ಕೋಚಿಮುಲ್ ನೇಮಕಾತಿ ರದ್ದತಿಗೆ ವೆಂಕಟೇಶ್ ಒತ್ತಾಯ
ಕೋಲಾರ: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನೇಮಕಾತಿಯಲ್ಲಿ ಪಾರದರ್ಶಕತೆ ಉಲ್ಲಂಘನೆ ಆಗಿರುವುದರಿಂದ ಕೂಡಲೇ ನೇಮಕಾತಿ ರದ್ದು ಮಾಡಬೇಕೆಂದು ಒತ್ತಾಯಿಸಿ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವಿಟಪನಹಳ್ಳಿ ಎಂ. ವೆಂಕಟೇಶ್ ಆಗ್ರಹಿಸಿದ್ದಾರೆ.
ಕೋಚಿಮುಲ್ನ 86 ವಿವಿಧ ಹುದ್ದೆಗಳಿಗೆ ಸುಮಾರು 3,486 ಮಂದಿ ಅರ್ಜಿಗಳನ್ನು ಸಲ್ಲಿಸಿದ್ದು ಪಾರದರ್ಶಕತೆ ಇಲ್ಲದೆ ಹಾಗೂ ಒಕ್ಕೂಟದಲ್ಲಿ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ತಾಂತ್ರಿಕ ಹುದ್ದೆಗಳಲ್ಲಿ ಶೇ.67ರಷ್ಟು ಮೀಸಲಿಡಬೇಕೆಂದು 2008ರಲ್ಲಿ ಸಹಕಾರ ಸಂಘಗಳ ಅಪರ ನಿಬಂಧಕರ ಆದೇಶವನ್ನು ಉಲ್ಲಂಘಟನೆ ಮಾಡಿ ತಮಗಿಷ್ಟ ಬಂದಂತೆ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ಒಕ್ಕೂಟದ ನಿರ್ವಹಕ ನಿರ್ದೇಶಕರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಈ ಹಿಂದೆ ಒಕ್ಕೂಟದಲ್ಲಿ ಆಡಳಿತಾಧಿಕಾರಿ ಆಗಿದ್ದ ಕೆ.ವಿ.ನಾರಾಯಣಸ್ವಾಮಿ ಎಂಬುವರು ನಿವೃತ್ತರಾಗಿದ್ದು ಇದೇ ವ್ಯಕ್ತಿಯನ್ನು ನೇಮಕಾತಿ ಸಮಿತಿಗೆ ಸೇರಿಸಿಕೊಂಡು ಅಕ್ರಮ ಎಸಗಲಾಗಿದೆ ಎಂದು ತಿಳಿಸಿದ್ದಾರೆ. ಅನೇಕ ಅರ್ಹ ಅಭ್ಯರ್ಥಿಗಳ ಅಂಕಪಟ್ಟಿಯನ್ನು ಕಡತಗಳಿಂದ ತೆಗೆದು ಹಾಕಿದ್ದಾರೆ, ಮೀಸಲಾತಿ ನಿಯಮ ಪಾಲನೆ ಮಾಡಿಲ್ಲ, ಬೇರೆ ರಾಜ್ಯದವರಿಗೂ ಕೆಲಸ ನೀಡುವ ಮೂಲಕ ಸ್ಥಳೀಯರಿಗೆ ಅನ್ಯಾಯ ಮಾಡಿರುವುದರಿಂದ ಕೂಡಲೇ ನೇಮಕಾತಿ ರದ್ದು ಮಾಡಿ ಅರ್ಹರಿಗೆ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.
ಕೋಲಾರ ಹಾಲು ಒಕ್ಕೂಟದ ನೇಮಕಾತಿಯಲ್ಲಿ ಆಗಿರುವ ಗೋಲ್ಮಾಲ್ ಬಗ್ಗೆ ಕನ್ನಡಪ್ರಭದಲ್ಲಿ ಪ್ರಕಟವಾಗಿರುವ ವರದಿಯನ್ನು ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಸಹಕಾರ ಇಲಾಖೆಯ ನಿಬಂಧಕರಿಗೂ ಮಾಹಿತಿ ನೀಡಿದ್ದು, ಅಕ್ರಮ ನೇಮಕಾತಿ ರದ್ದುಪಡಿಸದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕೋಚಿಮುಲ್ನಲ್ಲಿ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮ ನಡೆಯದಿದ್ದಲ್ಲಿ ಕೋರ್ಟಿಗೆ ಹೋಗುವ ಅವಶ್ಯಕತೆ ಇರಲಿಲ್ಲವೆಂದು, ಈಗ ನಡೆದಿರುವ ನೇರ ನೇಮಕಾತಿ ರದ್ದು ಮಾಡಿ ಹೊಸದಾಗಿ ನೇಮಕಾತಿ ಪ್ರಕ್ರಿಯೆ ನಡೆಸುವಂತೆ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

