ದೇಗುಲ ಆವರಣದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ: ಅಮಾನತ್ಗೆ ಆಗ್ರಹ
ಚಿಂತಾಮಣಿ: ಮುಜರಾಯಿ ಇಲಾಖೆಗೆ ಸೇರಿದ ದೇವಾಲಯ ಆವರಣದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಿರುವುದಕ್ಕೆ ಕಾರಣನಾದ ತಾಪಂ ಕಾರ್ಯನಿರ್ವಾಣಾಧಿಕಾರಿ ವಸಂತ್ಕುಮಾರ್ರನ್ನು ಕೂಡಲೇ ಅಮಾನತ್ ಮಾಡಲು ಆಗ್ರಹಿಸಿ ಮುಂಗಾನಹಳ್ಳಿ ಹೋಬಳಿ ಬಟ್ಲಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಸ್ಥರು ತಾಲೂಕು ಪಂಚಾಯ್ತಿ ಮುಂದೆ ಪ್ರತಿಭಟನೆ ನಡೆಸಿದರು. ಮುಂಗಾನಹಳ್ಳಿ ಹೋಬಳಿಗೆ ಸೇರಿದ ಬಟ್ಲಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಯನುಮಲಪಾಡಿ ಗ್ರಾಮದಲ್ಲಿ ಇರುವ ಲಕ್ಷ್ಮಿವೆಂಕಟೇಶ್ವರ ದೇವಾಲಯವು ಮುಜರಾಯಿ ಇಲಾಖೆಗೆ ಒಳಪಟ್ಟಿದೆ. ಇದನ್ನು ಅರಿಯದ ತಾಪಂ ಕಾರ್ಯನಿರ್ವಾಹಣಾಧಿಕಾರಿ ಮತ್ತು ಪಂಚಾಯ್ತಿ ಪಿಡಿಓ ಹಾಗೂ ಕಾರ್ಯದರ್ಶಿ ಶಾಮೀಲಾಗಿ ಮುಜರಾಯಿ ಇಲಾಖೆಗೆ ಸೇರಿದ ಸ್ಥಳದಲ್ಲಿ ಅಂಗನವಾಡಿ ಕೇಂದ್ರಕ್ಕೆ ಸ್ವಾಧೀನ ಪಡಿಸಿಕೊಳ್ಳುತ್ತಿರುವುದು ಸರಿಯಿಲ್ಲವೆಂದು ಗ್ರಾಮಸ್ಥರು ಹಾಗೂ ಭಕ್ತಾಧಿಗಳು ಮನವಿ ಮಾಡಿದ್ದರೂ ನಿರ್ಲಕ್ಷ ಧೋರಣೆ ಅನುಸರಿಸಿ ರಾಜಕೀಯ ಒತ್ತಡಗಳಿಗೆ ಮಣಿದು ಕಾನೂನು ವಿರುದ್ಧವಾಗಿ ಕಟ್ಟಡ ನಿರ್ಮಾಣವಾಗಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಕೂಡಲೇ ಎತ್ತಂಗಡಿ ಮಾಡಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಾಲೂಕು ದಂಡಾಧಿಕಾರಿ ಕೆ.ಟಿ.ಕೃಷ್ಣಸ್ವಾಮಿಗೆ ಮನವಿ ಪತ್ರವನ್ನು ಯನುಮಲಪಾಡಿ ಗ್ರಾಮದ ಮುಖಂಡ ಚಂದ್ರಾರೆಡ್ಡಿ ನೀಡಿದರು. ಬಟ್ಲಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಕೃಷ್ಣಾರೆಡ್ಡಿ,ಮುಖಂಡರಾದ ಕೈವಾರ ಮಂಜುನಾಥ್,ವಿ.ಅಮರ್,ಶ್ರೀರಾಮರೆಡ್ಡಿ ,ನಾಗರಾಜ್,ಸುಬ್ರಮಣಿ,ವೆಂಕಟರವಣಪ್ಪ,ವಿ.ಶ್ರೀನಿವಾಸರೆಡ್ಡಿ,ಗಂಗುಲಪ್ಪ,ಕಾರ್ತೀಕ್,ಕಿಟ್ಟಣ್ಣ ಸೇರಿದಂತೆ ನೂರಾರು ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

