ಪಡಿತರ ಅವ್ಯವಹಾರ: ಕ್ರಮಕ್ಕೆ ಆಗ್ರಹಿಸಿ ಧರಣಿ
ಬಾಗೇಪಲ್ಲಿ: ತಾಲೂಕಿನ ನ್ಯಾಯ ಬೆಲೆ ಅಂಗಡಿಗಳಲ್ಲಿ ಅವ್ಯವಹಾರ, ಪಡಿತರ ಚೀಟಿಗಳ ವಿತರಣೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಹಾಗೂ ತೂಕದಲ್ಲಿ ಮೋಸ ಮಾಡುತ್ತಿರುವ ಡೀಲರ್ಗಳ ವಿರುದ್ಧ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಧರಣಿ ನಡೆಸಿದರು.
ಡಾ.ಹೆಚ್.ಎನ್. ವೃತ್ತದಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಹೊರಟ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ತಾಲ್ಲೂಕು ಕಚೇರಿಯ ಮುಂದೆ ಪ್ರತಿಭಟಿಸಿದರು.
ಆರೋಪ: ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಟಿ. ಲಕ್ಷ್ಮೀನಾರಾಯಣರೆಡ್ಡಿ, ತಾಲ್ಲೂಕಿನ ಕಸಬಾ ಹೋಬಳಿ ಯಲ್ಲಂಪಲ್ಲಿ ಗ್ರಾ.ಪಂಗೆ ಸೇರಿದ ಲಗ್ಗುಮದ್ದೇಪಲ್ಲಿ ಗ್ರಾಮದಲ್ಲಿರುವ ಸರ್ಕಾರಿ ನ್ಯಾಯಬೆಲೆ ಅಂಗಡಿಯ ಮಾಲೀಕ ಎಲ್.ಆರ್. ವೆಂಕಟರಾಮಿರೆಡ್ಡಿ ಎಂಬುವವರು ರೈತರು ಸೇರಿದಂತೆ ಪಡಿತರದಾರರಿಗೆ ಸಕ್ರಮವಾಗಿ ವಿತರಣೆ ಮಾಡದೆ ಕಾಳ ಸಂತೆಯಲ್ಲಿ ಮಾರಾಟ ಮಾಡಿಕೊಳ್ಳುತ್ತಿದ್ದರೂ ಸಹ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಜರುಗಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆಂದು ಆರೋಪಿಸಿದರು.
ಪರವಾನಗಿ ರದ್ದುಗೊಳಿಸಲು ಆಗ್ರಹ: ಪಡಿತರದಾರರಿಗೆ ವಿತರಣೆ ಮಾಡುವ ಸಮಯದಲ್ಲಿ ಅಕ್ಕಿ, ಗೋಧಿ, ಸಕ್ಕರೆ, ಸೀಮೆ ಎಣ್ಣೆ ಏಕಕಾಲದಲ್ಲಿ ವಿತರಣೆ ಮಾಡದೆ ತಮಗೆ ಇಷ್ಟ ಬಂದ ಸಮಯದಲ್ಲಿ ವಿತರಣೆ ಮಾಡುತ್ತಿದ್ದಾರೆ.ಹೆಚ್.ಪಿ. ಗ್ಯಾಸ್ ಇದ್ದವರಿಗೂ ಸೀಮೆ ಎಣ್ಣೆಯನ್ನು ತರಿಸಿಕೊಂಡು, ಆ ರೈತರಿಗೆ ಸೀಮೆ ಎಣ್ಣೆ ನೀಡದೆ ನಿಮಗೆ ಗ್ಯಾಸ್ ಇದೆ ನಿಮಗೆ ಸೀಮೆ ಎಣ್ಣೆ ನೀಡುವುದಿಲ್ಲ ಎಂಬ ನೆಪ ಹೇಳಿ ಸರ್ಕಾರಕ್ಕೂ ಹಾಗೂ ಪಡಿತರದಾರರಿಗೂ ವಂಚಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಿಕೊಳ್ಳುತ್ತಿರುವ ಎಲ್.ಆರ್. ವೆಂಕಟರಾಮಿರೆಡ್ಡಿಯವರಿಗೆ ಸೇರಿದ ನ್ಯಾಯ ಬೆಲೆ ಅಂಗಡಿಯ ಪರವಾನಗಿ ರದ್ದು ಮಾಡಬೇಕೆಂದು ಆಗ್ರಹಿಸಿದರು.ಸಂಘದ ಜಿಲ್ಲಾ ಉಪಾಧ್ಯಕ್ಷ ಜೆ.ಬಿ. ಆದಿನಾರಾಯಣ ರೆಡ್ಡಿ, ಜಿಲ್ಲಾ ಮಹಿಳಾಧ್ಯಕ್ಷೆ ಅನುಸೂಯಮ್ಮ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

