ಕೋಲಾರ

ಜನವರಿ ಒಂದರಿಂದ ಶಾಲೆಗೆ ಬೀಗ

Published On :

ಮುಳಬಾಗಲು: ತಾಲೂಕಿನ ಮೂಡಿಯನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 18 ಎಕರೆ 5 ಗುಂಟೆ ಜಮೀನುಗಳನ್ನು ಅಕ್ರಮ ಸಾಗುವಳಿದಾರರಿಂದ ಬಿಡಿಸಿಕೊಡದಲ್ಲಿ ಜನವರಿ 1ರಿಂದ ಶಾಲೆಗೆ ಬೀಗ ಜಡಿಯುವುದಾಗಿ ಶಾಲಾಭಿವೃದ್ಧಿ ಸಂಘದ ಸದಸ್ಯರು ಮುಖ್ಯ ಶಿಕ್ಷಕಿ ಜಿ. ಸರೋಜಮ್ಮನವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಮತ್ತು ತಾಲೂಕು ಆಡಳಿತ ಪಕ್ಷಪಾತ ಮಾಡದೇ ಜಮೀನು ವಾಪಸ್ ಕೊಡಿಸಬೇಕು ಎಂದು ಒತ್ತಾಯಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿ.ನರಸಿಂಹಮೂರ್ತಿ, ಗ್ರಾಪಂ ಸದಸ್ಯ ಶಂಕರಾಚಾರಿ, ಎಂ.ವಿ. ಕೃಷ್ಣಮೂರ್ತಿ, ಎನ್.ಡಿ. ಸುಬ್ಬಯ್ಯ, ವೆಂಕಟರಾಮಪ್ಪ, ಎಂ. ರಾಮಕೃಷ್ಣಪ್ಪ, ಡಿ.ಎಂ. ಮಂಜುನಾಥ್, ಜಿ. ಗೋಪಾಲಕೃಷ್ಣ, ಎಂ. ಶ್ರೀನಿವಾಸ್, ಎಂ. ನಾರಾಯಣಸ್ವಾಮಿ, ಜಗದೀಶ್ ಇದ್ದರು.





ಇಂದು ಪ್ರತಿಭಟನೆ
ಚಿಂತಾಮಣಿ: ಸಾರ್ವಜನಿಕರ ಕುಂದು ಕೊರತೆಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ತೋರುತ್ತಿರುವ ಜಿಲ್ಲಾಡಳಿತದ ಕಾರ್ಯವೈಖರಿ ವಿರುದ್ಧ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ 30 ರಂದು ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ನೇತೃತ್ವದಲ್ಲಿ ಜೆಡಿಎಸ್ನಿಂದ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ತಾಲೂಕು ಜೆಡಿಎಸ್ ಉಪಾಧ್ಯಕ್ಷ ದಿನ್ನಮಿಂದಹಳ್ಳಿ ಬೈರಾರೆಡ್ಡಿ ತಿಳಿಸಿದ್ದಾರೆ.
ವೈದ್ಯಕೀಯ ಉಚಿತ ತಪಾಸಣಾ ಶಿಬಿರ
ಶಿಡ್ಲಘಟ್ಟ: ಉಚಿತ ವೈದ್ಯಕೀಯ ತಪಾಸಣೆಗಳನ್ನು ರೇಷ್ಮೆಯಿಂದಲೇ ಜೀವನ ನಡೆಸುತ್ತಿರುವ ಪಟ್ಟಣದ ಜನತೆ ಸದುಪಯೋಗಪಡಿಸಿಕೊಳ್ಳಬೇಕು ಎಂದು ಪಟ್ಟಣದ ಮಾನಸ ಆಸ್ಪತ್ರೆಯ ವೈದ್ಯ ಡಾ. ನರಸಾರೆಡ್ಡಿ ಹೇಳಿದರು.ಪಟ್ಟಣದ ಸಿದ್ದಾರ್ಥನಗರದ ಮಾನಸ ಆಸ್ಪತ್ರೆಯಲ್ಲಿ ಭಾನುವಾರ ಏರ್ಪಡಿಸಿದ್ದ ವೈದ್ಯಕೀಯ ಉಚಿತ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಪಟ್ಟಣದಲ್ಲಿ ಖಾಸಗಿ ಮಾನಸ ಆಸ್ಪತೆಯನ್ನು ಪ್ರಾರಂಭ ಮಾಡಲಾಗಿದ್ದು, ಇಲ್ಲಿ ತಿಂಗಳಿಗೊಮ್ಮೆ ಉಚಿತ ವೈದ್ಯಕೀಯ ಶಿಬಿರಗಳ ಮುಖಾಂತರ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುತ್ತದೆ ಇದನ್ನು ತಾಲೂಕಿನ ಜನತೆ ಸುಪಯೋಗಪಡಿಸಿಕೊಳ್ಳಬೇಕು ಎಂದರು. ಶಿಬಿರದಲ್ಲಿ ಅನೇಕ ತಜ್ಞರು ರೋಗಿಗಳನ್ನು ಪರೀಕ್ಷಿಸಿ ಚಿಕಿತ್ಸೆ ನೀಡಿದರು.
ಗೃಹ ರಕ್ಷಕರ ಸೇವೆ ಶ್ಲಾಘನೀಯ
ಚಿಕ್ಕಬಳ್ಳಾಪುರ: ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಗೆ ಸಹಕಾರಿಯಾಗಿ ಗೃಹ ರಕ್ಷಕರು ಸರ್ಮಪಕ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಎಸ್.ಡಿ. ಅಶೋಕ್ ಬಾಬು ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಹೊರವಲಯದ ಸಿವಿವಿ ಕ್ಯಾಂಪಸ್ ಕೆ.ವಿ.ದೈಹಿಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ ಏರ್ಪಡಿಸಿದ್ದ ಅಖಿಲ ಭಾರತ ಗೃಹರಕ್ಷಕದಳದ ದಿನಾಚರಣೆ-2003 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗೃಹ ರಕ್ಷಕ ದಳ ಅಭಿವೃದ್ಧಿ ಹೊಂದುತ್ತ ದೇಶವನ್ನು ರಕ್ಷಿಸುವ ಒಂದು ಶಕ್ತಿಯಾಗಿ ಬೆಳೆಯುತ್ತಿದೆ ಎಂದರು. ಕೆ.ವಿ. ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಜಿ. ಅಶ್ವತ್ಥಪ್ಪ ಮಾತನಾಡಿ, ಗೃಹ ರಕ್ಷಕರು ಶಿಸ್ತು, ಸಂಯಮವನ್ನು ಮೈಗೂಡಿಸಿಕೊಂಡು ಉತ್ತಮವಾಗಿ ಕಾರ್ಯ ನಿರ್ವಹಿಸಬೇಕು ಎಂದರು.  ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಠ ಆರ್. ವೆಂಕಟೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, 1946 ರಲ್ಲಿ ಪ್ರಾರಂಭವಾದ ಗೃಹರಕ್ಷಕ ಸಂಸ್ಥೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿ ಪೊಲೀಸರಿಗೆ ನೆರವು ನೀಡುತ್ತಾ ಬಂದಿದೆ ಎಂದರು. ಎನ್. ನರಸಿಂಹಯ್ಯ ಗೃಹರಕ್ಷಕರಿಗೆ ಪ್ರಮಾಣವಚನ ಬೋಧಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.