ಕೋಲಾರ

ವ್ಯಕ್ತಿಯ ಮೇಲೆ ಹಲ್ಲೆ; ಪ್ರಾಣ ಬೆದರಿಕೆ

Published On :

ಕೆಜಿಎಫ್: ವ್ಯಕ್ತಿಯೊಬ್ಬರನ್ನು  ಕಬ್ಬಿಣದ ರಾಡ್ನಿಂದ ಹೊಡೆದು ಹಲ್ಲೆ ನಡಿಸಿ, ಕೊಲೆ ಬೆದರಿಕೆ ಹಾಕಿದ ಘಟನೆ ಮಾರಿಕುಪ್ಪಂ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಂಬರಸನಹಳ್ಳಿ ಗ್ರಾಮದ ನಿವಾಸಿ ಮುನಿವೆಂಕಟೇಗೌಡ ಎಂಬವರು ಚಿಲ್ಲರೆ ಅಂಗಡಿ ವ್ಯಾಪಾರ ನಡೆಸುತ್ತಿದ್ದು ಅವರ ಅಂಗಡಿಯಲ್ಲಿ  ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದಾಗಿ ಬಂದ ದೂರಿನ ಮೇರೆಗೆ ಅಬಕಾರಿ ಇಲಾಖೆಯವರು ತನಿಖೆಗೆ ಬಂದಾಗ ಅಂಗಡಿಯ ಹಿಂಭಾಗದಿಂದ ಬಂದ ರಘು ಎಂಬವರು ಏಕಾಏಕಿ ಕಬ್ಬಿಣದ ರಾಡ್ನಿಂದ ಮುನಿವೆಂಕಟೇಗೌಡ ಮೇಲೆ ಹಲ್ಲೆ ನಡೆಸಿದ್ದಲ್ಲದೆ 2 ದಿನದಲ್ಲಿ ಸಾಯಿಸುವುದಾಗಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಮುನಿವೆಂಕಟೇಗೌಡ ಮಾರಿಕುಪ್ಪಂ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಕಲಿ ಪೊಲೀಸರ ದಾಳಿ: ಅಪಾರ ಹಣ ಲೂಟಿ
ಚಿಂತಾಮಣಿ: ಪೊಲೀಸರ ಸೋಗಿನಲ್ಲಿ ಬಂದ ತಂಡವೊಂದು  ಅಂದರ್ ಬಾಹರ್ ಆಡುತ್ತಿದ್ದ ಗುಂಪಿನ ಮೇಲೆ ದಾಳಿ ನಡೆಸಿ ಲಕ್ಷಾಂತರ ರುಪಾಯಿ ನಗದು ಹಣವನ್ನು ಅಪಹರಿಸಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಾಡಿಕೆರೆ ರೈಲ್ವೆ ಅಂಡರ್ ಪಾಸ್ ಬಳಿ ನಡೆದಿರುವುದಾಗಿ ವರದಿಯಾಗಿದೆ. ತಾಲೂಕಿನ ಚಿಂತಾಮಣಿ-ಮದನಪಲ್ಲಿ ರಸ್ತೆಯ ಮಾಡಿಕೆರೆ ರೈಲ್ವೆ ಅಂಡರ್ ಪಾಸ್ ಬಳಿ ಅಂದರ್ ಬಾಹರ್ ಆಡುತ್ತಿದ್ದಾಗ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಡಿವೈಎಸ್ಪಿ ಸಣ್ಣತಿಮ್ಮಪ್ಪರನ್ನು ವಿಚಾರಿಸಿದಾಗ ಯಾವುದೇ ದೂರು ಬಂದಿಲ್ಲವೆಂದು ತಿಳಿಸಿದ್ದಾರೆ.
ಮೊಬೈಲ್ ಕಳವು
ಕೆಜಿಎಫ್: ಬೆಲೆ ಬಾಳುವ ಮೊಬೈಲ್ಗಳ ಸರಣಿ ಕಳ್ಳತನವಾಗಿರುವ ಘಟನೆ ಬೆಮೆಲ್ ಕಾರ್ಖಾನೆಯ ಅಧಿಕಾರಿಗಳ ಕಾಲೋನಿಯಲ್ಲಿ ನಡೆದಿದೆ. ಬೆಮೆಲ್ನಗರ ಠಾಣಾ ವ್ಯಾಪ್ತಿಯ ಮೂರನೇ ಟೈಪ್ ಆಫೀಸರ್ಸ್ ಕ್ವಾಟರ್ಸ್ನ ನಿವಾಸಿಗಳಾಗ ಇಫ್ತಿಕರ್ ರೆಹಮನ್ ಮತ್ತು ಅರವಣ್ಣನ್ ಎಂಬವರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಮನೆಯ ಬೆಡ್ ರೂಂನಲ್ಲಿ ಇಟ್ಟಿದ್ದ ಹೆಚ್ಟಿಸಿ ಮತ್ತು ಸ್ಯಾಮ್ಸಂಗ್ಗಳ ಒಟ್ಟು 35 ಸಾವಿರ ಬೆಲೆ ಬಾಳುವ ಮೊಬೈಲ್ಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ಇಫ್ತಿಕರ್ ರೆಹಮನ್ ಮತ್ತು ಅರವಣ್ಣನ್ ಬೆಮೆಲ್ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.