ಸೆಮಿಸ್ಟರ್ ವಿರೋಧಿಸಿ ಪ್ರತಿಭಟನೆ
ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಹೊಸದಾಗಿ ಕುಶಲಕರ್ಮಿ ತರಬೇತಿ ಶಿಕ್ಷಣದಲ್ಲಿ ಸೆಮಿಸ್ಟರ್ ಪದ್ಧತಿ ಜಾರಿಗೆ ತರುತ್ತಿರುವುದನ್ನು ವಿರೋಧಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ನಗರದ ಬಿ.ಬಿ. ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ಹೊರಟು ಉಪ ವಿಭಾಗಾಧಿಕಾರಿಗಳ ಕಚೇರಿ ಬಳಿ ಧರಣಿ ಕುಳಿತ ವಿದ್ಯಾರ್ಥಿಗಳು ಹೊಸದಾಗಿ ಕುಶಲಕರ್ಮಿ ತರಬೇತಿ ಶಿಕ್ಷಣದಲ್ಲಿ ಜಾರಿಗೆ ತರಲು ಮುಂದಾಗಿರುವ ಸೆಮಿಸ್ಟರ್ ಪದ್ಧತಿಯನ್ನು ಕೈ ಬಿಡಬೇಕೆಂದು ಆಗ್ರಹಿಸಿ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿದರು.
ಎಬಿವಿಪಿ ಸಂಘಟನೆಯ ಜಿಲ್ಲಾ ಸಂಚಾಲಕ ಮಂಜುನಾಥ್ ಮಾತನಾಡಿ, ಅವೈಜ್ಞಾನಿಕ ಸೆಮಿಸ್ಟರ್ ಪದ್ಧತಿಯಲ್ಲಿ 6 ತಿಂಗಳಿಗೂಮ್ಮೆ ಪರೀಕ್ಷೆ ನಡೆಸುವುದರಿಂದ ಪಠ್ಯಪುಸ್ತಕಗಳನ್ನು ಕಡಿಮೆ ಅವಧಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಅಭ್ಯಾಸ ಮಾಡಲು ಸಾಧ್ಯವಾಗುವುದಿಲ್ಲ. ಇದರಿಂದ ಬಡ ವಿದ್ಯಾರ್ಥಿಗಳು ಹೆಚ್ಚಿಗೆ ಅನುತ್ತೀರ್ಣರಾಗಿ ತೊಂದರೆಯನ್ನು ಅನುಭವಸಲಿದ್ದು ಹೊಸ ಪಠ್ಯ ವಿಷಯಗಳನ್ನು ವ್ಯಾಸಂಗ ಮಾಡಲು ಇನ್ನೂ ಎರಡು ವರ್ಷಗಳ ಕಾಲಬೇಕು,ಇನ್ನೂ ತರಬೇತಿ ನೀಡುವವರಿಗೆ (ಎಂಪ್ಲಾಮೆಂಟ್ ಸ್ಕಿಲ್) ಸರಿಯಾದ ಮಾಹಿತಿ ಇಲ್ಲ. ಈ ಹಿಂದೆ ಎನ್.ಸಿ.ವಿ.ಟಿ ಯ 39ನೇ ಸಭೆಯ ಸೆಮಿಸ್ಟರ್ ಪದ್ಧತಿ ಜಾರಿಗೊಳಿಸಲು ನಿರ್ಧರಿಸಿದ್ದರೂ ಪಠ್ಯ ಕ್ರಮ, ಪರೀಕ್ಷಾ ವಿದಾನ, ತರಬೇತಿಗೆ ಅಗತ್ಯವಾದ ಪರಿಕರಗಳ ಹಾಗೂ ಇತರೆ ಸಂಪನ್ಮೂಲಗಳು ವಿವಾದಾತ್ಮಕವಾಗಿ ಉಳಿದಿವೆ. ಈ ಹಿನ್ನೆಲೆಯಲ್ಲಿ ತಕ್ಷಣ ಸೆಮಿಸ್ಟರ್ ಪದ್ಧತಿಯನ್ನು ಜಾರಿಗೆ ತರುವುದನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಎಬಿವಿಪಿಯ ನಗರ ಕಾರ್ಯದರ್ಶಿ ಅರುಣ್ ಕುಮಾರ್, ಶಿವ, ಸುನಿಲಾ, ಐಟಿಐ ವಿದ್ಯಾರ್ಥಿಗಳಾದ ಹರೀಶ್, ಮಧು, ರಮೇಶ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

