ಮಹಿಳೆಯರಿಗೆ ಸ್ವಾವಲಂಬಿಗಳಾಗಲು ಕರೆ
ಚಿಂತಾಮಣಿ: ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ನಡೆಸಲು ವಿವಿಧ ತರಬೇತಿ ಪಡೆದು ಸಮಾಜದಲ್ಲಿ ಎಲ್ಲರಂತೆ ಸ್ವತಂತ್ರವಾಗಿ ಬಾಳಬೇಕೆಂದು ತಾಪಂ ಅಧ್ಯಕ್ಷೆ ಗೌರಮ್ಮ ನಾಗೇಶ್ ಕರೆ ನೀಡಿದರು.
ತಾಲೂಕಿನ ಮುರುಗಮಲೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಶನಿವಾರ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ, ತಾಪಂ ಹಾಗೂ ಗ್ರಾಮೀಣ ಸಂಪನ್ಮೂಲ ಅಭಿವೃದ್ಧಿ ಸಂಸ್ಥೆ ಸಂಯುಕ್ತಾಶ್ರಯದಲ್ಲಿ 2013-14ನೇ ಸಾಲಿನ ಸಾಮಾನ್ಯ ವರ್ಗದ ನವ ಸಾಕ್ಷರರ ವಿವಿಧ ವೃತ್ತಿ ಕೌಶಲ್ಯ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮಾಂತರ ಪ್ರದೇಶದಲ್ಲಿನ ಮಹಿಳೆಯರು ಇಂದಿನ ಆಧುನಿಕ ಯುಗದಲ್ಲಿ ಅಡಿಗೆ ಕೋಣೆಗೆ ಸೀಮಿತವಾಗದಂತೆ ಸರ್ಕಾರದಿಂದ ಸಿಗುವ ಸವಲತ್ತನ್ನು ಉಪಯೋಗಿಸಿಕೊಂಡು ಹೊಲಿಗೆ ಯಂತ್ರ ತರಬೇತಿ ಪಡೆದು ಸಮಾಜದಲ್ಲಿ ಸಾಮಾಜಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಕರೆ ನೀಡಿದರು.
ನಂತರ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಶಿವಲಿಂಗಯ್ಯ ಮಾತನಾಡಿ, ಎಲ್ಲ ರಂಗಗಳಲ್ಲಿಯೂ ಪುರುಷರಿಗಿಂತ ಮಹಿಳೆಯರೇ ಮೇಲುಗೈ ಆಗಿ ತಮ್ಮ ಜವಾಬ್ದಾರಿಯುತವಾದ ಸ್ಥಾನಗಳನ್ನು ನಿಭಾಯಿಸಿ ಸಮಾಜದಲ್ಲಿ ಮಾದರಿ ಮಹಿಳೆಯರಾಗಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣ ಅಧಿಕಾರಿ ದಸ್ತಗೀರ್ಸಾಬ್, ಗ್ರಾಪಂ ಉಪಾಧ್ಯಕ್ಷೆ ಷಾಕೀರಾಬಿ, ಸಾಕ್ಷರತಾ ಸಂಯೋಜಕ ಗಂಗುಲಪ್ಪ, ಸಂಸ್ಥೆಯ ಅಧ್ಯಕ್ಷ ಮುದ್ದುಕೃಷ್ಣ ಯಾದವ್, ವಕೀಲರಾದ ಶ್ರೀರಾಮ್, ವೆಂಕಟಸ್ವಾಮಿ, ಶ್ರೀರಾಮರೆಡ್ಡಿ, ಶ್ರೀರಾಮಪ್ಪ ಸೇರಿದಂತೆ ಇನ್ನೂ ಹಲವಾರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

