ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚು ಕಾಳಜಿ ವಹಿಸಿ
ಚಿಕ್ಕಬಳ್ಳಾಪುರ: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ರಂಗಕ್ಕೆ ಸಾಕಷ್ಟು ಅನುದಾನ ನೀಡುತ್ತಿರುವ ಫಲವಾಗಿ ಪೋಷಕರು ತಮ್ಮ ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎ.ಅಜಿತ್ ಪ್ರಸಾದ್ ತಿಳಿಸಿದರು.
ನಗರದ ಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ತಾಲೂಕಿನ ಗಿಡ್ನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಹೋಬಳಿ ಮಟ್ಟದ ಕಲಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಶಿಕ್ಷಣಕ್ಕೆ ಸಹಕಾರಿಯಾಗಲು ಸಮುದಾಯ ಪಾಲ್ಗೊಳ್ಳುವಿಕೆ ಪಾತ್ರ ಮುಖ್ಯವಾದುದು. ಕೇವಲ ಪಠ್ಯಕ್ಕೆ ಮಾತ್ರ ಶಿಕ್ಷಣ ಸೀಮಿತವಾಗದೇ ಎಲ್ಲಾ ಶಿಕ್ಷಣೇತರ ವಿಚಾರಗಳು ಪಠ್ಯಗಳಲ್ಲಿ ಅಡಗಿದಾಗ ಮಕ್ಕಳಲ್ಲಿ ಸೂಕ್ತ ಪ್ರತಿಭೆಯನ್ನು ಕಾಣಲು ಸಾಧ್ಯ ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ಕೆ.ಪಿ. ನವಮೋಹನ್ ಮಾತನಾಡಿ, ಪ್ರಾಥಮಿಕ ಹಂತದಿಂದಲೇ ಕನ್ನಡ ಭಾಷೆ ಬೆಳವಣಿಗೆ ಹಾಗೂ ವ್ಯಾಕರಣದ ಸಮಚಿತ್ತ ಮಕ್ಕಳಲ್ಲಿ ರಸವತ್ತಾಗಿ ಕಲಿಸುವಂತಾಗಬೇಕು. ಇದು ಮಕ್ಕಳಿಗೆ ಮುಂದಿನ ದಿನಗಳ ಉನ್ನತ ಶಿಕ್ಷಣಕ್ಕೆ ಪ್ರೇರಣೆಯಾಗಲಿದ್ದು, ಈ ನಿಟ್ಟಿನಲ್ಲಿ ಶಿಕ್ಷಕರು ವ್ಯಾಕರಣದ ಪರಿಕಲ್ಪನೆಯನ್ನು ನೀಡುವುದು ಅತ್ಯವಶ್ಯಕ. ನಾಡಿನಲ್ಲಿ ಪ್ರಾಥಮಿಕ ಭಾಷೆಯಾಗಿ ಕನ್ನಡವೇ ಬಹುಮುಖ್ಯ ಭಾಷೆ. ಭಾಷೆಯನ್ನು ಪ್ರಾಥಮಿಕ ಹಂತದಿಂದಲೇ ಕಲಿಸುವ ಜೊತೆಗೆ ಅವರಲ್ಲಿ ಶಿಕ್ಷಣದ ಪ್ರೌಢಿಮೆಯನ್ನು ಮೂಡಿಸಬೇಕು ಎಂದು ಹೇಳಿದರು. ಕರುನಾಡಸೇನೆ ಜಿಲ್ಲಾ ಉಪಾಧ್ಯಕ್ಷ ತಿಪ್ಪೇನಹಳ್ಳಿ ಪಿ.ನಾರಾಯಣಸ್ವಾಮಿ ಮಾತನಾಡಿ, ಕಂಗ್ಲಿಷ್ ವ್ಯಾಮೋಹಕ್ಕೆ ಒಳಗಾಗುವ ಪೋಷಕರು ಮಕ್ಕಳ ಪ್ರಾಥಮಿಕ ಶಿಕ್ಷಣವನ್ನೆ ಮೊಟಕುಗೊಳಿಸುತ್ತಾರೆ. ಕನ್ನಡಕ್ಕೆ ಪ್ರಾಮುಖ್ಯ ನೀಡುವ ಹವ್ಯಾಸವನ್ನು ರೂಡಿಸಿ ನಂತರ ಇತರೆ ಭಾಷೆಗಳ ಕಲಿಕೆಗೂ ಮುಂದಾಗಲಿ ಎಂದರು. ಕಲಾವಿದ ಗಾ.ನ. ಅಶ್ವತ್ ಹಾಗೂ ಕೆ.ವಿ. ಶಿಕ್ಷಕರ ತರಬೇತಿ ಸಂಸ್ಥೆಯ ಉಪನ್ಯಾಸಕ ಹಾಲಪ್ಪ ಹಾಡಿದ ಕನ್ನಡ ಗೀತೆಗಳ ರಸಸೊಬಗು ನೆರೆದ ಮಂದಿಗೆ ಮನರಂಜಿಸಿತ್ತು. ಇದೇ ಸಂದರ್ಭಧಲ್ಲಿ ನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ತಾಲೂಕಿನ ಗಿಡ್ನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಕಲಿಕೋತ್ಸವದಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳಿಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಶಿಕ್ಷಣದ ಪ್ರೇರಣೆಗೆ ಪ್ರಮಾಣ ಪತ್ರಗಳನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ, ಶಿಕ್ಷಕಿ ಟಿ. ರಾಧಮ್ಮ, ಕ್ಷೇತ್ರ ಸಂಯೋಜಕ ಎನ್. ವೆಂಕಟೆಶ್, ಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಎಂ.ಎಲ್. ಅಶ್ವತ್ಥರಾಯಣ, ಶಿಕ್ಷಕ ಹನುಮಂತರೆಡ್ಡಿ, ಕಾಂತಮ್ಮ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

