ಕೋಲಾರ

'ಲೋಕಸಭೆ ಚುನಾವಣೆಗೆ ಸಿದ್ಧರಾಗಿ'

Published On :

ಬಂಗಾರಪೇಟೆ: ಮುಂದಿನ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧವಾಗಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸೂಚನೆಯಂತೆ ಪಟ್ಟಣದ ಎಸ್.ಎನ್. ರೆಸಾರ್ಟ್ನಲ್ಲಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ ಕರೆಯಲಾಗಿತ್ತು.
ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರು ಹಾಗೂ ಪದಾಧಿಕಾರಿಗಳು ಮಾತನಾಡಿ, ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಹಿನ್ನಡೆಯಾಗಿದೆ. ಇದಕ್ಕೆ ಕೆಲವು ಮುಖಂಡರ ಧೋರಣೆ ಕಾರಣವಾಗಿದ್ದು, ಪಕ್ಷದ ಭಿನ್ನಮತ ಹೊರಗೆ ತಂದು ಪಕ್ಷದ ಮಾನ ಹರಾಜು ಹಾಕಬೇಡಿ ಎಂದು ಸಲಹೆ ನೀಡಿದರು.
ಚುನಾವಣೆ ವೇಳೆ ಮಾತ್ರ ಪಕ್ಷದ ಕಾರ್ಯಕರ್ತರು ನೆನಪಿಗೆ ಬರುವುದು ಎಷ್ಟರ ಮಟ್ಟಿಗೆ ಸರಿ. ಜಿಲ್ಲೆಯಲ್ಲಿ ಮೂರು ಮಂದಿ ಪಕ್ಷದ ಶಾಸಕರಿದ್ದಾರೆ. ಅವರು ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಹಿತವಚನ ನೀಡಿದರು. ನಂತರ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್, ಶ್ರೀನಿವಾಸಪುರ ಶಾಸಕ ರಮೇಶ್ ಕುಮಾರ್, ವಿಧಾನಪರಿಷತ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ಕಾಂಗ್ರೆಸ್ ತ್ಯಾಗ ಬಲಿದಾನಗಳ ಪಕ್ಷವಾಗಿದ್ದು ಇದಕ್ಕೆ ಇತಿಹಾಸವಿದೆ. ಕೇಂದ್ರದಲ್ಲಿ ಹತ್ತು ವರ್ಷಗಳಿಂದ ಮಾಡಿರುವ ಜನಪರ ಯೋಜನೆಗಳು ಹಾಗೂ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಕೈಗೊಂಡಿರುವ ಜನಪರ ಆಡಳಿತದ ಬಗ್ಗೆ ಕಾರ್ಯಕರ್ತರು ಗ್ರಾಮಗಳಲ್ಲಿ ಮತದಾರರಿಗೆ ಮನ ಮುಟ್ಟುವಂತೆ ವಿವರಿಸಿದಾಗ ಪಕ್ಷ ಮತ್ತೊಮ್ಮೆ ಕೇಂದ್ರದಲ್ಲಿ ಆಡಳಿತ ನಡೆಸಲು ಸಾಧ್ಯ, ಗ್ರಾಮ ಮಟ್ಟದಲ್ಲಿ ರಚನೆ ಮಾಡಿರುವ ಕಾರ್ಯಕರ್ತರು ಈಗನಿಂದಲೇ ಗ್ರಾಮಗಳಲ್ಲಿ ಯುವಕರನ್ನು ಬೇರೆ ಪಕ್ಷಗಳತ್ತ ವಾಲದಂತೆ ಅವರ ಮನ ಪರಿವರ್ತಿಸಬೇಕು, ರಾಜ್ಯದಲ್ಲಿ ಬಿಜೆಪಿ ಅಲೆ ಇಲ್ಲ ಮೋದಿ ಅವರನ್ನು ತೋರಿಸಿಕೊಂಡು ಬಿಜೆಪಿ ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಹಗಲು ಕನಸು ಕಾಣುತ್ತಿದೆ ಇದು ಕನಸಾಗೇ ಉಳಿಯಳಿದೆ ಎಂದು ಟೀಕಿಸಿದರು. ಸಭೆಯಲ್ಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಕೆ. ಚಂದ್ರಾರೆಡ್ಡಿ, ಶಂಷದ್ದಿನ್ ಬಾಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥಗೌಡ, ಜನ್ನಘಟ್ಟ ವೆಂಕಟಮುನಿಯಪ್ಪ, ಗೋಪಾಲಗೌಡ, ಕಮಲಮ್ಮ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.