ಬ್ಲೂ ದ್ರಾಕ್ಷಿ ಬೆಳೆಯುವ ರೈತರ ಸಭೆ ನಾಳೆ
ಚಿಕ್ಕಬಳ್ಳಾಪುರ: ಜಿಪಂ ಕಚೇರಿಯಲ್ಲಿ ಡಿ.28 ರಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ಬ್ಲೂ ದ್ರಾಕ್ಷಿ ಬೆಳೆಯುವ ರೈತರ ಸಭೆಯನ್ನು ಕರೆಯಲಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕರ ಕಚೇರಿ ತಿಳಿಸಿದೆ.
ಬೆಂಗಳೂರು ಬ್ಲೂ ದಾಕ್ಷಿಯನ್ನು ಜಿಲ್ಲೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯುತ್ತಿದ್ದು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದರ ಬಗ್ಗೆ ಚರ್ಚೆ ನಡೆಸುವುದರ ಜತೆಗೆ ಬೆಂಗಳೂರು ಬ್ಲೂ ದ್ರಾಕ್ಷಿ ಬೆಳೆಯುವ ರೈತರ ಸಂಘಗಳನ್ನು ಸ್ಥಾಪನೆ ಮಾಡಲು ಸಭೆಯನ್ನು ಕರೆಯಲಾಗಿದೆ ಎಂದು ತಿಳಿಸಿದೆ. ಇದರ ಜತೆಗೆ ಗುಲಾಬಿ ಈರುಳ್ಳಿ ಬೆಳೆಯುವ ರೈತರ ಸಭೆ ಮಧ್ಯಾಹ್ನ 2.30ಕ್ಕೆ ಮತ್ತು ದೇವನಹಳ್ಳಿ ಚಕೋತ ಬೆಳೆಯುವ ರೈತರ ಸಭೆ ಡಿ.28 ರಂದು ಮಧ್ಯಾಹ್ನ 3.30 ಗಂಟೆಗೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇಂದು ಪೊಲೀಸ್ ವಾರ್ಷಿಕ ಕ್ರೀಡಾಕೂಟ
ಚಿಕ್ಕಬಳ್ಳಾಪುರ: ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಡಿ.27 ರಂದು ಬೆಳಿಗ್ಗೆ 9 ಗಂಟೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಆರ್. ವಿಶಾಲ್ ಉದ್ಘಾಟಿಸಲಿದ್ದು ಜಿಲ್ಲಾ ರಕ್ಷಣಾಧಿಕಾರಿ ಎನ್. ಶಿವಪ್ರಸಾದ್ ಮುಂತಾದವರು ಭಾಗವಹಿಸಲಿದ್ದಾರೆ. ಕ್ರೀಡಾಕೂಟದ ಸಮಾರೋಪ ಸಮಾರಂಭ ಡಿ.29 ರಂದು ಸಂಜೆ 4 ಗಂಟೆಗೆ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಕೇಂದ್ರ ವಲಯದ ಪೊಲೀಸ್ ಮಹಾನಿರೀಕ್ಷಕ ಅಮರ್ ಕುಮಾರ್ ಪಾಂಡೆ ಭಾಗವಹಿಸಲಿದ್ದಾರೆ.
ಜಿಲ್ಲಾ ಮಟ್ಟದ ವಿಚಾರ ಸಂಕಿರಣ
ಚಿಕ್ಕಬಳ್ಳಾಪುರ: ನಗರದ ಪೂರ್ಣಪ್ರಜ್ಞ ಎಜುಕೇಷನಲ್ ಇನ್ಸ್ಟ್ಯೂಷನ್ ಆವರಣದಲ್ಲಿ ಡಿ.30 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಮಟ್ಟದ ವಿಚಾರ ಸಂಕಿರಣ ಮತ್ತು ಕವಿಗೋಷ್ಠಿ ಆಯೋಜಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸೆವೆನ್ ಸ್ಟಾರ್ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ, ಪೂರ್ಣಪ್ರಜ್ಞ ಎಜುಕೇಷನಲ್ ಇನ್ಸ್ಟ್ಯೂಷನ್ ಆಶ್ರಯದಲ್ಲಿ ನಡೆಯಲಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕಿ ಡಾ.ಕೆ.ಎನ್. ಕವನ ನೆರವೇರಿಸಲಿದ್ದು ಅಧ್ಯಕ್ಷತೆಯನ್ನು ಪೂರ್ಣಪ್ರಜ್ಞ ಎಜುಕೇಷನಲ್ ಇನ್ಸಿಟಿಟ್ಯೂಷನ್ ಛೇರ್ಮೆನ್ ಎನ್. ವೆಂಕಟೇಶ್ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಿವಪ್ರಸಾದ್, ಕೋಲಾರ ಜಿಲ್ಲೆಯ ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸಿ.ಎಂ. ರಂಗಾರೆಡ್ಡಿ, ಚಿಂತಾಮಣಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಕಾಗತಿ ವಿ. ವೆಂಕಟರತ್ನಂ ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

