ಕೋಲಾರ

ನೀರಿನ ಸಮಸ್ಯೆ; ಗುಳೆ ಹೋಗಲು ರೈತರ ಸಿದ್ಧತೆ

Published On :

ಚಿಂತಾಮಣಿ: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿ ನಾಗರಿಕರು ಸಂಕಷ್ಟ ಎದುರಿಸುತ್ತಿದ್ದಾರೆ.
ತಾಲೂಕಿನ ವ್ಯಾಪ್ತಿಯಲ್ಲಿ ಲೋಡ್ ಶೆಡ್ಡಿಂಗ್ ಹೆಸರಿನಲ್ಲಿ ಅಸಮರ್ಪಕ ವಿದ್ಯುತ್ ನೀಡುತ್ತಿದ್ದು, ರೈತರು ಇರುವ ಅಲ್ಪ-ಸ್ವಲ್ಪ ಪ್ರಮಾಣದ ನೀರನ್ನು ಕೊಳವೆ ಬಾವಿಗಳ ಮುಖಾಂತರ ರೈತರು ಬೆಳೆಗಳನ್ನು ಬೆಳೆಯುತ್ತಿದ್ದು, ಬೆಸ್ಕಾಂ ಅಧಿಕಾರಿಗಳು ರೈತರಿಗೆ ಸಮರ್ಪಕ ವಿದ್ಯುತ್ ಸರಬರಾಜು ಮಾಡದೆ, ರೈತರ ಜೊತೆ ಚೆಲ್ಲಾಟವಾಡುತ್ತಿರುವುದಾಗಿ ರೈತರು ಆರೋಪಿಸಿದ್ದಾರೆ.
ಹಳ್ಳಿ ಮತ್ತು ನಗರ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆಯಿಂದ ಜಾನುವಾರುಗಳಿಗೆ ನೀರಿನ ಸಮಸ್ಯೆ ತಲೆದೋರಿರುವುದರಿಂದ ರೈತರು ದಿಕ್ಕು ತೋಚದ ಸ್ಥಿತಿಯಲ್ಲಿ ಜಾನುವಾರುಗಳ ಸಂತೆಯಲ್ಲಿ ದನಗಳನ್ನು ಮಾರಾಟ ಮಾಡುತ್ತಿದ್ದಾರೆ. ಇನ್ನೂ ಮಳೆಗಾಲ ಮುಗಿಯುವ ಮೊದಲೇ ಪರಿಸ್ಥಿತಿ ಹೀಗಿದ್ದರೆ ಮುಂಬರುವ ಬೇಸಿಗೆಯನ್ನು ಎದುರಿಸಲು ಅಸಾಧ್ಯವೆಂದು ತಿಳಿದ ರೈತರು ವಲಸೆ ಹೋಗುವ ಸ್ಥಿತಿಯಲ್ಲಿದ್ದು, ಸರ್ಕಾರ ಈಕುರಿತು ಗಮನ ಹರಿಸಬೇಕಿದೆ.
ಕನಂಪಲ್ಲಿ ಕೆರೆ ನೀರು ಖಾಲಿ: ಚಿಂತಾಮಣಿ ನಗರಕ್ಕೆ ಜೀವಜಲ ತುಂಬುವ ಕನಂಪಲ್ಲಿ ಕೆರೆ ಶೇ.80 ರಷ್ಟು ನೀರು ಖಾಲಿಯಾಗಿರುವುದರಿಂದ ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಮುಂದಿನ ಬೇಸಿಗೆ ದಿನಗಳ ನೀರಿನ ಸಮಸ್ಯೆ ಎದುರಿಸಲು ಅಧಿಕಾರಿಗಳು ಸಿದ್ಧತೆ ನಡೆಸದೆ ಹೋದಲ್ಲಿ ಜನರ ಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ. ಸಂಬಂಧಪಟ್ಟ ಜಿಲ್ಲಾಡಳಿತ ಸಮರ್ಪಕ ವಿದ್ಯುತ್ ಮತ್ತು ನೀರಿನ ಸಮಸ್ಯೆ ಬಗೆಹರಿಸದಲ್ಲಿ ರೈತರು ವಲಸೆ ಹೋಗುವುದು ಖಚಿತ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.