ಕೋಲಾರ

ನಾಳೆ ಪ್ರತಿಭಾ ಕಾರಂಜಿ ಕಾರ್ಯಕ್ರಮ

Published On :

ಚಿಕ್ಕಬಳ್ಳಾಪುರ: ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಡಿ.31 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಮಟ್ಟದ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಾಲಾ ಮಕ್ಕಳ ಏಕರೀತಿಯ ಸಾಂಸ್ಕೃತಿಕ -ಶೈಕ್ಷಣಿಕ ಸ್ಪರ್ಧೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜಿಪಂ, ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನಸಭೆಯ ಉಪಾಧ್ಯಕ್ಷ ಎನ್.ಎಚ್. ಶಿವಶಂಕರರೆಡ್ಡಿ ನೆರವೇರಿಸಲಿದ್ದು ಅಧ್ಯಕ್ಷತೆಯನ್ನು ಶಾಸಕ ಡಾ.ಕೆ. ಸುಧಾಕರ್ ವಹಿಸಲಿದ್ದಾರೆ.  ಕೇಂದ್ರ ಸಚಿವ ಡಾ.ಎಂ. ವೀರಪ್ಪ ಮೊಯಿಲಿ, ಕೆ.ಎಚ್. ಮುನಿಯಪ್ಪ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಜಿಪಂ ಅಧ್ಯಕ್ಷ ಎಸ್.ಎನ್. ಚಿನ್ನಪ್ಪ, ಉಪಾಧ್ಯಕ್ಷ ರಾಘವೇಂದ್ರ ಹನುಮಾನ್, ಶಾಸಕರಾದ ಎಂ. ರಾಜಣ್ಣ, ಎಸ್.ಎನ್. ಸುಬ್ಬಾರೆಡ್ಡಿ, ಎಂ. ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ಎ.ಎಚ್. ಶಿವಯೋಗಿಸ್ವಾವು, ವಿಧಾನ ಪರಿಷತ್ ಸದಸ್ಯರಾದ ವೈ.ಎ. ನಾರಾಯಣಸ್ವಾಮಿ, ನಸೀರ್ ಅಹಮದ್, ಡಿ.ಎಸ್. ವೀರಯ್ಯ, ಜಿಲ್ಲಾಧಿಕಾರಿ ಡಾ.ಆರ್. ವಿಶಾಲ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ್, ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಎನ್. ಶಿವಪ್ರಸಾದ್, ತಾಪಂ ಅಧ್ಯಕ್ಷ ಕೆ. ಕೃಷ್ಣಮೂರ್ತಿ, ಉಪಾಧ್ಯಕ್ಷ ಲಕ್ಷ್ಮಮ್ಮ  ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.