ಕೋಲಾರ

ಪೊಲೀಸರ ಕಾರ್ಯವೈಖರಿ ಖಂಡಿಸಿ ಪ್ರತಿಭಟನೆ

Published On :

ಚಿಂತಾಮಣಿ: ಬಲಾಢ್ಯರ ಜೊತೆ ಶಾಮೀಲಾದ ಗ್ರಾಮಾಂತ ಠಾಣೆ ಸಬ್ಇನ್ಸ್ಪೆಕ್ಟರ್ ದಲಿತ ವಿರೋಧಿ ಕರ್ತವ್ಯ ಎಸಗುತ್ತಿದ್ದಾರೆಂದು ದಲಿತ ಮೈನಾರಿಟಿ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ತಾಲೂಕಿನ ಬುಕ್ಕನಹಳ್ಳಿ ಶಿಂಗಸಂದ್ರ ಗ್ರಾಮದ ಇಬ್ಬರ ಯುವಕರ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿ ಕಳೆದ 20 ರಂದು ವಿನಾಕಾರಣ ಅಮಾಯಕ ಹಿಂದುಳಿದ ಜಾತಿಗೆ ಸೇರಿದ ಯುವಕನ ಮೇಲೆ ಮಾರಣಾಂತಿ ದೌರ್ಜನ್ಯವೆಸಗಿರುವ ಘಟನೆಗೆ ಸಂಬಂಧಿಸಿ ಗ್ರಾಮಾಂತರ ಠಾಣೆಯ ಸಬ್ಇನ್ಸ್ಪೆಕ್ಟರ್ ಅಪರಾಧಿಗಳನ್ನು ಬಂಧಿಸದೆ ಬಲಾಢ್ಯರ ಜೊತೆ ಶಾಮೀಲಾಗಿದ್ದಾರೆ ಎಂದು ಆಆರೋಪಿಸಿದರು.
ಗ್ರಾಮಾಂತರ ಪೊಲೀಸ್ ಠಾಣೆ ಮುಂದೆ ಸ್ಥಳೀಯ ಪೊಲೀಸರ ಕಾರ್ಯವೈಖರಿ ವಿರುದ್ಧ ದಿಕ್ಕಾರ ಕೂಗುತ್ತಾ, ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ  ಗ್ರಾಮಾಂತರ ಠಾಣೆಯ ಸಬ್ಇನ್ಸ್ಪೆಕ್ಟರ್ರನ್ನು ಅಮಾನತ್ತುಗೊಳಿಸಬೇಕೆಂದು ಒತ್ತಾಯಿಸಿದರು.
ಘಟನಾಸ್ಥಳಕ್ಕೆ ವೃತ್ತ ನಿರೀಕ್ಷಕ ವೆಂಕಟೇಶಮೂರ್ತಿ ಆಗಮಿಸಿ ಬೇಡಿಕೆಗಳ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿಗಳ ಗಮನ್ಕೆ ತಂದು ಕಾನೂನು ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವದಾಗಿ ಭರವಸೆ ನೀಡಿದರು. ಕೋಡಿಗಲ್ ರಮೇಶ್, ಜಿ. ಸುರೇಶ್, ವೆಂಕಟರವಣಪ್ಪ, ಸೀಕಲ್ ನಾರಾಯಣಪ್ಪ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.