ಎಲ್ಲ ದಾನಗಳಲ್ಲಿ ವಿದ್ಯಾದಾನ ಶ್ರೇಷ್ಠ
ಮಾಲೂರು: ಕ್ಷಣಿಕ ತೃಪ್ತಿ ನೀಡುವ ಅನ್ನದಾನಕ್ಕಿಂತ ಜೀವನಪರ್ಯಂತ ನೆಮ್ಮದಿಯ ಬದುಕನ್ನು ನೀಡುವ ವಿದ್ಯಾದಾನ ಶ್ರೇಷ್ಠವಾಗಿದೆ ಎಂದು ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳಾನಂದನಾಥಸ್ವಾಮಿ ಹೇಳಿದರು.
ಸ್ಥಳೀಯ ಒಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ ಪಟ್ಟಣದ ಬಿಜಿಎಸ್ ವಿದ್ಯಾ ಸಂಸ್ಥೆಯಲ್ಲಿ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಬಾಲಗಂಗಾಧರನಾಥ ಸ್ವಾಮೀಜಿಯವರು 450ಕ್ಕೂ ಹೆಚ್ಚು ವಿದ್ಯಾ ಕೇಂದ್ರಗಳನ್ನು ತೆರೆದಿದ್ದು, ಕೋಟ್ಯಂತರ ಮಕ್ಕಳ ಭವಿಷ್ಯಕ್ಕೆ ಕಾರಣರಾಗಿದ್ದಾರೆ ಎಂದರು.
ಕಸಿದುಕೊಳ್ಳಲು ಸಾಧ್ಯವಾಗದ ವಿದ್ಯಾ ಸಂಪತ್ತುಗಿಂತ ಕಳ್ಳತನವಾಗಬಹುದಾದ ಆಸ್ತಿ ಸಂಪತ್ತು ಕಡೆ ಪೋಷಕರು ಹೆಚ್ಚು ಗಮನ ನೀಡುತ್ತಿರುವ ಈ ಕಾಲದಲ್ಲಿ ಮಕ್ಕಳಲ್ಲಿ ಶಿಕ್ಷಣ ಪ್ರಜ್ಞೆ ಹೆಚ್ಚಿಸಲು ಇಂತಹ ಪ್ರತಿಭಾ ಪುರಸ್ಕರ ಅತುತ್ಯುಮ ವೇದಿಕೆಯಾಗಿದೆ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಕೆ.ಎಸ್. ಮಂಜುನಾಥ್ ಸಮುದಾಯ ಅಬಿವೃದ್ಧಿ ಸ್ಥಾಪಿಸಿರುವ ಸಂಘ ಚುನಾವಣೆಗಾಗಿ ಬಹಳಷ್ಟು ಖರ್ಚು ಮಾಡುತ್ತಿರುವುದು ಖೇದಕರ ಎಂದರು.
ಇದೇ ಸಂಧರ್ಭದಲ್ಲಿ ಉನ್ನತ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು.
ನಿವೃತ್ತ ಪ್ರಾಂಶುಪಾಲ ಪಿ. ರಾಮಕೃಷ್ಣಪ್ಪ, ಒಕ್ಕಲಿಗ ನೌಕರರ ಸಂಘದ ಅಧ್ಯಕ್ಷ ಟಿ.ಕೆ. ಅಶ್ವಥ್ ನಾರಾಯಣಗೌಡ, ಹರೀಶ್ ಗೋಪಾಲ್ ಗೌಡ, ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಬಿಸ್ಸೇಗೌಡ, ಲೋಕೇಶ್, ತಾಪಂ ಉಪಾಧ್ಯಕ್ಷೆ ರಾಜಮ್ಮ, ನಂಜೇಗೌಡ, ಹನುಮಂತಪ್ಪ, ಪಾಪಣ್ಣ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

