ಹೆಚ್ಚುವರಿ ಖಾತೆ ನೀಡಿದ್ದಕ್ಕೆ ಹಿಗ್ಗು, ಕುಗ್ಗು ಎರಡೂ ಇಲ್ಲ: ಮೊಯ್ಲಿ
ಚಿಕ್ಕಬಳ್ಳಾಪುರ: ಪ್ರಧಾನಿಯವರು ತಮಗೆ ಹೆಚ್ಚುವರಿ (ಪರಿಸರ)ಖಾತೆ ನೀಡಿರುವುದರಿಂದ ಹಿಗ್ಗುವುದೂ ಇಲ್ಲ, ಅದೇ ರೀತಿ ಕುಗ್ಗುವುದೂ ಇಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ, ಪರಿಸರ ಸಚಿವ ಎಂ. ವೀರಪ್ಪ ಮೊಯ್ಲಿ ತಿಳಿಸಿದರು. ಕ್ರಿಸ್‌ಮಸ್ ಪ್ರಯುಕ್ತ ನಗರದಲ್ಲಿರುವ ವಿವಿಧ ಚರ್ಚ್‌ಗಳಿಗೆ ಭೇಟಿ ಕೊಟ್ಟು ಕೇಕ್ ಕತ್ತರಿಸಿ ಶುಭಾಶಯ ಕೋರಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿಯವರು ತಮ್ಮ ಮೇಲೆ ನಂಬಿಕೆಯಿಟ್ಟು ಹೆಚ್ಚುವರಿ ಹೊಸ ಖಾತೆ ನೀಡಿದ್ದಾರೆ. ಸದ್ಯ ಪ್ರಾಮಾಣಿಕವಾಗಿ ಜವಾಬ್ದಾರಿಯನ್ನು ನಿರ್ವಹಿಸಲು ಆದ್ಯತೆ ನೀಡುತ್ತೇನೆ ಎಂದರು. ನೈಸರ್ಗಿಕ ಅನಿಲ ಮತ್ತು ಪೆಟ್ರೋಲಿಯಂ ಖಾತೆಯನ್ನು ತಾವು ಸಮರ್ಪಕವಾಗಿ ನಿಭಾಯಿಸುತ್ತಿದ್ದು ಇದೀಗ ಹೊಸ ಜವಾಬ್ದಾರಿ ಪರಿಸರ ಖಾತೆ ಜವಾಬ್ದಾರಿ ಸಿಕ್ಕಿದೆ. ಇದರಿಂದ ಜವಾಬ್ದಾರಿ ಹೆಚ್ಚಾಯಿತು ಎಂದು ಹಿಗ್ಗುವುದಿಲ್ಲ. ಹಾಗೆಯೇ ಕೆಲಸ ಮಾಡಲು ಒತ್ತಡವಾಗುತ್ತದೆ ಎಂದು ಕುಗ್ಗುವುದಿಲ್ಲ. ತಮ್ಮ ಮೇಲೆ ಪ್ರಧಾನಿಯಿಟ್ಟಿರುವ ನಂಬಿಕೆ ಉಳಿಸಿಕೊಂಡು ಹೋಗುವುದಾಗಿ ತಿಳಿಸಿದರು. ಬಯಲು ಸೀಮೆ ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ಬಯಲು ಸೀಮೆ ಜಿಲ್ಲೆಗಳಿಗೆ ಎತ್ತಿನಹೊಳೆ ಯೋಜನೆಯ ಮೂಲಕ ಶಾಶ್ವತ ನೀರಾವರಿ ಸೌಲಭ್ಯ ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು ಫೆಬ್ರವರಿ ತಿಂಗಳೊಳಗೆ ಯೋಜನೆಗೆ ಚಾಲನೆ ನೀಡಲಾಗುತ್ತದೆ ಮಾಜಿ ಸಿಎಂ ಕುಮಾರಸ್ವಾಮಿ ಎತ್ತಿನಹೊಳೆ ಯೋಜನೆ ಬಗ್ಗೆ ಅಪಸ್ವರ ಎತ್ತಿ ರಾಜ್ಯ ಸರ್ಕಾರವನ್ನು ಮತ್ತು ತಮ್ಮನ್ನು ಕೀಳಾಗಿ ಪ್ರಶ್ನಿಸಿರುವುದು ಅವರ ಧೋರಣೆಯನ್ನು ಎತ್ತಿ ತೋರಿಸುತ್ತದೆ. ಕ್ರಿಸ್‌ಮಸ್ ಸಂದರ್ಭದಲ್ಲಿ ಯೇಸು ಕುಮಾರಸ್ವಾಮಿಗೆ ಒಳ್ಳೆಯ ಬುದ್ಧಿ ನೀಡಲಿ ಎಂದು ಕುಟುಕಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

