ಮೂಲ ಸೌಕರ್ಯಗಳಿಗೆ ಒತ್ತಾಯಿಸಿ ಧರಣಿ
ಕೋಲಾರ: ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ವಿಶೇಷ ಘಟಕ ಯೋಜನೆಗಳ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ದಲಿತ ವಿದ್ಯಾರ್ಥಿಗಳ ಹಾಸ್ಟೆಲ್ಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು, ಸಮಾಜ ಕಲ್ಯಾಣ ಇಲಾಖೆಯಿಂದ ಜಾರಿಯಲ್ಲಿದ್ದ ವೃತ್ತಿ ಶಿಕ್ಷಣ ತರಬೇತಿ, ಕೌಶಲ್ಯ ತರಬೇತಿಯನ್ನು ಮುಂದುವರೆಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನಗರದಲ್ಲಿ ಕರ್ನಾಟಕ ಸಮತಾ ಸೈನಿಕ ದಳದಿಂದ ಗುರುವಾರ ಪ್ರತಿಭಟನೆ ನಡೆಯಿತು.
ನಗರದ ಪ್ರವಾಸಿ ಮಂದಿರದಿಂದ ಕಾರ್ಯಕರ್ತರು ಮೆರವಣಿಗೆಯಲ್ಲಿ ಸಾಗಿ ಬಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿ ಬೇಡಿಕೆ ಈಡೇರಿಸಲು ಆಗ್ರಹಿಸಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ದಲಿತರಿಗೆ ಅನ್ಯಾಯವೆಸಗಿ ಸುಮಾರು 14 ಕೋಟಿ ರು.ಗಳನ್ನು ದುರುಪಯೋಗ ಮಾಡಿಕೊಂಡಿರುವ ಈ ಹಿಂದಿನ ಜೆಡಿ ವೆಂಕಟೇಶಪ್ಪ ಹಾಗೂ ಹಾಲಿ ಸಹಾಯಕ ನಿರ್ದೇಶಕರಾಗಿರುವ ರವಿಚಂದ್ರ ಅವರನ್ನು ತನಿಖೆಗೆ ಒಳಪಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಕೋಲಾರದ ಟಮಕದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಹಾಗೂ ಭವನ ನಿರ್ಮಾಣಕ್ಕೆ ನಗರಸಭೆಯಿಂದ 10 ಲಕ್ಷ ರು. ಮಂಜೂರಾಗಿತ್ತಾದರೂ ಜಾಗವಿಲ್ಲದೆ ಕಾಮಗಾರಿ ನಡೆದಿಲ್ಲ. ಜಿಲ್ಲಾಧಿಕಾರಿಗಳು ಕನಿಷ್ಠ 1 ಎಕರೆ ಭೂಮಿ ಮಂಜೂರು ಮಾಡಿ ಬೇಡಿಕೆ ಈಡೇರಿಸಬೇಕೆಂದು ಸಮತಾ ಸೈನಿಕ ದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಂಡಿತ್ ಮುನಿವೆಂಕಟಪ್ಪ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕೆಎಸ್ಎಸ್ಡಿಯ ರಾಜ್ಯಾಧ್ಯಕ್ಷ ಬಿ. ಚನ್ನಕೃಷ್ಣಪ್ಪ, ಜಿಲ್ಲಾಧ್ಯಕ್ಷ ಎನ್. ನಾರಾಯಣಪ್ಪ, ಮಹಿಳಾ ಘಟಕದ ಕಮಲಮ್ಮ, ಮಾಲೂರು ನಾರಾಯಣಸ್ವಾಮಿ, ವಿಭೂತಿಪುರದ ವೆಂಕಟಸ್ವಾಮಿ, ಈರಪ್ಪ, ಶಿವಣ್ಣ ಇನ್ನಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

