ಕೋಲಾರ

ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಿಗೆ ಛಲ ಬೇಕು: ಡಿಸಿ

Published On :

ಕ.ಪ್ರ.ವಾರ್ತೆ ,  ಕೋಲಾರ ,  ಡಿ.18
ಸ್ಪರ್ಧಾತ್ಮಕ ಪರೀಕ್ಷೆ ಬರೆಯಬೇಕೆಂಬ ಹಂಬಲ ಹೊಂದಿರುವ ವಿದ್ಯಾರ್ಥಿಗಳಲ್ಲಿ ಗುರಿ ಸಾಧಿಸುವ :ವಲ ಇರಬೇಕೆಂದು ಜಿಲ್ಲಾಧಿಕಾರಿ ಡಿ.ಕೆ. ರವಿ ಕರೆ ನೀಡಿದರು.
ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಜಿಲ್ಲಾ ಶಾಖೆಯಿಂದ ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಐಎಎಸ್, ಐಪಿಎಸ್ ಹಾಗೂ ಕೆಪಿಎಸ್‌ಸಿ ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳು ಗುರಿ ಮುಟ್ಟಲು ತಮ್ಮ ಮನಸ್ಸನ್ನು ಕಲ್ಲಿನಂತೆ ಗಟ್ಟಿ ಮಾಡಿಕೊಂಡು ಓದಿದಲ್ಲಿ ಉತ್ತಮ ಸಾಧನೆ ಮಾಡುವುದು ಕಷ್ಟವೇನಲ್ಲವೆಂದರು.
ದಿನಕ್ಕೆ ಕನಿಷ್ಟ 4 ಗಂಟೆಗಳ ಕಾಲ ನಿರಂತರ ಅಧ್ಯಯನ ಮಾಡಿದರೆ ಸಾಕು, ಕೆಲವರು ದಿನಕ್ಕೆ 16 ಗಂಟೆಗಳ ಕಾಲ ಓದುತ್ತಾರೆ, ಪ್ರತಿದಿನ ಓದಿದ್ದನ್ನು ಬರೆಯುವ ಹವ್ಯಾಸದ ಮೂಲಕ ವಿಷಯ ಮರೆಯದಂತೆ ತಲೆಯಲ್ಲಿ ಗಟ್ಟಿಯಾಗಿಟ್ಟುಕೊಳ್ಳುವುದಕ್ಕೆ ಸಾಧ್ಯವಿದೆ. ವಿದ್ಯಾರ್ಥಿಗಳು ಅಹಂ ಬಿಟ್ಟು ಓದಿದರೆ ಖಂಡಿತ ಯಶಸ್ಸು ಸಿಗುತ್ತದೆ ಎಂದು ಹೇಳಿದರು.
ಶ್ರೀಮಂತರ ಮಕ್ಕಳು ಹೆಚ್ಚು ಓದಲ್ಲ ಅವರಿಗೆ ಹೊಟ್ಟೆ ತುಂಬಿರುತ್ತದೆ. ಮನೆಯ ವಾತಾವಣ ಸಹ ಓದಲು ಅವಕಾಶ ನೀಡಲ್ಲ. ಆದರೆ ಶ್ರಮಿಕರ ಮಕ್ಕಳು ಹಸಿದಿರುತ್ತಾರೆ. ಹಸಿದ ಹೊಟ್ಟೆ ಮನಸ್ಸು ನಿದ್ರೆ ಮಾಡಲು ಬಿಡುವುದಿಲ್ಲ. ಬಡತನ ಕಲಿಕೆಗೆ ಅಡ್ಡಿ ಬರುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆ ಬರೆಯಬೇಕೆಂದು ನಿರ್ಧರಿಸಿ,  ಏಕಾಗ್ರತೆಯಿಂದ ಓದಿದರೆ ಯಾವುದು ಕಷ್ಯವಾಗಲ್ಲ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಆಡಳಿತ ಭಾಷೆ ಕನ್ನಡ ಸೇರಿದಂತೆ 22 ಭಾಷೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅವಕಾಶವಿದೆ. ಇಂಗ್ಲಿಷ್ ಬಗ್ಗೆ ಸ್ವಲ್ಪ ಹೆಚ್ಚು ಜ್ಞಾನ ಇರಲಿ, ಪ್ರಾರಂಭಿಕ ಮತ್ತು ಮುಖ್ಯ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲ ಪ್ರಶ್ನೆಗಳಿಗೆ ಕಡ್ಡಾಯವಾಗಿ ಉತ್ತರ ಬರೆಯುವುದನ್ನು ಅಭ್ಯಾಸ ಮಾಡಿಕೊಳ್ಳಿ, ಸಂದರ್ಶನಕ್ಕೆ ಹಾಜರಾಗುವ ಸಂದರ್ಭದಲ್ಲಿ ಭಯಪಡಬೇಡಿ, ಆತ್ಮಸ್ತೈರ್ಯದಿಂದ ಮುನ್ನುಗಿ ಎಂದರು.
ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಚಿ.ನಾ. ರಾಮು  ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಅನಾವರಣಗೊಳಿಸಿದರು. ಜಿ.ಪಂ. ಸಿಇಒ ಎಂ.ಎಸ್. ಜುಲ್ಫೀಖಾರ್ ಉಲ್ಲಾ, ಡಿವೈಎಸ್ಪಿ ಕೆ. ಅಶೋಕ್‌ಕುಮಾರ್, ಕೋಲಾರ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ. ಸಿ. ನಾಗಭೂಷಣ್, ಸಣ್ಣ ನೀರಾವರಿ ಇಲಾಖೆಯ ಎಇಇ ಟಿ. ಪ್ರದೀಪ್,  ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ. ಗೋಪಿನಾಥ್, ಪ್ರಧಾನ ಕಾರ್ಯದರ್ಶಿ ಕೆ.ಎಸ್. ಗಣೇಶ್, ಕರ್ನಾಟಕ ಆರ್ಯ ವೈಶ್ಯ ಯುವಜನ ಮಹಾಸಭಾದ ರಾಜ್ಯ ನಿರ್ದೇಶಕ ಆದರ್ಶ ದೇವತಾ ಇದ್ದರು.
ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಬೆಂಗಳೂರು ವಿವಿಯ  ಪ್ರೋ. ಎನ್. ರಾಮಚಂದ್ರಸ್ವಾಮಿ, ಎನ್. ಮುರಳಿ, ಗುಂಡಪ್ಪ, ಎಚ್.ವಿ. ನಾಗೇಶ್ ಮಾರ್ಗದರ್ಶನ ನೀಡಿದರು. ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಆರ್.ಎನ್. ಹನುಮಂತಪ್ಪ ಸ್ವಾಗತಿಸಿದರು.  ಎಂ.ಕೆ.  ಶಶಿಕಲಾ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.