ಕೋಲಾರ

ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

Published On :

ಬಾಗೇಪಲ್ಲಿ: ಅಸಮರ್ಪಕ ವಿದ್ಯುತ್ ಪೂರೈಕೆಯನ್ನು ಖಂಡಿಸಿ ಕರವೇ ಕಾರ್ಯಕರ್ತರು ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಡಾ. ಎಚ್.ಎನ್. ವೃತ್ತದಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆಯಲ್ಲಿ ಹೊರಟು ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ಚಂದ್ರಶೇಖರ್, ರಾಜ್ಯದ ಬಹುತೇಕ ಎಲ್ಲಾ ಜಲಾಶಯಗಳಲ್ಲಿ ಸಮೃದ್ಧ ನೀರಿದ್ದರೂ ಸಕ್ರಮವಾಗಿ ವಿದ್ಯುತ್ ಉತ್ಪಾದನೆ ಮಾಡದೇ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸಿದೆ ಎಂದು ಆರೋಪಿಸಿದರು.
ಕಳೆದ ಹಲವು ದಿನಗಳಿಂದ ತಾಲೂಕಿನಲ್ಲಿ ಅಸಮರ್ಪಕ ವಿದ್ಯುತ್ ಪೂರೈಕೆಯಿಂದಾಗಿ ವಿದ್ಯಾರ್ಥಿಗಳು,ರೈತಾಪಿ ವರ್ಗ,ಸಣ್ಣ ಮತ್ತು ಗುಡಿ ಕೈಗಾರಿಕೆಗಳಿಗೆ ತೀವ್ರ ತೊಂದರೆಯಾಗಿದೆ ಎಂದು ದೂರಿದ ಅವರು, ಕನಿಷ್ಠ ಕರೆಂಟ್ ತೆಗೆಯುವಂತಹ ವೇಳಾಪಟ್ಟಿಯನ್ನು ಸಾರ್ವಜನಿಕರಿಗೆ ತಿಳಿಸದೇ ಅವರಿಗೆ ಮನಬಂದಂತೆ ವಿದ್ಯುತ್ ತೆಗೆಯುವ ಮೂಲಕ ತಾಲೂಕಿನ ಜನತೆಯ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿಗೆ ಪ್ರತಿನಿತ್ಯ 100 ಮೆಗಾವ್ಯಾಟ್ ವಿದ್ಯುತ್ ಅವಶ್ಯಕತೆ ಇದೆ. ಆದರೆ ಪ್ರತಿನಿತ್ಯ ಕೇವಲ 46 ಮೆಗಾವ್ಯಾಟ್ ಮಾತ್ರ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದರಿಂದ ಜನತೆಗೆ ಕುಡಿಯುವ ನೀರಿಗೂ  ತೀವ್ರ ಹಾಹಾಕಾರ ಉಂಟಾಗಿದೆ.
ರೈತರು ಬೆಳೆದಿರುವ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳಲು ವಿದ್ಯುತ್ ಸರಬರಾಜಿನಲ್ಲಿ ಏರುಪೇರಿನಿಂದಾಗಿ ಆಡಚಣೆಯಾಗುವ ಮೂಲಕ ಸಾರ್ವಜನಿಕರು ಗಂಭೀರ ಸಮಸ್ಯೆಗಳನ್ನು ಅನುಭವಿಸಬೇಕಾಗಿದೆ ಎಂದು ಆರೋಪಿಸಿದರು. ಬೆಸ್ಕಾಂ ಇಲಾಖೆಯ ಎ.ಇ.ಇ. ಬಾಲಾಜಿ ರವರಿಗೆ ಮನವಿ ಪತ್ರ ಸಲ್ಲಿಸಲಾಯಿತು.  ಕರವೇ ಮುಖಂಡ ಬಿ.ಟಿ.ಸಿ .ಸೀನಾ,ಮೂರ್ತಿ,ಜಬೀವುಲ್ಲಾ,ಮುನಿ ರಾಜು,ಶ್ರೀನಿವಾಸ್,ಸೀನಾ,ಗೋಪಿ, ವಲಿ, ಕೃಷ್ಣ,ವಿದ್ಯಾರ್ಥಿ ಘಟಕದ ಶಶಿಕುಮಾರ್, ಮೋಹನ್, ಬಾಬುನಾಯಕ್, ಅಂಜಿ,ಸುರೇಶ್,ಸೀನಾ, ಮಧು ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.