ಸುದ್ದಿ ಸಂಕ್ಷೇಪ
ಬರ ಪರಿಹಾರದ ತಂಡ ಪರಿಶೀಲನೆ
ಶಿಡ್ಲಘಟ್ಟ: ಕೇಂದ್ರದ ಬರ ಪರಿಹಾರದ ತಂಡ ತಾಲೂಕಿನ ವಿವಿದ ಭರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ತಾಲ್ಲೂಕಿನ ಎಚ್. ಕ್ರಾಸ್ನಲ್ಲಿ ಕುಡಿಯುವ ನೀರಿನ ಸಮಸ್ಯೆ, ಘಟಮಾರನ ಹಳ್ಳಿಯಲ್ಲಿ ಕಾಲು ಬಾಯಿ ಜ್ವರ ಪಿಡಿತ ಹಸುಗಳ ವೀಕ್ಷಣೆ, ಹೊಸಪೇಟೆ ಮತ್ತು ಯಣಂಗೂರ್ ಗ್ರಾಮದಲ್ಲಿ ಸಂಪೂರ್ಣ ನೆಲಕಚ್ಚಿರುವ ರಾಗಿ ಬೆಳೆ, ಮಳಮಾಚನಹಳ್ಳಿಯಲ್ಲಿ ಬೆಳೆ ನಾಶವಾಗಿರುವುದನ್ನು ವೀಕ್ಷಿಸಿದರು.ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯ ಪಾಲಕ ಗಣಪತಿ ಮಾತನಾಡಿ, ತಾಲೂಕಿನಲ್ಲಿ ಅಂತರ್ಜಲ ಮಟ್ಟ ಕುಸಿದು ಕುಡಿಯುವ ನೀರಿನ ಸಮಸ್ಯೆ ಉದ್ಬವವಾಗಿದೆ, ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವಿನ ಅಬಾವ ಉಂಟಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು. ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಅಭಿಯಂತರ ಸುಂದರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಮದಾಸ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಗಣಪತಿ ಇದ್ದರು.
'ಏಕರೂಪ ಶಿಕ್ಷಣ ಜಾರಿಯಾಗಲಿ'
ಮಾಲೂರು: ರಾಜ್ಯದಲ್ಲಿ ಏಕರೂಪ ಶಿಕ್ಷಣ ಬರುವವರೆಗೂ ಕನ್ನಡದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಜಯ ಕರ್ನಾಟಕದ ರಾಜ್ಯಾಧ್ಯಕ್ಷ ಜಗದೀಶ್ ಹೇಳಿದರು. ಪಟ್ಟಣದ ಅರಳೇರಿ ರಸ್ತೆಯಲ್ಲಿ ಬುಧವಾರ ಜಯ ಕರ್ನಾಟಕ ಸಂಘಟನೆಯ ತಾಲೂಕು ಘಟಕದ ಕಚೇರಿ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯ ಸರ್ಕಾರವು ಏಕರೂಪ ಶಿಕ್ಷಣ, ರೈತರ ಬೆಳೆಗೆ ಉತ್ತಮ ಬೆಂಬಲ ಬೆಲೆ ನೀಡುವ ತನಕ ರಾಜ್ಯ- ಭಾಷೆ ಅಭಿವೃದ್ಧಿ ಅಸಾಧ್ಯ ಎಂದರು. ಜಿಪಂ ಮಾಜಿ ಸದಸ್ಯ ರಾಮೇಗೌಡ ಮಾತನಾಡಿ, ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ನಮ್ಮ ಹಕ್ಕುಗಳನ್ನು ಹೋರಾಟ ಮೂಲಕ ಪಡೆಯಬೇಕಾಗಿದ್ದು, ತಾಲೂಕಿನಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರ, ಮೂಲ ಸೌಕರ್ಯದ ಕೊರತೆ ವಿರುದ್ಧ ಹೋರಾಟ ನಡೆಸಿದಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ತಾಲೂಕು ಘಟಕ ನೂತನ ಅಧ್ಯಕ್ಷ ದಿನೇಶ್ ಗೌಡ ಅವರಿಗೆ ರಾಜ್ಯಾಧ್ಯಕ್ಷ ಜಗದೀಶ್ ಧ್ವಜ ಹಸ್ತಾಂತರಿಸುವ ಮೂಲಕ ಅಧ್ಯಕ್ಷ ಸ್ಥಾನದ ಆಯ್ಕೆಯನ್ನು ಷೋಷಿಸಿದರು. ಪ್ರಕಾಶ್ ಪೈ, ದೀಪಕ್, ಉಪಾಧ್ಯಕ್ಷ ದಿಲೀಪ್ ಶೆಟ್ಟಿ, ಜಿಲ್ಲಾಧ್ಯಕ್ಷ ತ್ಯಾಗರಾಜ್, ಸುಮಂತ್, ಗಜೇಂದ್ರ, ಮಂಜುನಾಥ್, ಬಾಲೂ, ರಘು, ಕೃಷ್ಮಮೂರ್ತಿ ಇದ್ದರು.
ದೇವಾಲಯದಲ್ಲಿ ಬಂಗಾರ ಕಳವು
ಶಿಡ್ಲಘಟ್ಟ: ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಮಂಗಳವಾರ ರಾತ್ರಿ ದುಷ್ಕರ್ಮಿಗಳು ದೇವಾಲಯದ ಬೀಗ ಮುರಿದು 72 ಸಾವಿರ ಬೆಲೆ ಬಾಳುವ ಬೆಳ್ಳಿ, ಬಂಗಾರ ಹಾಗೂ ಸುಮಾರು ಒಂದು ಸಾವಿರ ನಗದು ಹಣ ದೋಚಿ ಪರಾರಿಯಾಗಿರುವ ಘಟನೆ ತಾಲೂಕಿನ ಎಲ್. ಮುತ್ತಕದಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಎಲ್. ಮುತ್ತಕದಹಳ್ಳಿ ಗ್ರಾಮದ ಪುರಾತನ ಕಾಲದಿಂದಲೂ ನೆಲೆಸಿರುವ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದ ಬೀಗ ಮುರಿದು ಒಳನುಗ್ಗಿದ ದುಷ್ಕರ್ಮಿಗಳು ದೇವಾಲಯದಲ್ಲಿ ಇದ್ದ ಸುಮಾರು 60 ಸಾವಿರ ಮೌಲ್ಯದ ಒಂದೂವರೆ ಕೆ.ಜಿ ಬೆಳ್ಳಿ ಕಿರೀಟಗಳು ಹಾಗೂ ಸುಮಾರು 12 ಸಾವಿರ ಬೆಲೆ ಬಾಳುವ 2 ಬಂಗಾರದ ತಾಳಿ ಬಟ್ಟುಗಳನ್ನು ಮತ್ತು ಹುಂಡಿಯಲ್ಲಿ ಇದ್ದ ಒಂದು ಸಾವಿರ ಹಣ ದೋಚಿ ಪರಾರಿಯಾಗಿದ್ದಾರೆ ಎಂದು ದೇವಾಲಯದ ಅರ್ಚಕರಾದ ಕೃಷ್ಣಾಚಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

