ಕೋಲಾರ

ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ಘೋಷಣೆಯಾಗಲಿ

Published On :

ಕೋಲಾರ: ಬಿಜೆಪಿ ನಾಯಕರು ಈಗಾಗಲೇ ಪ್ರಧಾನಿ ಅಭ್ಯರ್ಥಿಯನ್ನಾಗಿ ನರೇಂದ್ರ ಮೋದಿಯವರನ್ನು ಆಯ್ಕೆ ಮಾಡಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಆದಷ್ಟು ಬೇಗನೆ ಪ್ರಧಾನಿ ಅಭ್ಯರ್ಥಿಯನ್ನು ಘೋಷಣೆ ಮಾಡುವ ಮೂಲಕ ಕಾರ್ಯಕರ್ತರು ಮತ್ತು ಮತದಾರರಲ್ಲಿ ಇರುವ ಗೊಂದಲ ನಿವಾರಿಸಬೇಕೆಂದು ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ತಿಳಿಸಿದರು.
ನಗರ ಕಾಂಗ್ರೆಸ್ ಘಟಕದ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವಂತೆ ಒತ್ತಾಯಿಸುವ ನಿರ್ಣಯ ಕೈಗೊಂಡು ಹೈಕಮಾಂಡ್ಗೆ ಕಳುಹಿಸುವಂತೆ ಕಾಂಗ್ರೆಸ್ ನಗರ ಘಟಕ ಹಾಗೂ ಜಿಲ್ಲಾ ಕಾಂಗ್ರೆಸ್ ಮುಖಂಡರಿಗೆ ಸಲಹೆ ನೀಡಿದರು. ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದಲ್ಲಿ ಕೋಲಾರ ಜಿಲ್ಲೆಯಲ್ಲಿ ಪಕ್ಷ ಇನ್ನಷ್ಟು ಸಂಘಟನೆ ಆಗಬೇಕಾಗಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಮುಖಂಡರು ಜಿಲ್ಲಾ ಪ್ರವಾಸ ಕೈಗೊಂಡು ಪಕ್ಷ ಸಂಘಟನೆ ಮಾಡಬೇಕೆಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಅನಿಲ್ ಕುಮಾರ್ ಮಾತನಾಡಿ, ಪ್ರತಿ ತಿಂಗಳು ಕಡ್ಡಾಯವಾಗಿ ಪಕ್ಷದ ವಿವಿಧ ಘಟಕಗಳ ಕಾರ್ಯಕಾರಿಣಿ ಸಭೆ ನಡೆಯಬೇಕು. ಸಭೆಯ ನಡಾವಳಿಗಳನ್ನು ತಮಗೆ ಕಳುಹಿಸಿದಲ್ಲಿ ಕೆಪಿಸಿಸಿಗೆ ಕಳುಹಿಸುವುದಾಗಿ ತಿಳಿಸಿದರು. ಸಭೆಯಲ್ಲಿ ಮಾಜಿ ಸಚಿವ ಕೆ.ಎ. ನಿಸಾರ್ ಅಹಮದ್, ಜಿಪಂ ಮಾಜಿ ಅಧ್ಯಕ್ಷ ವಿ. ವೆಂಕಟಮುನಿಯಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಡಿಸಿಸಿ ಪ್ರಧಾನ ಕಾರ್ಯದರ್ಶಿ ವೈ. ಶಿವಕುಮಾರ್, ನಗರಸಭೆ ಮಾಜಿ ಅಧ್ಯಕ್ಷ ಅತ್ತಾವುಲ್ಲಾ ಖಾನ್,  ಡಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಹಮದ್ ಇಕ್ಬಾಲ್,  ಕೆಪಿಸಿಸಿ ಎಸ್ಸಿ ವಿಭಾಗದ ಸಂಚಾಲ ಬೆಳಗಾನಹಳ್ಳಿ ವಿ. ಮುನಿವೆಂಕಟಪ್ಪ, ಕೆಪಿಸಿಸಿ ಎಸ್ಸಿ ವಿಭಾಗದ ಅಧ್ಯಕ್ಷ ಆರ್. ಅಶ್ವತ್ಥನಾರಾಯಣ, ಡಿಸಿಸಿ ಎಸ್ಟಿ ಅಧ್ಯಕ್ಷ ನಾಗರಾಜ್, ಕೆಪಿಸಿಸಿ ಎಸ್ಸಿ  ಘಟಕದ ಸದಸ್ಯ ಕೆ. ಜಯದೇವ್, ಷಫೀ ಅಹಮದ್, ಬ್ಲಾಕ್ ಕಾಂಗ್ರೆಸ್ ಖಜಾಂಚಿ ಮಹಮದ್ ಪ್ಯಾರೇಜಾನ್, ಹಿಂದುಳಿದ ವರ್ಗಗಳ ಅಧ್ಯಕ್ಷ ಮಣಿ, ನಗರಸಭೆ ಸದಸ್ಯ ರಮೇಶ್,  ಸಾದಿಕ್ ಪಾಷ, ಬಾಂಬೇ ಅಸ್ಲಂ, ಮಹಮದ್ ಜಾಫರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.