ವಾಜಪೇಯಿ ಮಾದರಿ ರಾಜಕಾರಣಿ
ಬಂಗಾರಪೇಟೆ: ದೇಶದ ಬದಲಾವಣೆಗಾಗಿ ಕಂಕಣ ತೊಟ್ಟು ಅದನ್ನು ಕಾರ್ಯಗತ ಮಾಡಿ ತೋರಿಸಿದ ವ್ಯಕ್ತಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಅವರ ಇಚ್ಛಾಶಕ್ತಿ ಇಂದಿನ ರಾಜಕಾರಣಿಗಳು ಅಳವಡಿಸಿಕೊಳ್ಳುವುದು ಅಗತ್ಯ ಎಂದು ಮಾಜಿ ಶಾಸಕ ಎಂ. ನಾರಾಯಣಸ್ವಾಮಿ ಹೇಳಿದರು.
ಪಟ್ಟಣದ ಕುವೆಂಪು ವೃತ್ತದಲ್ಲಿ ವಾಜಪೇಯಿಯವರ 89ನೇ ಜನ್ಮ ಜಯಂತಿ ಪ್ರಯುಕ್ತ ಕೇಕ್ ಕತ್ತರಿಸಿ ಸಾರ್ವಜನಿಕರಿಗೆ ಹಂಚಿ ನಂತರ ಮಾತನಾಡಿದ ಅವರು, ವಾಜಪೇಯಿ ಅವರು ಉತ್ತಮ ಹಾಗೂ ಧಕ್ಷ ಆಡಳಿತಗಾರರಾಗಿದ್ದರು ಎಂದರು.
6 ಬಾರಿ ಕೋಲಾರ ಲೋಕಸಭೆಯನ್ನು ಪ್ರತಿನಿಧಿಸಿರುವ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಸಾಧನೆ ಏನೂ ಇಲ್ಲ. ಚುನಾವಣೆ ಸಮಯದಲ್ಲಿ ಮಾತ್ರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜಪಿಸುವ ಮುನಿಯಪ್ಪ ನಂತರ ಹೇಳಿದನ್ನು ಒಂದನ್ನೂ ಕಾರ್ಯಗತ ಮಾಡುವುದಿಲ್ಲ. ಜನರ ಕಣ್ಣೊರೆಸುವ ಕಾಯಕವನ್ನು ಚೆನ್ನಾಗಿ ಕಲಿತಿದ್ದಾರೆಂದು ಲೇವಡಿ ಮಾಡಿದರು.
ಪಕ್ಷದ ಹಿರಿಯ ಮುಖಂಡ ಹನುಮಪ್ಪ, ನಾಗಪ್ರಕಾಶ್, ಜುಂಜನಹಳ್ಳಿ ನಾರಾಯಣಸ್ವಾಮಿ, ತಾಪಂ ಸದಸ್ಯರಾದ ರೇಣುಕಾಬಾಲಚಂದ್ರ, ವಿಜಯಲಕ್ಷ್ಮಿ, ಕೀಲುಕೊಪ್ಪ ಶ್ರೀನಿವಾಸ್, ಪಕ್ಷದ ತಾಲೂಕು ಅಧ್ಯಕ್ಷ ಮಾರ್ಕಂಡೇಗೌಡ, ಕೊಂಡಹಳ್ಲಿ ನಾರಾಯಣಸ್ವಾಮಿ, ಲಕ್ಷ್ಮಣ್ಗೌಡ,ನಗರಶಕ್ತಿ ಕೇಂದ್ರದ ಅಧ್ಯಕ್ಷ ರಮೇಶ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

