೀಡದೆ ಅಪರಾಧಿಗಳಂತೆ ಕಾಣಲಾಗುತ್ತಿದೆ ಹಾಗೂ ಅಧಿಕಾರಿಗಳು ಏಕಪಕ್ಷೀಯವಾಗಿ ನಿರ್ಧಾರಗಳನ್ನು ಕೈಗೊಂಡು ಶೋಷಣೆ ಮಾಡುತ್ತಿದ್ದಾರೆಂದು ಆರೋಪಿಸಿ ನಗರದಲ್ಲಿ ಸೋಮವಾರ ಜಿಲ್ಲಾ ಬುಡ್ಗ ಜಂಗಮ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಟನೆ ನಡೆಯಿತು.
ಬುಡ್ಗ ಜಂಗಮ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು, ಯುವಕರು ಹಾಗೂ ಕಲಾವಿದರು ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಜಾತಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿದರು.
ಅಧಿಕಾರಿಗಳು ಬುಡ್ಗ ಜಂಗಮರ ಬಗ್ಗೆ ಗೊಂದಲ ಸೃಷ್ಟಿಸಿರುವುದು ಹಾಗೂ ಕೆಲ ರಾಜಕೀಯ ವ್ಯಕ್ತಿಗಳ ಕುತಂತ್ರದಿಂದ ಅಲೆಮಾರಿಗಳಾದ ನಮಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.
ಬೈರಾಗಿ, ಬಾವಾಚ, ಸನ್ಯಾಸಿ ಮುಂತಾದ ಜಾತಿಗಳನ್ನು ನಮೂದಿಸಿದ್ದ ವೈ. ಕೃಷ್ಣಪ್ಪ, ಶೇಷಪ್ಪ ಹಾಗೂ ಪುಷ್ಪ ಮುಂತಾದವರು ಪ್ರಕರಣಗಳಲ್ಲಿ ಬುಡ್ಗ ಜನಾಂಗದವರೆಂಬ ಮಹತ್ವದ ತೀರ್ಪು ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ನೀಡಲಾಗಿದೆ. ಸ್ಥಳ ಪರಿಶೀಲನೆ ಮಾಡಿ ಜಾತಿ ಪ್ರಮಾಣ ಪತ್ರ ನೀಡುವಂತೆ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದರೂ ಕೆಳಸ್ತರದ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲವೆಂದು ಆರೋಪಿಸಿದರು. ಸಮುದಾಯದ ಎಲ್ಲಾ ಶಾಲಾ ಮಕ್ಕಳಿಗೆ ಬುಡ್ಗಜಂಗಮ ಎಂದು ಸಮೂದಿಸಿ ಜಾತಿ ಪ್ರಮಾಣ ಪತ್ರ ನೀಡುವಂತೆ ಶಿಕ್ಷಣ ಇಲಾಖೆಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳ ಸಂಯುಕ್ತ ರಂಗದ ಮುಖಂಡರಾದ ಹಾರೋಹಳ್ಳಿ ನಾರಾಯಣಸ್ವಾಮಿ, ಮುನಿರಾಜು, ಜಿಲ್ಲಾ ಬುಡ್ಗಜಂಗಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಎಸ್. ಕೃಷ್ಣಮೂರ್ತಿ, ಮುಖಂಡರಾದ ಶ್ರೀನಿವಾಸ್, ಬನ್ನಹಳ್ಳಿ ನಾರಾಯಣಸ್ವಾಮಿ, ಶಂಕರ್, ಕೆ.ಎಸ್. ನಾಗರಾಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

