ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ಬಾಗೇಪಲ್ಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿದರು.
ಸಂಘದ ಕಾರ್ಯದರ್ಶಿ ಪಿ.ಮಂಜುನಾಥರೆಡ್ಡಿ ಮಾತನಾಡಿ, ರೈತರು ಬೆಳೆದಿರುವ ಬೆಳೆಗೆ ಸೂಕ್ತ ಬೆಂಬಲ ಬೆಲೆ ನೀಡುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಆರೋಪಿಸಿದರು.
ಗ್ರಾಮೀಣ ಪ್ರದೇಶಗಳ ರೈತರು, ಕೂಲಿಕಾರ್ಮಿಕರು ಸೇರಿದಂತೆ ಸಂಕಷ್ಟದಲ್ಲಿರುವವರನ್ನು ಓಲೈಸುವ ನಿಟ್ಟಿನಲ್ಲಿ ಅವರ ಪರವಾಗಿರುವಂತೆ ಬಿಂಬಿಸಿಕೊಳ್ಳುತ್ತಾ, ರೈತ ವಿರೋಧಿಯಾಗಿರುವ ದೇಶ ಮತ್ತು ವಿದೇಶಗಳ ದೊಡ್ಡ ಬಂಡವಾಳದಾರರ, ಭೂಮಾಲೀಕರ ಪರವಾಗಿ ಜಾಗತೀಕರಣದ ನೀತಿಗಳನ್ನೇ ಮುಂದುವರಿಸಿಕೂಂಡು ಬರುತ್ತಿರುವ ಪರಿಣಾಮ ಕೃಷಿ ಉತ್ಪಾದನೆ ನಿರೀಕ್ಷಿತ ಪ್ರಮಾಣದಲ್ಲಾಗುತ್ತಿಲ್ಲ. ಸರ್ಕಾರ ಮುಸುಕಿನ ಜೋಳಕ್ಕೆ ಬೆಂಬಲ ಬೆಲೆ 1310ನ್ನು ಕಾಟಾಚಾರಕ್ಕೆ ಘೋಷಣೆ ಮಾಡಿದೆ. ಆದರೆ ಇದು ಸಾಲದು. ಮುಸಕಿನ ಜೋಳಕ್ಕೆ ಕನಿಷ್ಠ 2010 ಹಾಗೂ ರಾಗಿಗೆ 2800 ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿದರು.
ಅರ್ಹರಿಗೆ ಸರ್ಕಾರ ಕೂಡಲೇ ಮನೆ ಮತ್ತು ನಿವೇಶನಗಳನ್ನು ಹಂಚಿಕೆ ಮಾಡಬೇಕು. ಅರಣ್ಯ ಭೂಮಿಯಲ್ಲಿ ಸಾಗುವಳಿ ನಿರತರನ್ನು ಒಕ್ಕಲೆಬ್ಬಿಸುವುದನ್ನು ಹಾಗೂ ಆ ರೈತರ ಮೇಲೆ ಕೇಸುಗಳನ್ನು ದಾಖಲಿಸಿ ಜೈಲಿಗೆ ಕಳುಹಿಸುವುದನ್ನು ನಿಲ್ಲಿಸಬೇಕು. ರೈತರ ಆತ್ಮಹತ್ಯೆ ತಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಸಮಿತಿಯ ಅಧ್ಯಕ್ಷ ಎಚ್.ಎಂ.ರಾಮಲಿಂಗಪ್ಪ, ವಾಲ್ಮೀಕಿ ಅಶ್ವಥಪ್ಪ, ಬಿ.ಆಂಜನೇಯರೆಡ್ಡಿ, ನಾಗೀರೆಡ್ಡಿ, ವೆಂಕಟರೆಡ್ಡಿ, ಮುಸ್ತಾಫ್, ಮಹಮದ್ ಆಕ್ರಂ, ಆರ್.ಚಂದ್ರಶೇಖರರೆಡ್ಡಿ, ಮಹಮದ್ ಆರೀಫ್, ಮೇಕಾನಿಕ್ ಬಾಬು ಮುಂತಾದವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

