ಕೋಲಾರ

ಬೀದಿನಾಯಿ ಹಿಡಿಯುವ ಕಾರ್ಯಾಚರಣೆ ಶುರು

Published On :

ಗೌರಿಬಿದನೂರು: ಪಟ್ಟಣದಲ್ಲಿ ಬೀದಿನಾಯಿಗಳ ಕಾಟದಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದ್ದು, ಸಾರ್ವಜನಿಕರಿಂದ ಬಂದ ವ್ಯಾಪಕ ದೂರು ಹಾಗೂ ಪುರಸಭಾ ಸದಸ್ಯರ ಸರ್ವಾನುಮತದ ತೀರ್ಮಾನದಂತೆ ಗುರುವಾರ ಬೀದಿನಾಯಿಗಳನ್ನು ಹಿಡಿಯುವ ಕಾರ್ಯಾಚರಣೆಯನ್ನು ಪುರಸಭೆ ನಡೆಸಿತು.
ಪರಿಸರ ಅಭಿಯಂತರ ತಿಮ್ಮರಾಜು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸುಮಾರು 112 ನಾಯಿಗಳನ್ನು ಜೀವಂತವಾಗಿ ಹಿಡಿದು ತುಮಕೂರಿನ ದೇವರಾಯನದುರ್ಗ ಬೆಟ್ಟಕ್ಕೆ ಕಳುಹಿಸಲಾಯಿತು ಎಂದು ಅಭಿಯಂತರ ತಿಮ್ಮರಾಜು ತಿಳಿಸಿದ್ದಾರೆ.
ಮೂಕಪ್ರಾಣಿಗಳನ್ನು ಕೊಲ್ಲಬಾರದು ಎಂಬ ಕಾರಣಕ್ಕೆ ತಮಿಳು ನಾಡಿನ ನಾಯಿಗಳನ್ನು ಹಿಡಿಯುವ ಏಜೆನ್ಸಿಯೊಂದಕ್ಕೆ ವಹಿಸಲಾಗಿತ್ತು.
ನಾಯಿಗಳನ್ನು ಜೀವಂತವಾಗಿ ಹಿಡಿದು ಕಾಡಿಗೆ ಬಿಡುವ ಯೋಜನೆಗೆ ಪುರಸಭಾ ಸದಸ್ಯರ ಒಪ್ಪಿಗೆ ಹಾಗೂ ಉಪವಿಭಾಗಾಧಿಕಾರಿಗಳಿಂದ ಅನುಮೋದನೆ ಪಡೆಯಲಾಗಿದ್ದು, ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಪಟ್ಟಣದ ಎಲ್ಲಾ ಬಡಾವಣೆಗಳಲ್ಲಿಯೂ ಪೂರ್ಣಗೊಳಿಸವಾಗುವುದು ಎಂದು ಅವರು ತಿಳಿಸಿದರು. ಕಾರ್ಯಾಚರಣೆಯ ನೇತೃತ್ವವನ್ನು ಮುಖ್ಯಾಧಿಕಾರಿ ಹನುಮಂತೇಗೌಡ, ತಿಮ್ಮರಾಜು ಮತ್ತು ಸಿಬ್ಬಂದಿ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.