ಕೋಲಾರ

'ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಕೆಯಿಂದ ಪ್ರಗತಿ'

Published On :

ಚಿಕ್ಕಬಳ್ಳಾಪುರ: ತೀವ್ರ ಪೈಪೋಟಿಯ ಕಾಲದಲ್ಲಿ ರೈತರು ಕೃಷಿಯಲ್ಲಿ ಹೆಚ್ಚಿಗೆ ಆಧುನಿಕ ತಂತ್ರಗಾರಿಕೆ ಅಳವಡಿಸಿಕೊಂಡಾಗ ಪ್ರಗತಿಪರ ಸಾಧನೆ ಮಾಡಬಹುದೆಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕಿ ಗಾಯಿತ್ರಿ ಅಭಿಪ್ರಾಯಪಟ್ಟರು.
ನಗರದ ತಾಪಂ ಸಭಾಂಗಣದಲ್ಲಿ ತೋಟಗಾರಿಕೆ ಮತ್ತು ಕೃಷಿ ಇಲಾಖೆಯಿಂದ ಸೋಮವಾರ ಆಯೋಜಿಸಿದ್ದ ರೈತ ದಿನಾಚರಣೆಯಲ್ಲಿ ಮಾತನಾಡಿ, ಸರ್ಕಾರ ಕೃಷಿಯಲ್ಲಿ ಪ್ರಗತಿ ಸಾಧಿಸಲು ಹೆಚ್ಚಿನ ಅನುದಾನ ಮೀಸಲಿಟ್ಟು ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇದನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕೆಂದರು.
ವೈಜ್ಞಾನಿಕ ಸಂಶೋಧನೆಗಳಿಂದ ಕೃಷಿಯಲ್ಲಿ ಹೊಸ ಬದಲಾವಣೆಗಳಾಗುತ್ತಿವೆ. ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಆಧುನಿಕ ತಂತ್ರಗಾರಿಕೆ ಅಭಿವೃದ್ಧಿ ಪಡಿಸಲಾಗುತ್ತದೆ.ಇವುಗಳ ಬಗ್ಗೆ ಕಾಲ ಕಾಲಕ್ಕೆ ರೈತರು ತಿಳಿದುಕೊಂಡು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದರು.
ಕೇವಲ ನೆಪ ಮಾತ್ರ: ದೇಶದ ಬೆನ್ನಲುಬು ಅನ್ನದಾತ ರೈತ ಎಂದೇಳಲಾಗುತ್ತಿದೆಯಾದರೂ ಸರ್ಕಾರದ ಸವಲತ್ತುಗಳು ಪ್ರಾಮಾಣಿಕವಾಗಿ ರೈತರನ್ನು ತಲುಪುತ್ತಿಲ್ಲ ಎಂದು ಸಭೆಯಲ್ಲಿದ್ದ ಕೆಲ ರೈತರು ತಮ್ಮ ಅಸಮಾಧಾನ ಹೊರ ಹಾಕಿದರು.
ರೈತರಿಗಾಗಿ ನೆಪಕ್ಕೆ ಅನೇಕ ಯೋಜನೆಗಳು, ಕಾರ್ಯಕ್ರಮಗಳು ಜಾರಿಯಾಗುತ್ತಲೇ ಇವೆ. ಆದರೆ, ರೈತರ ಸಮಸ್ಯೆಗಳು ದೂರವಾಗುತ್ತಿಲ್ಲ. ಪ್ರತಿ ಹಂತದಲ್ಲೂ ಸಮಸ್ಯೆಗಳು. ಇವುಗಳನ್ನು ಎದುರಿಸಲಾಗದೇ ಅನೇಕ ಮಂದಿ ಕೃಷಿ ಕ್ಷೇತ್ರದಿಂದ ದೂರವಾಗುತ್ತಿದ್ದಾರೆ. ಕೃಷಿಯಲ್ಲಿ ಪ್ರಗತಿ ಸಾಧಿಸಲು ಮೊದಲು ರೈತರಿಗೆ ಅನ್ಯಾಯವಾಗುವುದನ್ನು ತಪ್ಪಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ಸನ್ಮಾನ, ರಂಗೋಲಿ: ರೈತ ದಿನಾಚರಣೆ ಪ್ರಯುಕ್ತ ಕೃಷಿ ಬೆಳವಣಿಗೆಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವುದರ ಜತೆಗೆ ರಂಗೋಲಿ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಕೊತ್ತನೂರು ಗ್ರಾಮದ ರುಕ್ಮಿಣಿ, ಎರಡನೇ ಬಹುಮಾನವನ್ನು ರೂಪ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರಾದ ನಾಯನಹಳ್ಳಿಯ ಎಂ. ಸೀತಪ್ಪ, ತಿಪ್ಪೇನಹಳ್ಳಿ ಅಶ್ವತ್ಥಪ್ಪ, ಮಂಚನಬಲೆ ಸಿ.ಪಿ. ನಾರಯಣಪ್ಪ ಹಾಗೂ ಕೃಷಿ, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ಕೊತ್ತನೂರು ಗೌರಮ್ಮರನ್ನು ಸನ್ಮಾನಿಸಲಾಯಿತು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.