'ದೈವ ಸ್ವರೂಪಿ ಪ್ರಕೃತಿಗೆ ಎಗ್ಗಿಲ್ಲದೆ ಹಾನಿ'
ಚಿಂತಾಮಣಿ: ಅಭಿವೃದ್ಧಿ ನೆಪದಲ್ಲಿ ಇಂದು ನಾವು ಪ್ರಕೃತಿಗೆ ಸವಾಲೆಸೆದು ನಿಂತಿದ್ದೇವೆ. ನಮಗೆ ಪ್ರಯೋಜನವಿದೆ ಎಂಬುದು ಗೊತ್ತಾದರೆ ಸಾಕು ಏನೆಲ್ಲಾ ಮಾಡಲು ಸಿದ್ದರಿದ್ದೇವೆ. ಅನಾದಿಕಾಲದಿಂದ ನಮ್ಮನ್ನು ಪೋಷಿಸುತ್ತಾ ಬಂದಿರುವ ದೈವ ಸ್ವರೂಪಿ ಪ್ರಕೃತಿಗೆ ಎಗ್ಗಿಲ್ಲದೆ ಹಾನಿ ಉಂಟಾಗುತ್ತಿದೆ.ಪ್ರಕೃತಿ ಮತ್ತು ಮಾನವನ ನಡುವೆ ಸಮನ್ವಯ ಅಗತ್ಯ. ಇಲ್ಲದಿದ್ದರೆ ಮುಂದೊಂದು ದಿನ ತೀವ್ರ ಕಷ್ಟದಿನಗಳನ್ನು ಎದುರಿಸಬೇಕಾಗುತ್ತದೆ. ಎಂದು ಪ್ರವಚನಕಾರ ತಳಗವಾರ ಆನಂದ್ ಅಭಿಪ್ರಾಯಪಟ್ಟರು.
ತಾಲೂಕಿನ ಕೈವಾರ ಯೋಗಿ ನಾರೇಯಣ ಮಠದಲ್ಲಿ ನಡೆದ ಹುಣ್ಣಿಮೆ ವಿಶೇಷ ಕಾರ್ಯಕ್ರಮದ ಅಂಗವಾಗಿ ಪ್ರಕೃತಿ ಮತ್ತು ಮಾನವ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಹುಣ್ಣಿಮೆ ವಿಶೇಷ ಕೈಂಕರ್ಯದಲ್ಲಿ ತಾತಯ್ಯನವರ ಉತ್ಸವ ಮೂರ್ತಿಗೆ ವಿಶೇಷ ಅಭಿಷೇಕ ಮತ್ತು ಅಷ್ಟಾವಧಾನ ಸೇವೆ ನೆರವೇರಿಸಲಾಯಿತು. ತಾತಯ್ಯನವರ ಬೃಂದಾವನವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು.
ಮಕ್ಕಳ ಕಲಿಕೋತ್ಸವ ಕಾರ್ಯಕ್ರಮ 21ರಿಂದ
ಗುಡಿಬಂಡೆ: ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.21 ರಂದು ಕ್ಲಸ್ಟರ್ ಮಟ್ಟದ ಕಲಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳ ಕಲಿಕೆಯ ಬಗ್ಗೆ ಖಾತ್ರಿ ಪಡಿಸಿಕೊಳ್ಳಲು ಶಿಕ್ಷಣ ಇಲಾಖೆ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಎಸ್ಡಿಎಂಸಿ ಪದಾಧಿಕಾರಿಗಳು, ಪೋಷಕರು, ಜನಪ್ರತಿನಿಧಿಗಳು ಸೇರಿದಂತೆ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕ್ಲಸ್ಟರ್ಮಟ್ಟದ ಸಿಆರ್ಪಿ ಕೆ. ಗೋವಿಂದಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜೇತ ಶಿಕ್ಷಕರಿಗೆ ಅಭಿನಂದನೆ
ಮಾಲೂರು: ಕೋಲಾರದಲ್ಲಿ ನೆಡೆದ ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳಲ್ಲಿ ಭಾಗವಹಿಸಿ ಆಶುಭಾಷಣ ಹಾಗೂ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿರುವ ಶಿಕ್ಷಕರನ್ನು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಭಿನಂದಿಸಿದೆ. ತಾಲೂಕಿನ ಮಲಿಯಪಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಸುಧಾ ಆಶು ಭಾಷಣದಲ್ಲೂ , ಪಾಳ್ಯದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಆಶೋಕ್ ಗಾಯನದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕ್ದೆ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುಂಡಪ್ಪ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ. ಮುನಿನಾರಾಯಣಪ್ಪ ಅಭಿನಂದಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

