ಜಿಲ್ಲಾಡಳಿತ ಭವನದಲ್ಲಿ ಎಸ್ಬಿಎಂ ಶಾಖೆ ಆರಂಭ
ಚಿಕ್ಕಬಳ್ಳಾಪುರ: ನೂತನ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಮಟ್ಟದ ಕಚೇರಿಗಳು ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಅನುಗುಣವಾಗಿ ಒಂದೊಂದೇ ಸೌಲಭ್ಯಗಳು ದೊರೆಯುವಂತೆ ಮಾಡಲಾಗುತ್ತಿದೆ. ಈಗಾಗಲೇ ಭವನಕ್ಕೆ ಆಗಮಿಸುವ ಜನರಿಗಾಗಿ ಕ್ಯಾಂಟಿನ್ ವ್ಯವಸ್ಥೆಯನ್ನು ಒದಗಿಸಿರುವುದರ ನಡುವೆ ಇದೀಗ ಹಣಕಾಸಿನ ವ್ಯವಹಾರಕ್ಕಾಗಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ನೂತನ ಶಾಖೆಯನ್ನು ಪ್ರಾರಂಭಿಸಲಾಗಿದೆ.
ಭವನದ ಮುಖ್ಯ ದ್ವಾರದ ಎಡಬದಿಯ ಕೊಠಡಿಯೊಂದರಲ್ಲಿ ಪ್ರಾರಂಭವಾಗುತ್ತಿರುವ ಬ್ಯಾಂಕಿನ ನೂತನ ಶಾಖೆಯನ್ನು ಅಪರ ಜಿಲ್ಲಾಧಿಕಾರಿ ಸತ್ಯಭಾಮ ಸೋಮವಾರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಬ್ಯಾಂಕುಗಳು ಸಾರ್ವಜನಿಕರಿಗೆ ಅದರಲೂ ್ಲ ರೈತ ವರ್ಗದವರಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಲು ಶ್ರಮಿಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸರ್ಕಾರಿ ನೌಕರರು ಬ್ಯಾಂಕ್ಗಳಿಂದ ವೈಯಕ್ತಿಕ ಸಾಲವು ಸೇರಿದಂತೆ ಲಭ್ಯವಿರುವ ವಿವಿಧ ಸಾಲಗಳನ್ನು ಪಡೆಯಲು ಅರ್ಜಿ ಸಲ್ಲಿಸಿದಲ್ಲಿ ಆದಷ್ಟು ಶೀಘ್ರವೇ ಸಾಲ ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕೆಂದು ಬ್ಯಾಂಕ್ ಅಧಿಕಾರಿಗಳಿಗೆ ಮನವಿ ಮಾಡಿದರು.
ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ಅಧಿಕಾರಿಗಳ ಸಂಘದ ಅಧ್ಯಕ್ಷ ಸುಕುಮಾರ್ ಹೆಗಡೆ ಮಾತನಾಡಿ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಬ್ಯಾಂಕಿಗೆ ಸುಮಾರು ಒಂದು ನೂರು ವರ್ಷಗಳ ಇತಿಹಾಸವಿದ್ದು, ಈ ದಿನ ಇಲ್ಲಿ ಇದರ 905ನೇ ಶಾಖೆಯು ವಿದ್ಯುಕ್ತವಾಗಿ ಉದ್ಘಾಟನೆಗೊಂಡಿರುವುದು ಸಂತಸದ ವಿಷಯವೆಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಬೆಂಗಳೂರು ವಲಯ-2ರ ಉಪ ಪ್ರಧಾನ ವ್ಯವಸ್ಥಾಪಕಿ ಪಿ. ವಿಜಯಲಕ್ಷಿ, ಕೋಲಾರದ ಸಹಾಯಕ ಪ್ರಧಾನ ವ್ಯವಸ್ಥಾಪಕ ದಾಮೋದರ ಮರ್ಲ, ಹಿರಿಯ ಅಧಿಕಾರಿ ಎಂ.ಕೆ. ರಘುನಾಥ್ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

