ಅಪೌಷ್ಟಿಕತೆಯುಳ್ಳ ಮಕ್ಕಳ ಚಿಕಿತ್ಸೆಗೆ ರು. 50 ಸಾವಿರ: ಸಿಡಿಪಿಒ
ಕೆಜಿಎಫ್: ದೇಶದಲ್ಲಿ ಶೇ.47ರಷ್ಟು ಮಕ್ಕಳು ಪೌಷ್ಠಿಕಾಂಶದ ಕೊರತೆಯಿಂದ ಬಳಲುತ್ತಿದ್ದಾರೆ. ಅಪೌಷ್ಟಿಕತೆಯಿಂದ ಮಕ್ಕಳಿಗೆ ಮಾನಸಿಕ ಕಾಯಿಲೆ, ಅಂಗವಿಕಲತೆ, ಆರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗುತ್ತದೆ ಮಕ್ಕಳಲ್ಲಿರುವ ಅಪೌಷ್ಟಿಕತೆಯನ್ನು ಹೋಗಲಾಡಿಸಲು ರಾಜ್ಯ ಸರ್ಕಾರ ಯೋಜನೆ ಜಾರಿಗೊಳಿಸಿದ್ದು ಅಂತಹ ಮಕ್ಕಳಿಗೆ ಚಿಕಿತ್ಸಾ ವೆಚ್ಚಕ್ಕೆ 50 ಸಾವಿರ ನೀಡಲಿದೆ ಎಂದು ಬೇತಮಂಗಲ ಹೋಬಳಿಯ ಸಿಡಿಪಿಒ ಶಂಕರಮೂರ್ತಿ ಕೆಜಿಎಫ್ನ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತಿಳಿಸಿದರು.
ಪೌಷ್ಠಿಕತೆ ಕೊರತೆಯಿರುವ ಮಕ್ಕಳನ್ನು ಸಾರ್ವಜನಿಕ ಆಸ್ಪತ್ರೆ ಮತ್ತು ಇತರೆ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷಿಸಿ ದೃಢ ಪಡಿಸಿದರೆ ಅಂತಹ ಮಕ್ಕಳಿಗೆ ಹೃದಯ ಚಿಕಿತ್ಸೆಯನ್ನು ಬಿಟ್ಟು ಉಳಿದೆಲ್ಲಾ ರೀತಿಯ ಕಾಯಿಲೆಗೆ 50 ಸಾವಿರವರೆಗೂ ಕೋಲಾರದ ಡಾ.ದೇವರಾಜು ಅರಸು ವೈದ್ಯಕೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆಯನ್ನು ಪಡೆಯಬಹುದಾಗಿದೆ ಎಂದರು.
ಇನ್ನು ಮುಂದೆ ಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಸ್ಥಳಿಯ ಶಿಶು ಅಭಿವೃದ್ಧಿ ಕೇಂದ್ರ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಪ್ರತಿ ಮಕ್ಕಳಿಗೆ ವಾರದಲ್ಲಿ ಮೂರು ದಿನಗಳ್ಲಲಿ ಪ್ರತಿದಿನ 3 ವೇಳೆಗೆ ಮೊಟ್ಟೆ ಮತ್ತು ಹಾಲನ್ನು ನೀಡಲಾಗುವುದು.
ಅದೇ ರೀತಿ ತಮ್ಮ ಮಕ್ಕಳ ಅಪೌಷ್ಠಿಕತೆಯ ಬಗ್ಗೆ ಅಂಗನವಾಡಿ ಕೇಂದ್ರದಲ್ಲಿ ಕ್ಯಾಲ್ಸಿಯಮ್, ಐರನ್, ಬಿ.ಕಾಂಪ್ಲೆಕ್ಸ್ ಸಿರಪ್, ವಿಟಮಿನ್ ಗುಳಿಗೆ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗಿದೆ ತಾಯಂದಿರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಹಾಗೂ ತಮ್ಮ ಮಕ್ಕಳಿಗೆ ಈ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಕಾರ್ಯಕರ್ತೆಯರು, ಸಿಬ್ಬಂದಿ, ಮತ್ತು ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸ್ಪಂದಿಸದೇ ಹೋದಲ್ಲಿ ತಾವು ನೇರವಾಗಿ ತಮಗೆ ಮತ್ತು ಕೋಲಾರ ಜಿಲ್ಲಾ ಆರೋಗ್ಯ ಇಲಾಖೆಗೆ ದೂರನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.ಸಾರ್ವಜನಿಕ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ರಘುರತ್ನಂ ಅವರು ಮಕ್ಕಳ ತಾಯಿಯರನ್ನು ಉದ್ದೇಶಿಸಿ ಮಾತನಾಡಿ ಮಕ್ಕಳಿಗೆ ಎಳೆ ವಯಸ್ಸಿನಲ್ಲೆ ಪೌಷ್ಟಿಕಾಂಶ ಆಹಾರ ನೀಡುವ ಮೂಲಕ ಅವರ ಬೆಳವಣಿಗೆ ಮತ್ತು ಆರೋಗ್ಯ ಉತ್ತಮವಾಗಿರುತ್ತದೆ. ಮಕ್ಕಳು ಬೆಳೆದ ಮೇಲೆ ನಾವು ಏನು ಮಾಡಿದರೂ ಪ್ರಯೋಜನವಾಗಲ್ಲ ಆದ್ದರಿಂದ ತಾಯಂದಿರು ತಮ್ಮ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದರು.
ಕೆಜಿಎಫ್ ಕ್ಷೇತ್ರದ ನಗರ ಹಾಗೂ ಗ್ರಾಮೀಣ ಭಾಗದ ಅಂಗನವಾಡಿ ಕೇಂದ್ರದ ಕಾರ್ಯಕರ್ತರು, ಸಿಬ್ಬಂದಿ ಸೇರಿದಂತೆ ತಾಯಂದಿರು ತಮ್ಮ ಮಕ್ಕಳೊಂದಿಗೆ ಆಗಮಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

