ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿ: ಕೆ. ವೆಂಕಟೇಶ್
ಬಾಗೇಪಲ್ಲಿ: ಸದಾ ಸಜ್ಜನರ ಸಹವಾಸದಲ್ಲಿರಬೇಕು. ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ವೆಂಕಟೇಶ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಪಟ್ಟಣದ ಯಂಗ್ ಇಂಡಿಯಾ ಶಾಲೆಯಲ್ಲಿ ಹಮ್ಮಿಕೊಂಡಿದ್ದ 19ನೇ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಟಾಟಿಸಿ ಮಾತನಾಡಿ, ಶಾಲೆಗಳಲ್ಲಿ ಭಾವನಾತ್ಮಕ ಹಾಗೂ ಆಧ್ಮಾತಿಕ ಬಲವನ್ನು ವಿದ್ಯಾರ್ಥಿಗಳಿಗೆ ತುಂಬಬೇಕಾದ ಅವಶ್ಯಕತೆ ಇದೆ. ಇದರ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕೆಂದರು.
ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯವೇ ಹೊರತು, ಸೋಲು ಗೆಲುವು ಮುಖ್ಯವಲ್ಲ. ಶ್ರಮಕ್ಕೆ ಸಿಕ್ಕ ಪ್ರತಿಫಲ ಸ್ವೀಕರಿಸಿ, ಭಾವನಾತ್ಮಕ ಬಲ ವೃದ್ಧಿಸಿಕೊಳ್ಳಬೇಕು, ಯಾವುದೇ ಸನ್ನಿವೇಶದಲ್ಲಿಯೂ ವಿದ್ಯಾರ್ಥಿಗಳು ಉದ್ವೇಗಕ್ಕೆ ಒಳಗಾದೆ ಶಾಂತ ಚಿತ್ತರಾಗಿ ಪ್ರತಿಕ್ರಿಯಿಸುವಂತಹ ಮನೋಭಾವನೆ ಹೊಂದಿರಬೇಕೆಂದರು.
ರಾಜ್ಯ ಕ್ರಿಕೆಟ್ ಅಸೋಷಿಯೇಷನ್ ಸದಸ್ಯ ಹಾಗೂ ಉದ್ಯಮಿ ಆರ್.ಎಸ್. ಪ್ರಸಾದ್ ಮಾತನಾಡಿ, ದಿ.ಡಾ.ಎಚ್. ನರಸಿಂಹಯ್ಯರವರು ಈ ದೇಶ ಕಂಡಂತಹ ಅಪರೂಪದ ವ್ಯಕ್ತಿ. ಇಂತಹ ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಂಡು ಪ್ರತಿಭಾವಂತ ವಿದ್ಯಾರ್ಥಿಗಳಾಗಿ ಬದುಕಬೇಕು ಎಂದರು.
ನ್ಯಾಷನಲ್ ಕಾಲೇಜಿನ ಪದವಿ ವಿಭಾಗದ ಉಪ ಪ್ರಾಂಶುಪಾಲ ಪ್ರೊ.ಡಿ. ಶಿವಣ್ಣ ಮಾತನಾಡಿ, ಯಂಗ್ ಇಂಡಿಯಾ ಶಾಲೆ ಪ್ರಾರಂಭವಾಗಿ 19 ವರ್ಷಗಳು ಕಳೆದಿದೆ. ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಪ್ರತಿವರ್ಷ ಅತ್ಯುನ್ನತ ಅಂಕಗಳನ್ನು ಪಡೆಯುವ ಮೂಲಕ ಈ ಶಾಲೆ ಮಾದರಿಯಾಗಿದೆ ಎಂದರು. ಶಾಲಾ ಮಕ್ಕಳಿಂದ ನೃತ್ಯ ಪ್ರದರ್ಶನ, ನಾಟಕ, ಗೀತೆಗಳ ಗಾಯನ ನಡೆದವು. ಕ್ರೀಡೆ, ಅಟಪಾಠಗಳಲ್ಲಿ ವಿಜೇತ ಹಾಗೂ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಎನ್. ಸುಬ್ಬಣ್ಣ, ನಿವೃತ್ತ ವಲಯ ಅರಣ್ಯಾಧಿಕಾರಿ ಸತ್ಯನಾರಾಯಣ, ಹೇಮಂತರಾಜ್, ಯಂಗ್ ಇಂಡಿಯಾ ಶಾಲೆಯ ಮುಖ್ಯ ಶಿಕ್ಷಕ ಬಿ.ವಿ. ಕಿಶ್ರ್ ಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

