ಕೋಲಾರ

ವೃತ್ತಿ ಶಿಕ್ಷಣ ಬಿಕ್ಕಟ್ಟು ನಿವಾರಿಸಿ

Published On :

ಕೋಲಾರ: ರಾಜ್ಯದಲ್ಲಿ ಜಟಿಲವಾಗಿರುವ ವೃತ್ತಿ ಶಿಕ್ಷಣದ ಪ್ರವೇಶ ನೀತಿ ಹಾಗೂ ಶುಲ್ಕ ನಿಗದಿಗೆ ಸಂಬಂಧಿಸಿದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿ ಎಬಿವಿಪಿಯಿಂದ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಧರಣಿ ನಡೆಯಿತು.
ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಬಿವಿಪಿಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮುರಳಿ, ಕಳೆದ ಎರಡು ದಶಕಗಳಿಂದ ವೃತ್ತಿ ಶಿಕ್ಷಣ ಬಿಕ್ಕಟ್ಟು ಹೆಚ್ಚಾಗುತ್ತಿದೆ, ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರ ಕೂಡಲೇ ಶಾಶ್ವತ ಪರಿಹಾರ ಹಾಗೂ ಶಾಸನ ರೂಪಿಸಬೇಕೆಂದು ಒತ್ತಾಯಿಸಿದರು. ಖಾಸಗಿ ಕಾಲೇಜುಗಳಲ್ಲೂ ದುಬಾರಿ ಶುಲ್ಕ ವಸೂಲಿಗೆ ಕಡಿವಾಣ ಹಾಕಬೇಕೆಂದರು. ವೃತ್ತಿ ಶಿಕ್ಷಣದ ಯಾವುದೇ ಸಮಸ್ಯೆಗೆ ಪರಿಹಾರ ನೀಡಲು ಸರ್ಕಾರ ಕೂಡಲೇ ದೂರು ಕೇಂದ್ರವನ್ನು ತೆರೆಯಬೇಕು, ಶೇ.100 ಪ್ರತಿಶತ ಪ್ರವೇಶ ಮತ್ತು ಶುಲ್ಕ ನೀತಿಗಳನ್ನು ಗಮನಿಸಲು ಮೇಲ್ವಿಚಾರಣಾ ಸಮಿತಿಗಳನ್ನು ಮುಂದುವರೆಸಬೇಕೆಂದು ತಿಳಿಸಿದರು. ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ನವೀನ್ ಕುಮಾರ್ ರಾಜ್ ಮನವಿ ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ಎಬಿವಿಪಿ ನಗರ ಕಾರ್ಯದರ್ಶಿ ಹರೀಶ್, ತಾಲೂಕು ಸಂಚಾಲಕ ವಿಜಿ, ತಾಲೂಕು ಪ್ರಮುಖಗೌತಮ್ ಇನ್ನಿತರ ಮುಖಂಡರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.