ಕೋಲಾರ

ಶಾಸಕರಿಂದ ಅಧಿಕಾರಿಗಳ ತರಾಟೆ

Published On :

ಗೌರಿಬಿದನೂರು: ಮುಂಬರುವ ಬೇಸಿಗೆ ವೇಳೆಗೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಲಿದ್ದು ಅಧಿಕಾರಗಳು ಎಚ್ಚರ ವಹಿಸಬೇಕೆಂದು ವಿಧಾನ ಸಭಾ ಉಪಾಧ್ಯಕ್ಷ ಎನ್.ಎಚ್. ಶಿವಶಂಕರರೆಡ್ಡಿ ಆದೇಶ ನೀಡಿದರು.
ಪಟ್ಟಣದ ತಾಪಂ ಆವರಣದಲ್ಲಿರುವ ಸಾಮಾರ್ಥ್ಯ ಸೌಧದಲ್ಲಿ ಕರೆದಿದ್ದ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಎಲ್ಲಾ ಅಧಿಕಾರಿಗಳು ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಕೊರತೆ ಇರದೆ ಹೊಸ ಪೈಪುಗಳನ್ನು ಅಳವಡಿಸಬೇಕು. ಗ್ರಾಮಾಂತರ ಪ್ರದೇಶಗಳಲ್ಲಿ ರಸ್ತೆ ಮತ್ತು ಕುಡಿಯುವ ನೀರಿಗೆ ಆಧ್ಯತೆ ನೀಡಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದರು.
ಜನವರಿ ಅಂತ್ಯದಲ್ಲಿ ಮುಖ್ಯಮಂತ್ರಿಗಳ ವಿವಿಧ ಉದ್ಘಾಟನಾ ಕಾರ್ಯಕ್ರಮಗಳು ಹಮ್ಮಿಕೊಂಡಿದ್ದು ಈ ದಿಸೆಯಲ್ಲಿ ಎಲ್ಲಾ ಆಧಿಕಾರ ವರ್ಗದವರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿ ಅಭಿವೃದ್ಧಿಗೆ ಕೈ ಜೊಡಿಸಬೇಕೆಂದು ಮನವಿ ಮಾಡಿದರು.  ಸಭೆಯಲ್ಲಿ ಅಧಿಕಾರಿಗಳ ಕಾರ್ಯ ವೈಖರಿ ಬಗ್ಗೆ ಶಾಸಕರು ತೀರ್ವ ಅಸಮಧಾನ ವ್ಯಕ್ತ ಪಡಿಸಿದರು. ಪಂಚಾಯ್ತಿ ಸದಸ್ಯ ಪ್ರಭಾ ನಾರಾಯಣಗೌಡ ಹಾಗೂ ಪ್ರಕಾಶ್ ರೆಡ್ಡಿ, ಮಂಚೇನಹಳ್ಳಿ ವ್ಯಾಪ್ತಿಯ ಮುಖ್ಯ ಎಂಜಿನಿಯರ್ ವಿಶ್ವನಾಥ್ ನೀರಿನ ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ದೂರು ನೀಡಿದರು. ಇದರಿಂದ ಶಾಸಕರು ಅಧಿಕಾರಿ ವಿರುದ್ದ ಕಿಡಿಕಾರಿದರು ಹಾಗೂ ಪಿಡಿಒಗಳು ಪಂಚಾಯ್ತಿ ವ್ಯಾಪ್ತಿಯಲ್ಲಿ ಇರದೆ ಸಭೆಗಳಲ್ಲಿ ಕಾಲಕಳೆಯುತ್ತಾರೆ. ಇದು ನನ್ನ ಗಮನಕ್ಕೆ ಬಂದಿದ್ದು ಬೇಸಿಗೆ ಮುಗಿಯವವರೆಗೂ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸಬೇಕೆಂದು ಎಚ್ಚರಿಕೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸುತ್ತಿರುವ ವಿಧ್ಯಾರ್ಥಿನಿಲಯದಲ್ಲಿ ಅನಮದೇಯ ವ್ಯಕ್ತಿಗಳು ಹೆಚ್ಚಿದ್ದು ಈಬಗ್ಗೆ ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗೆ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.