ಕೋಲಾರ

ರೈತ ಬಳೆದ ಬೆಳೆಗೆ ತಾನೇ ಬೆಲೆ ನಿಗದಿ ಮಾಡುವ ನಿಯಮ ಬೇಕು

Published On :

ಮಾಲೂರು: ರೈತ ಬಳೆದ ಬೆಳೆಗೆ ತಾನೇ ಬೆಲೆ ನಿಗದಿ ಮಾಡುವ ನಿಯಮ ತರುವ ಮೂಲಕ ರಾಜ್ಯ ಸರ್ಕಾರ ರೈತ ಸ್ವಾವಲಂಬಿಯಾಗಲು ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಕೆ.ಎಸ್. ಮಂಜುನಾಥ್ ಹೇಳಿದರು.
ಪಟ್ಚಣದ ತಿರುಮಲ ಕಲ್ಯಾಣ ಮಂಟಪದಲ್ಲಿ ರೈತರ ದಿನಾಚರಣೆ ಅಂಗವಾಗಿ ಕೃಷಿ ಇಲಾಖೆ ಸಹಕಾರದಲ್ಲಿ ಆಯೋಜಿಸಿದ್ದ ಕೃಷಿ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿ, ಕಷಿ ನಂಬಿ ಬದುಕು ಸಾಗಿಸುತ್ತಿರುವ ರೈತಾಪಿ ಜನರು ನೀರಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗಲಿದ್ದು, ಶಾಶ್ವತ ನೀರಾವರಿ ಯೋಜನೆ ಅನುಷ್ಠಾನವಾಗದೆ ನೀರಿನ ಸಮಸ್ಯೆ ಬಗ್ಗೆ ಹರಿಯುವುದಿಲ್ಲ ಎಂದರು.
ಜಿಪಂ ಸದಸ್ಯ ರಾಮಸ್ವಾಮಿ ರೆಡ್ಡಿ ಮಾತನಾಡಿ, ಭವಿಷ್ಯ ಉಜ್ವಲವಾಗಬಹುದೆಂಬ ಆಸೆಯಲ್ಲಿ ಇಲ್ಲಿನ ರೈತರು ತಮ್ಮ ಜಮೀನುಗಳನ್ನು ನೀಡಿ ಈಗ ಅದೇ ಕಾರ್ಖಾನೆಯಲ್ಲಿ ಡಿ.ದರ್ಜೆ ನೌಕರರಾಗಿ ದುಡಿಯುತ್ತಿದ್ದಾರೆ. ಈ ನಿಟ್ಟಿನಲ್ಲಿ ಶಾಸಕರು ರಾಜ್ಯ ಸರ್ಕಾರದೂಂದಿಗೆ ಚರ್ಚಿಸಿ ಭೂಮಿ ನೀಡುವ ವ್ಯಕ್ತಿಯ ಕುಟುಂಬಕ್ಕ ಉನ್ನತ ನೌಕರಿ ಸಿಗುವಂತೆ ಮಾಡಬೇಕು ಎಂದು ಅಗ್ರಹಿಸಿದರು. ಇದೇ ಸಂಧರ್ಭದಲ್ಲಿ ತಾಲೂಕಿನಲ್ಲಿ ಉತ್ತಮ ಬೆಳೆ ಬೆಳೆದ ಪ್ರಗತಿ ಪರ ರೈತರಾದ ಚಿಕ್ಕಪಿಳ್ಳಪ್ಪ, ಪ್ರಕಾಶ್, ಮುನಿಯಪ್ಪ ಅವರನ್ನು ಕೃಷಿ ಇಲಾಖೆವತಿಯಿಂದ ಸನ್ಮಾನಿಸಲಾಯಿತು. ತಾಪಂ ಅಧ್ಯಕ್ಷ ಪುಟ್ಟಸ್ವಾಮಿ ಮಾತನಾಡಿದರು. ತಾಪಂ ಸದಸ್ಯರಾದ ಗೋಪಾಲ್‌ಗೌಡ, ಲೋಕೇಶ್, ಕೃಷ್ಣಪ್ಪ, ಜಿಪಂ ಸದಸ್ಯೆ ರತ್ನಮ್ಮ ನಂಜೇಗೌಡ, ಮಂಜುಳ ವೆಂಕಟೇಶ್, ಪಾಪಣ್ಣ ಇದ್ದರು.
ರಾಷ್ಟ್ರಕವಿ ಡಾ.ಜಿ.ಎಸ್. ಶಿವರುದ್ರಪ್ಪ ನಿಧನದ ಗೌರವಾರ್ಥ ಸಭೆ ಮುಕ್ತಾಯಗೊಳಿಸಲು ಶಾಸಕ ಮಂಜುನಾಥ್ ಗೌಡ ತಿಳಿಸಿದರಲ್ಲದೇ ಒಂದು ನಿಮಿಷ ಮೌನ ಆಚರಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.