ಕೋಲಾರ

ಕುಡಿವ ನೀರು: ಅಧಿಕಾರಿಗಳ ವೈಫಲ್ಯ ಖಂಡಿಸಿ ಪ್ರತಿಭಟನೆ

Published On :

ಚಿಂತಾಮಣಿ: ಕುಡಿಯುವ ನೀರನ್ನು ವ್ಯವಸ್ಥೆಗೊಳಿಸುವಲ್ಲಿ ಜಿಲ್ಲಾ ಪಂಚಾಯ್ತಿ ಸ್ಥಳೀಯ ಅಧಿಕಾರಿಗಳು ವಿಫಲಗೊಂಡು ಗ್ರಾಮಸ್ಥರಿಗೆ ಕಿರಿ ಕಿರಿ ಉಂಟು ಮಾಡುತ್ತಿರುವ ಅಧಿಕಾರಿಗಳ ಧೋರಣೆ ವಿರುದ್ಧ ಯನುಮಲಪಾಡಿ ಗ್ರಾಮದ ನೂರಾರು ಗ್ರಾಮಸ್ಥರು ನಗರದಲ್ಲಿ ಪ್ರತಿಭಟನೆ ನಡೆಸಿ ಅಧಿಕಾರಿಗೆ ದಿಗ್ಭಂಧನ ಹಾಕಿ ನ್ಯಾಯಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಚಿಂತಾಮಣಿ ತಾ. ಯನುಮಲಪಾಡಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಹಲವು ಬಾರಿ ದೂರು ನೀಡಿದ್ದರೂ ಜಿಪಂ ಸಹಾಯಕ ಕಾರ್ಯಪಾಲಕ ಅಭಿಯಂತರ ನರಸಿಂಹಮೂರ್ತಿ ಹಾಗೂ ಜೆ.ಎ.ಕೃಷ್ಣಪ್ಪ ಪೈಪ್‌ಲೈನ್
ಕಾಮಗಾರಿ ಮಾಡದೆ ನಿರ್ಲಕ್ಷ ಧೋರಣೆ ಅನುಸರಿಸಿ ಕಾಲಹರಣ ಮಾಡುತ್ತಿರುವ ಬಗ್ಗೆ ಯನುಮಲಪಾಡಿ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.
ಯನುಮಲಪಾಡಿ ಗ್ರಾಮದಲ್ಲಿ ಕುಡಿಯುವ ನೀರು ಸಾರ್ವಜನಿಕರಿಗೆ ಸಮರ್ಪಕವಾಗಿ ಪೂರೈಸುವಲ್ಲಿ ವಿಫಲಗೊಂಡಿರುವ ಅಧಿಕಾರಿಗಳ ವಿರುದ್ಧ ದಿಕ್ಕಾರಗಳನ್ನು ಕೂಗಿ ಮತ್ತು ಪೈಪ್‌ಲೈನ್ ಕಾಮಗಾರಿಗೆ ಲಕ್ಷಾಂತರ ರೂ.ಗಳು ವ್ಯಯ ಮಾಡಿದರೂ ಸಹ ಗ್ರಾಮಸ್ಥರಿಗೆ ಸಮರ್ಪಕವಾಗಿ ನೀರು ಸರಬರಾಜು ಮಾಡಲು ನಿರ್ಲಕ್ಷತೆಯಿಂದ ವರ್ತಿಸುತ್ತಿರುವ ಅಧಿಕಾರಿಗಳ ಬೇಜವಾಬ್ದಾರಿ ವಿರುದ್ಧ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಜನರು ಅಧಿಕಾರಿ ನರಸಿಂಹಮೂರ್ತಿಗೆ ಮುತ್ತಿಗೆ ಹಾಕಿ ಘೇರಾವ್ ಮಾಡಿದರು. ಕಳೆದ ಹಲವು ತಿಂಗಳಿಂದ ಮುಂಗಾನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಸರಿಯಾಗಿ ಕಾರ್ಯನಿರ್ವಹಿಸದೆ ಮತ್ತು ಗುತ್ತಿಗೆದಾರ ಮುತ್ತುರೆಡ್ಡಿ ಜೊತೆ ಸೇರಿಕೊಂಡು ಏಕ ಪಕ್ಷೀಯವಾಗಿ ಕೆಲಸ ಮಾಡುತ್ತಾ ಕಮೀಷನ್ ಏಜೆಂಟರಂತೆ ಕಾರ್ಯನಿರ್ವಹಿಸುತ್ತಿರುವ ಕೃಷ್ಣಪ್ಪರನ್ನು  ವರ್ಗಾಯಿಸಬೇಕೆಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.