ಮೂಢನಂಬಿಕೆ ಪ್ರತಿಬಂಧಕ ಕಾಯಿದೆಯಿಂದ ಧಕ್ಕೆಯಿಲ್ಲ
ಕೋಲಾರ: ಮೂಢ ನಂಬಿಕೆಗಳನ್ನು ಬಿತ್ತುವ ಮೂಲಕ ಮುಗ್ಧ ಜನರನ್ನು ವಂಚಿಸುತ್ತಿರುವವರಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮೂಢ ನಂಬಿಕೆ ಪ್ರತಿಬಂಧಕ ವಿಧೇಯಕರಿಂದ ಯಾವುದೇ ಕೋಮಿನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗುವುದಿಲ್ಲವೆಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಕೆ.ಎಸ್. ವಿಮಲ ಸ್ಪಷ್ಟಪಡಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಭಾನುವಾರ ಜನವಾದಿ ಮಹಿಳಾ ಸಂಘಟನೆಯಿಂದ ಕಾ. ಸುಶೀಲ್ ಗೋಪಾಲನ್ ನೆನಪಿನಲ್ಲಿ ಹಮ್ಮಿಕೊಂಡಿದ್ದ ಮೂಢ ನಂಬಿಕೆ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ವಿ. ಗೀತಾ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇವರು, ದಿಂಡರು ಹೆಸರಿನಲ್ಲಿ ಜನರನ್ನು ವಂಚಿಸುತ್ತಿರುವ ಜನರೇ ಮೂಢ ನಂಬಿಕೆಗಳನ್ನು ಬಲವಾಗಿ ಬಿತ್ತಿ ಬಡವರನ್ನು ತಮ್ಮ ಕಪಿಮುಷ್ಟಿಯಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನಿಸುತ್ತಿದ್ದಾರೆಂದು ಆರೋಪಿಸಿದರು.
ಸರ್ಕಾರಿ ಮಹಿಳಾ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಡಾ. ಶಿವಪ್ಪ ಅರಿವು, ಕೆಎಸ್ಎಸ್ಡಿ ರಾಜ್ಯಾಧ್ಯಕ್ಷ ಚೆನ್ನಕೃಷ್ಣಪ್ಪ, ಜನವಾದಿ ಮಹಿಳಾ ಸಂಘಟನೆಯ ಖಜಾಂಜಿ ಜ್ಯೋತಿ, ತಾಲೂಕು ಅಧ್ಯಕ್ಷೆ ಆಂಜಮ್ಮ, ಕಾರ್ಯದರ್ಶಿ ಸುಶೀಲ ಇದ್ದರು.
ಶಾಲೆಗೆ ಮೂಲ ಸೌಲಭ್ಯ ನೀಡುವ ಭರವಸೆ
ಚಿಂತಾಮಣಿ: ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಶಾಲೆಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಅನುದಾನ ನೀಡಿ ಶಾಲೆಯ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ತಿಳಿಸಿದರು.
ತಾಲೂಕಿನ ಕೆ. ರಾಗುಟ್ಟಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತಸಿ ಮಾತನಾಡಿ, ಶಾಲೆಯ ಮೂಲ ಸಮಸ್ಯೆಗಳಾದ ಶಾಲಾ ಕಾಂಪೌಂಡ್, ಪ್ರಯೋಗಾಲಯ, ಸಭಾಂಗಣ ಮುಂತಾದ ಸೌಲಭ್ಯಗಳನ್ನು ಕಲ್ಪಿಸುವುದಾಗಿ ಭರವಸೆ ನೀಡಿದರು.
ಕೋಮುಲ್ ನಿರ್ದೇಶಕ ಟಿ.ಎನ್. ರಾಜಗೋಪಾಲ್ ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ಗಳನ್ನು ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಹಸ್ತಾಂತರ ಮಾಡಿದರು. ಜಿಪಂ ಸದಸ್ಯ ಮಂಜುಳ ನರಸಿಂಹಮೂರ್ತಿ, ಡಾ. ಮಾದವ್, ಡಾ. ಹನುಮಂತರಾವ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

